ಬಿಜೆಪಿ ಚುನಾವಣಾ ಪ್ರಚಾರ ಸಮಿತಿ, ಚುನಾವಣಾ ನಿರ್ವಹಣಾ ಸಮಿತಿ ರಚನೆ: ಬೊಮ್ಮಾಯಿ, ಶೋಭಾ ಕರಂದ್ಲಾಜೆಗೆ ಮಹತ್ವದ ಹೊಣೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಸನಿಹವಾಗುತ್ತಿದ್ದಂತೆಯೇ ಬಿಜೆಪಿ ಪ್ರಚಾರ ಸಮಿತಿ ಹಾಗೂ ನಿರ್ವಹಣಾ ಸಮಿತಿಗೆ ನೇಮಕ ಮಾಡಲಾಗಿದೆ.
ಬಿಜೆಪಿಯಿಂದ ಚುನಾವಣಾ ಪ್ರಚಾರ ಸಮಿತಿ ಮತ್ತು ಚುನಾವಣಾ ನಿರ್ವಹಣಾ ಸಮಿತಿಯ ಪಟ್ಟಿ ಬಿಡುಗಡೆಯಾಗಿದ್ದು,
ಚುನಾವಣಾ ಸಮಿತಿಯ ಅಧ್ಯಕ್ಷರಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ನೇಮಕ ಮಾಡಲಾಗಿದೆ. ಹಾಗೂ ಶೋಭಾ ಕರಂದ್ಲಾಜೆಯವರನ್ನು ಚುನಾವಣಾ ನಿರ್ವಹಣಾ ಸಮಿತಿಯ ಮುಖ್ಯಸ್ಥೆಯನ್ನಾಗಿ ನೇಮಿಸಲಾಗಿದೆ.
ಬಿಜೆಪಿ ಚುನಾವಣಾ ಪ್ರಚಾರ ಸಮಿತಿಯಲ್ಲಿ 25 ನಾಯಕರಿಗೆ ಸ್ಥಾನ ಸಿಕ್ಕಿದೆ. ಈ ಬಾರಿ ಯಡಿಯೂರಪ್ಪ ಬದಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಬಿಜೆಪಿ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನದ ಹೊಣೆ ನೀಡಲಾಗಿದೆ.

ಯಡಿಯೂರಪ್ಪ ಅವರನ್ನು ಪ್ರಚಾರ ಸಮಿತಿಯ ಮೊದಲ ಸದಸ್ಯರಾಗಿ ನೇಮಕ ಮಾಡಲಾಗಿದೆ.25 ಜನರ ಬಿಜೆಪಿ ಚುನಾವಣಾ ಪ್ರಚಾರ ಸಮಿತಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ, ರಮೇಶ ಜಾರಕಿಹೊಳಿ ಮತ್ತು ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರಗೆ ಮೊದಲಾದವರಿಗೆ ಸ್ಥಾನ ನೀಡಲಾಗಿದೆ. ಚುನಾವಣಾ ನಿರ್ವಹಣಾ ಸಮಿತಿಯಲ್ಲಿ 14 ನಾಯಕರನ್ನು ನೇಮಕ ಮಾಡಲಾಗಿದ್ದು, ಇದರಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ​​ಗೆ ಸ್ಥಾನ ನೀಡಲಾಗಿದೆ.

ಇನ್ನು ಬಿಜೆಪಿಯ ಈ ಪ್ರಚಾರ ಸಮಿತಿಯಲ್ಲಿ ವಲಸಿಗ ಸಚಿವರಾದ ಸಚಿವ ಸುಧಾಕರ್, ರಮೇಶ್ ಜಾರಕಿಹೊಳಿ, ಎಸ್ ಟಿ ಸೋಮಶೇಖರ್​ಗೂ ಸ್ಥಾನ ನೀಡಲಾಗಿದೆ. ಆದರೆ ಸೋಮಣ್ಣಗೆ ಸ್ಥಾನ ಲಭಿಸಿಲ್ಲ, ಅತ್ತ ಚುನಾವಣಾ ನಿರ್ವಹಣೆ ಸಮಿತಿಯಲ್ಲೂ ಅವರಿಗೆ ಅವಕಾಶ ಸಿಕ್ಕಿಲ್ಲ. ಬೆಂಗಳೂರಿನ ಇಬ್ಬರು ಸಚಿವರಿಗೆ ಸಚಿವ ಆರ್ ಅಶೋಕ್, ಅಶ್ವಥ್ ನಾರಾಯಣ್ ಪ್ರಚಾರ ಸಮಿತಿಯಲ್ಲಿ ಅವಕಾಶ ನೀಡಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಸೂಚನೆ ಮೇರೆಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ಅರುಣ್‌ ಸಿಂಗ್‌ ಅವರು ಸಮಿತಿಗಳನ್ನು ರಚನೆ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement