ನಾಲ್ಕು ದೇಶಗಳ ಪ್ರಾಧಿಕಾರಗಳಿಗೆ ಜನಾರ್ದನ ರೆಡ್ಡಿ ಆಸ್ತಿ ಮಾಹಿತಿ ಒದಗಿಸಲು ಕೋರಿದ ಸಿಬಿಐ ವಿಶೇಷ ನ್ಯಾಯಾಲಯ

ಬೆಂಗಳೂರು: ಕಬ್ಬಿಣ ಅದಿರಿನ ಅಕ್ರಮ ಮಾರಾಟದ ಮೂಲಕ ಗಳಿಸಿರುವ ವ್ಯಾಪಕ ಹಣವನ್ನು ವಿವಿಧ ದೇಶಗಳಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಇರಿಸಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಮಾಹಿತಿ, ದಾಖಲೆಗಳನ್ನು ಪಡೆಯಲು ತನಿಖಾ ಸಂಸ್ಥೆಗೆ ಸಹಾಯ ಮಾಡುವಂತೆ ನಾಲ್ಕು ದೇಶಗಳ ಸಕ್ಷಮ ಪ್ರಾಧಿಕಾರಗಳಿಗೆ ಸಿಬಿಐ ವಿಶೇಷ ನ್ಯಾಯಾಲಯ ಇತ್ತೀಚೆಗೆ ಮನವಿ ಮಾಡಿದೆ.
ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಇ ಚಂದ್ರಕಲಾ ಅವರು ಸ್ವಿಟ್ಜೆರ್ಲ್ಯಾಂಡ್‌, ಸಿಂಗಪುರ, ಯುಎಇ ಮತ್ತು ಐಲ್ ಆಫ್ ಮ್ಯಾನ್ ದೇಶಗಳ ನ್ಯಾಯಾಂಗ ಅಧಿಕಾರಿಗಳಿಗೆ ಪತ್ರದ ಬರೆದು ಮಾಹಿತಿ ಕೋರಿದ್ದಾರೆ.
ಸಿಬಿಐ ಸಲ್ಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಆರ್‌ಪಿಸಿ ಸೆಕ್ಷನ್ 166 (ಎ) ಪ್ರಕಾರ ಮನವಿ ಮಾಡುತ್ತಿದ್ದು, ಈ ಪ್ರಕರಣದಲ್ಲಿ ತನಿಖೆಗೆ ಸಹಕಾರ ನೀಡುವುದಕ್ಕಾಗಿ ಕೋರುತ್ತಿರುವುದಾಗಿ ನ್ಯಾಯಾಧೀಶರು ತಿಳಿಸಿದ್ದಾರೆ. ಸಿಬಿಐ ತನಿಖಾಧಿಕಾರಿಗಳು ಜಿಎಲ್‌ಎ(ಗಾಲಿ ಜನಾರ್ದನ ರೆಡ್ಡಿ) ಟ್ರೇಡಿಂಗ್ ಇಂಟರ್ ನ್ಯಾಶನಲ್ ಪ್ರೈವೇಟ್ ಲಿಮಿಟೆಡ್‌ನ ಸಂಯೋಜನೆಯ ವಿವರಗಳಂತಹ ಮಾಹಿತಿಯನ್ನು ಸಂಗ್ರಹಿಸಲು ನ್ಯಾಯಾಂಗದ ಸಹಾಯವನ್ನು ಕೋರಿದೆ. ಈ ನಿಟ್ಟಿನಲ್ಲಿ ಮನವಿ ಮಾಡಲಾಗುತ್ತಿದೆ ಎಂದು ನ್ಯಾಯಾಧೀಶರು ಕೋರಿದ್ದಾರೆ.
ಗಾಲಿ ಜನಾರ್ದನ ರೆಡ್ಡಿ 2009-10ರ ಅವಧಿಯಲ್ಲಿ ಸುಮಾರು 7 ರಿಂದ 8 ಮಿಲಿಯನ್ ಮೆಟ್ರಿಕ್ ಟನ್ ಕಬ್ಬಿಣದ ಅದಿರನ್ನು ಅಕ್ರಮವಾಗಿ ವಿವಿಧ ದೇಶಗಳಿಗೆ ರಫ್ತು ಮಾಡುವ ಮೂಲಕ ಅಪಾರ ಪ್ರಮಾಣದ ಹಣ ಗಳಿಸಿದ್ದು ಇದರ ಬಹುಪಾಲನ್ನು ವಿವಿಧ ದೇಶಗಳಲ್ಲಿ ಇರಿಸಿದ್ದು,
ಇದನ್ನು ಪತ್ತೆ ಹಚ್ಚುವ ಸಲುವಾಗಿ ಜಿಎಲ್‌ಎ ಟ್ರೇಡಿಂಗ್ ಇಂಟರ್ ನ್ಯಾಶನಲ್ ಪ್ರೈವೇಟ್ ಲಿಮಿಟೆಡ್ ಹೆಸರಿನಲ್ಲಿರುವ ಕಂಪೆನಿ ಮತ್ತು ಬ್ಯಾಂಕ್ ಖಾತೆ ಇದೆಯೇ ಎಂಬುದನ್ನು ಪತ್ತೆ ಹಚ್ಚಬೇಕು ಎಂದು ಸಿಬಿಐ ನ್ಯಾಯಾಲಯವನ್ನು ಕೋರಿತ್ತು.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ವೀಡಿಯೊ ಪ್ರಕರಣ : ತನಿಖೆಗೆ ಎಡಿಜಿಪಿ ಬಿ.ಕೆ ಸಿಂಗ್ ನೇತೃತ್ವದಲ್ಲಿ ಎಸ್ಐಟಿ ರಚನೆ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement