ರಾಜ್ಯದ ಕರಾವಳಿಯಲ್ಲಿ ಎರಡು ದಿನ ಬಿಸಿಗಾಳಿಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ ಕರಾವಳಿ ಪ್ರದೇಶದ ಒಂದೆಡರು ಪ್ರದೇಶಗಳಲ್ಲಿ ಬಿಸಿ ಗಾಳಿ ಸಂಭವಿಸುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ದಕ್ಷಿಣ ಕೊಂಕಣ, ಗೋವಾ ಮತ್ತು ಕರಾವಳಿ ಕರ್ನಾಟಕದ ಮೇಲೆ ಪ್ರತ್ಯೇಕವಾದ ಪ್ರದೇಶದಲ್ಲಿ ಶಾಖದ ಅಲೆಯ ಪರಿಸ್ಥಿತಿಗಳು ಸಂಭವಿಸುವ ಸಾಧ್ಯತೆಯಿದೆ ಎಂದು ಅದು ಹೇಳಿದೆ.
ಕೊಂಕಣ, ಗೋವಾ ಮತ್ತು ಕರ್ನಾಟಕದ ಕರಾವಳಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಬಿಸಿ ಗಾಳಿ (heatwave) ಪರಿಸ್ಥಿತಿಗಳು ಸಂಭವಿಸುವ ಸಾಧ್ಯತೆಯಿದೆಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಪ್ರತ್ಯೇಕ ಪ್ರದೇಶಗಳಲ್ಲಿ ಮಾರ್ಚ್ 9 ಮತ್ತು 10ರಂದು ಬಿಸಿ ಗಾಳಿ ಉಂಟಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ಹವಾಮಾನ ಇಲಾಖೆ ಸಹ ಗುರುವಾರ ಮಾಹಿತಿ ನೀಡಿದೆ.
ಕಳೆದ ಕೆಲವು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನ ಝಳ ಹೆಚ್ಚಿದೆ. ಈಗ ಬಿಸಿ ಗಾಳಿ ಎಚ್ಚರಿಕೆ ನೀಡಲಾಗಿದೆ.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement