ಉದ್ಯೋಗಕ್ಕಾಗಿ ಭೂ ಹಗರಣ: ಬಿಹಾರ ಡಿಸಿಎಂ ತೇಜಸ್ವಿ ಯಾದವ ದೆಹಲಿ ಮನೆ ಮೇಲೆ ಇ.ಡಿ. ದಾಳಿ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಮುಖ್ಯಮಂತ್ರಿಗಳಾದ ಲಾಲು ಪ್ರಸಾದ ಯಾದವ ಮತ್ತು ರಾಬ್ರಿ ದೇವಿ ಅವರನ್ನು ಸಿಬಿಐ ಪ್ರಶ್ನಿಸಿದ ಕೆಲ ದಿನಗಳ ನಂತರ, ಜಾರಿ ನಿರ್ದೇಶನಾಲಯ (ED) ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ ಅವರ ದೆಹಲಿಯ ಮನೆ ಮೇಲೆ ದಾಳಿ ನಡೆಸಿದೆ. ಲಾಲು ಪ್ರಸಾದ ಯಾದವ ಮತ್ತು ಅವರ ಕುಟುಂಬ ಸದಸ್ಯರನ್ನು … Continued

5369 ಹುದ್ದೆಗಳಿಗೆ ನೇಮಕಾತಿ: 10ನೇ ತರಗತಿ, 12ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು

ಸಿಬ್ಬಂದಿ ನೇಮಕಾತಿ ಆಯೋಗವು ಸೆಲೆಕ್ಷನ್‌ ಪೋಸ್ಟ್‌ ಫೇಸ್‌ 11 ಪರೀಕ್ಷೆ ಅಧಿಸೂಚನೆ ಬಿಡುಗಡೆ ಮಾಡಿದ್ದು, ಈ ಪರೀಕ್ಷೆ ಮೂಲಕ ಕೇಂದ್ರ ಸರ್ಕಾರದ ಇಲಾಖೆ / ಸಂಸ್ಥೆ / ಸಚಿವಾಲಯ / ಕಚೇರಿಗಳಲ್ಲಿ ಒಟ್ಟು 5369 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ನೇಮಕಾತಿ ಸಂಸ್ಥೆ : ಸಿಬ್ಬಂದಿ ನೇಮಕಾತಿ ಆಯೋಗ ಪರೀಕ್ಷೆ ಹೆಸರು … Continued

ಬಿಎಂಟಿಸಿ ಬಸ್ಸಿನಲ್ಲಿ ಬೆಂಕಿ ಅನಾಹುತ: ಮಲಗಿದ್ದಲ್ಲೇ ಕಂಡಕ್ಟರ್ ಸಜೀವ ದಹನ

ಬೆಂಗಳೂರು: ಬೆಂಗಳೂರಿನಲ್ಲಿ ಶುಕ್ರವಾರ ಮುಂಜಾನೆ ಬಿಎಂಟಿಸಿ ಬಸ್‌ಗೆ ಬೆಂಕಿ ಹೊತ್ತಿಕೊಂಡ ನಂತರ ಬಸ್‌ನೊಳಗೆ ಮಲಗಿದ್ದ ಕಂಡಕ್ಟರ್ ಸುಟ್ಟು ಕರಕಲಾದ ಘಟನೆ ನಡೆದ ವರದಿಯಾಗಿದೆ. ಮಾಧ್ಯಮಗಳ ವರದಿ ಪ್ರಕಾರ ಬೆಂಗಳೂರಿನ ಲಿಂಗಧೀರನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ರಾತ್ರಿ ರೂಟ್ ಮುಗಿಸಿ ಲಿಂಗಧೀರನಹಳ್ಳಿ ನಿಲ್ದಾಣ ದಲ್ಲಿ ಬಸ್‌ ಹಾಲ್ಟ್‌ ಮಾಡಿತ್ತು. ಕಂಡಕ್ಟರ್‌ ಬಸ್ಸಿನ ಸೀಟ್‍ನಲ್ಲಿಯೇ ಮಲಗುವುದಾಗಿ ಹೇಳಿ ಬಸ್‌ನೊಳಗೆ … Continued

ಐತಿಹಾಸಿಕ ಮೂರನೇ ಅವಧಿಗೆ ಚೀನಾದ ಅಧ್ಯಕ್ಷರಾಗಿ ಆಯ್ಕೆಯಾದ ಕ್ಸಿ ಜಿನ್‌ಪಿಂಗ್

ಬೀಜಿಂಗ್‌: ಚೀನಾದ ಕ್ಸಿ ಜಿನ್‌ಪಿಂಗ್ ಶುಕ್ರವಾರ ದೇಶದ ಅಧ್ಯಕ್ಷರಾಗಿ ಅಭೂತಪೂರ್ವ ಮೂರನೇ ಅವಧಿಗೆ ಅಧಿಕಾರ ವಹಿಸಿಕೊಂಡರು. ಚೀನಾದ ಸಂಸತ್ತಿನ ಸುಮಾರು 3,000 ಸದಸ್ಯರು, ನ್ಯಾಷನಲ್ ಪೀಪಲ್ಸ್ ಕಾಂಗ್ರೆಸ್ (NPC), ಕ್ಸಿ ಜಿನ್‌ಪಿಂಗ್ ಅಧ್ಯಕ್ಷರಾಗಲು ಸರ್ವಾನುಮತದಿಂದ ಮತ ಹಾಕಿದರು. ಚುನಾವಣೆಯಲ್ಲಿ ಬೇರೆ ಯಾವುದೇ ಅಭ್ಯರ್ಥಿ ಇರಲಿಲ್ಲ ಎಂದು ರಾಯಿಟರ್ಸ್ ವರದಿ ಹೇಳಿದೆ. ಕ್ಸಿ ಅವರು ಚೀನಾದ ಸೆಂಟ್ರಲ್ … Continued

ಪ್ರಧಾನಿ ಮೋದಿ ಮಂಡ್ಯ ಭೇಟಿಗೂ 2 ದಿನ ಮೊದಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿಯಾದ ಸಂಸದೆ ಸುಮಲತಾ: ಬಿಜೆಪಿ ಸೇರ್ತಾರಾ..?

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪ ಬರುತ್ತಿರುವಾಗಲೇ ಮಂಡ್ಯ ಸಂಸದೆ ಸುಮಲತಾ ಅಂಬರೀಶ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಭೇಟಿ ಮಾಡಿರುವುದು ರಾಜಕೀಯವಾಗಿ ಕುತೂಹಲಕ್ಕೆ ಕಾರಣವಾಗಿದೆ. ಗುರುವಾರ ಸಂಜೆ ನಂತರ ಬೆಂಗಳೂರಿನ ವಸಂತನಗರದ ಖಾಸಗಿ ಹೋಟೆಲ್​ನಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರ ಜೊತೆ ಸುಮಾರು ಅರ್ಧ ಗಂಟೆಗೂ … Continued

ನಾಲ್ಕು ದೇಶಗಳ ಪ್ರಾಧಿಕಾರಗಳಿಗೆ ಜನಾರ್ದನ ರೆಡ್ಡಿ ಆಸ್ತಿ ಮಾಹಿತಿ ಒದಗಿಸಲು ಕೋರಿದ ಸಿಬಿಐ ವಿಶೇಷ ನ್ಯಾಯಾಲಯ

ಬೆಂಗಳೂರು: ಕಬ್ಬಿಣ ಅದಿರಿನ ಅಕ್ರಮ ಮಾರಾಟದ ಮೂಲಕ ಗಳಿಸಿರುವ ವ್ಯಾಪಕ ಹಣವನ್ನು ವಿವಿಧ ದೇಶಗಳಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಇರಿಸಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಮಾಹಿತಿ, ದಾಖಲೆಗಳನ್ನು ಪಡೆಯಲು ತನಿಖಾ ಸಂಸ್ಥೆಗೆ ಸಹಾಯ ಮಾಡುವಂತೆ ನಾಲ್ಕು ದೇಶಗಳ ಸಕ್ಷಮ ಪ್ರಾಧಿಕಾರಗಳಿಗೆ ಸಿಬಿಐ ವಿಶೇಷ ನ್ಯಾಯಾಲಯ ಇತ್ತೀಚೆಗೆ ಮನವಿ ಮಾಡಿದೆ. … Continued