ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಕಾಮಣ್ಣ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನಿರಾಕರಣೆ

ಹುಬ್ಬಳ್ಳಿ: ಮಾರ್ಚ್‌ 12ರಂದು ಪ್ರಧಾನಿ ನರೇಂದ್ರ ಮೋದಿ ಅವರು ಅವಳಿ ನಗರಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಕಾಮಣ್ಣ ಮೂರ್ತಿ ಪ್ರತಿಷ್ಠಾಪನೆ ಹಾಗೂ ಹೋಳಿ ಆಚರಣೆಗೆ ಅವಕಾಶ ನೀಡಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪಾಲಿಕೆ ಆಯುಕ್ತರು ತಿರಸ್ಕರಿಸಿದ್ದಾರೆ.
ಈದ್ಗಾ ಮೈದಾನದಲ್ಲಿ ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆ ಹಾಗೂ ಹೋಳಿ ಆಚರಣೆಗೆ ಅವಕಾಶ ಕೋರಿ ರಾಣಿ ಚನ್ನಮ್ಮಾ ಮೈದಾನ ಗಜಾನನ ಉತ್ಸವ ಮಹಾಮಂಡಳವು ಮಾರ್ಚ್‌ 7 ರಂದು ಪಾಲಿಕೆಗೆ ಅರ್ಜಿ ಸಲ್ಲಿಸಿತ್ತು. ಮೇಯರ್ ಈರೇಶ ಅಂಚಟಗೇರಿ ಈ ಬಗ್ಗೆ ಅರ್ಜಿ ಪರಿಶೀಲಿಸುವಂತೆ ಪಾಲಿಕೆ ಆಯುಕ್ತರಿಗೆ ಸೂಚಿಸಿದ್ದರು. ಆದರೆ ಮಾರ್ಚ್‌ 12ರಂದು ಪ್ರಧಾನಿ ಮೋದಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಗಂಜಾನನ ಮಹಾಂಂಡಳದ ಅರ್ಜಿಯನ್ನು ಪಾಲಿಕೆ ಆಯುಕ್ತರು. ಇದನ್ನು ತಿರಸ್ಕರಿಸುವ ಮೊದಲು ಪಾಲಿಕೆ ಆಯುಕ್ತ ಡಾ.ಗೋಪಾಲಕೃಷ್ಣ ಅವರು ಅವಳಿನಗರ ಪೊಲೀಸ್ ಆಯುಕ್ತರ ಜೊತೆ ಸುದೀರ್ಘ ಚರ್ಚೆ ನಡೆಸಿದ್ದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಪಾಲಿಕೆ ಆಯುಕ್ತ ಡಾ.ಗೋಪಾಲಕೃಷ್ಣ ಅವರು, ಧಾರವಾಡ ಐಐಟಿ ಉದ್ಘಾಟನೆಗೆ ಪ್ರಧಾನಮಂತ್ರಿಗಳು ಆಗಮಿಸುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ಮೊದಲ ಆದ್ಯತೆ ನೀಡಲಾಗಿದ್ದು, ಅಲ್ಲಿ ಭದ್ರತಾ ವ್ಯವಸ್ಥೆಗೆ ಆದ್ಯತೆ ನೀಡಬೇಕಾಗುತ್ತದೆ. ಅಲ್ಲದೆ ಅರ್ಜಿಯನ್ನು ತಡವಾಗಿ ನೀಡಿದ್ದಾರೆ. ಹೀಗಾಗಿ ಅರ್ಜಿಯನ್ನು ಪುರಸ್ಕರಿಸಿಲ್ಲ. ಅರ್ಜಿ ಸಲ್ಲಿಸಿದವರಿಗೆ ಈ ಬಗ್ಗೆ ಮನವರಿಕೆ ಮಾಡಿದ್ದೇವೆ ಎಂದು ತಿಳಿಸಿದರು.
ಮಹಾನಗರ ಪೊಲೀಸ್ ಆಯುಕ್ತರಾದ ರಮಣ ಗುಪ್ತಾ ಮಾತನಾಡಿ, ಬಂದೋಬಸ್ತ್ ಅಥವಾ ವ್ಯವಸ್ಥೆ ಕಲ್ಪಿಸಲು ಕನಿಷ್ಠ 10 ದಿನಗಳು ಬೇಕು. ಮಹಾನಗರದಲ್ಲಿ 472 ಕಾಮಣ್ಣ ಮೂರ್ತಿ ಪ್ರತಿಷ್ಠಾನೆ ಆಗಿವೆ. ಅಲ್ಲಿ ಭದ್ರತೆ ನೀಡಲಾಗಿದೆ. ಇಲ್ಲಿ ಅರ್ಜಿಯನ್ನು ಸಕಾಲದಲ್ಲಿ ನೀಡಿಲ್ಲ. ಅಲ್ಲದೆ ಮುಖ್ಯವಾಘಗಿ ಪ್ರಧಾನ ಮಂತ್ರಿಗಳ ಕಾರ್ಯಕ್ರಮದ ಭದ್ರತೆಗೆ ಮೊದಲ ಆದ್ಯತೆ ನೀಡಬೇಕಿದೆ. ಭದ್ರತೆ ಹಾಗೂ ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ಅನುಮತಿ ನೀಡಿಲ್ಲ ಎಂದರು.
ಆಯುಕ್ತರ ನಿರ್ಧಾರಕ್ಕೆ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಹುಬ್ಬಳ್ಳಿ ರಾಣಿ ಈದ್ಗಾ ಮೈದಾನಕ್ಕೆ ಭಿಗಿ ಭದ್ರತೆ ಒದಗಿಸಲಾಗಿದೆ.

ಪ್ರಮುಖ ಸುದ್ದಿ :-   ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಜಾಹೀರಾತು: ಸಿಎಂ ಸಿದ್ದರಾಮಯ್ಯ, ಡಿಸಿಎಂಗೆ ಡಿಕೆಶಿಗೆ ಸಮನ್ಸ್‌ ಮರು ಜಾರಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement