ಉಡುಪಿ ಕೃಷ್ಣ ಮಠ : ಸಾರ್ವಜನಿಕ ವೇದಿಕೆಯಲ್ಲಿ ಅಸಂಬದ್ಧ ಮಾತನಾಡುವುದು ಯಾಕೆ?; ಕಾಂಗ್ರೆಸ್‌ ಮುಖಂಡನ ಹೇಳಿಕೆಗೆ ನಟ ರಕ್ಷಿತ್ ಶೆಟ್ಟಿ ಟ್ವೀಟ್‌

posted in: ರಾಜ್ಯ | 0

ಉಡುಪಿ: ಉಡುಪಿಯ ಶ್ರೀಕೃಷ್ಣ ಮಠಕ್ಕೆ ಜಮೀನು ದಾನ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಮುಖಂಡ ಮಿಥುನ್ ರೈ ನೀಡಿದ ಹೇಳಿಕೆ ಈಗ ಚರ್ಚೆಗೆ ಗ್ರಾಸವಾಗಿದ್ದು, ತೀವ್ರ ವಿರೋಧ ವ್ಯಕ್ತವಾಗಿದೆ. ಉಡುಪಿ ಮಠಕ್ಕ ಜಾಗ ಕೊಟ್ಟಿದ್ದು ಮುಸ್ಲಿಂ ರಾಜ ಎಂದು ಹೇಳಿ ವಿವಾದ ಉಂಟು ಮಾಡಿದ್ದ ಕಾಂಗ್ರೆಸ್‌ ಯುವ ಮುಖಂಡ ಮಿಥುನ್ ರೈ ಹೇಳಿಕೆಗೆ ಉಡುಪಿ ಮಠದ ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನ ತೀರ್ಥರು ಆಕ್ಷೇಪಿಸಿದ್ದಾರೆ. ಈಗ ನಟ ರಕ್ಷಿತ್ ಶೆಟ್ಟಿ (Actor Rakshith Shetty) ಕೂಡ ಈ ಹೇಳಿಕೆಯನ್ನು ಟೀಕಿಸಿದ್ದಾರೆ.
ಈ ಬಗ್ಗೆ ಟ್ವೀಟ್‌ ಮಾಡಿರುವ ನಟ ರಕ್ಷಿತ್ ಶೆಟ್ಟಿ ಅವರು ಮಿಥುನ್ ರೈ ಹೆಸರು ಹೇಳದೆಯೇ ಈ ಹೇಳಿಕೆಗೆ ಆಕ್ಷೇಪಿಸಿದ್ದಾರೆ. ‘ಉಡುಪಿ ದೇವಸ್ಥಾನಕ್ಕೆ ಸಾವಿರಾರು ವರ್ಷದ ಇತಿಹಾಸ ಇದೆ. ಮಾಹಿತಿ ಗೊತ್ತಿಲ್ಲದೆ ಸಾರ್ವಜನಿಕವಾಗಿ ನಾನ್ ಸೆನ್ಸ್ ರೀತಿಯಲ್ಲಿ ಮಾತಾನಾಡೋದು ಯಾಕೆ?’ ಎಂದು ರಕ್ಷಿತ ಶೆಟ್ಟಿ ಅವರು ಪ್ರಶ್ನೆ ಮಾಡಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ನಟ ರಕ್ಷಿತ್ ಶೆಟ್ಟಿ ಅವರು ಮಿಥುನ್ ರೈ ಹೆಸರು ಬಳಸದೇ ಇದ್ದರೂ ಇದು ಅವವರಿಗೇ ಕೊಟ್ಟ ತಿರುಗೇಟು ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ.ಸಾಮಾನ್ಯವಾಗಿ ರಾಜಕೀಯ ವ್ಯಕ್ತಿಗಳ ಹೇಳಿಕೆಗಳಿಗೆ ಪ್ರತಿಕ್ರಿಯೆ ಕೊಡುವುದು ಬಹಳ ಕಡಿಮೆ. ಆದರೆ, ಉಡುಪಿ ಮಠಕ್ಕೆ ಸಂಬಂಧಿಸಿದಂತೆ ಮಿಥುನ ರೈ ಅವರ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದ್ದಾರೆ.

ಇತ್ತೀಚೆಗೆ ಮೂಡಬಿದ್ರೆ ತಾಲೂಕಿನ ಪುತ್ತಿಗೆಯಲ್ಲಿ ‘ನಮ್ಮೂರ ಮಸೀದಿ ನೋಡ ಬನ್ನಿ’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಾಂಗ್ರೆಸ್‌ ಮುಖಂಡ ಮಿಥುನ್ ರೈ, ‘ಉಡುಪಿ ಮಠಕ್ಕೆ ಜಾಗ ಕೊಟ್ಟಿದ್ದು ಮುಸಲ್ಮಾನ ರಾಜರು’ ಎಂದು ಹೇಳಿದ್ದರು.

ಇಂದಿನ ಪ್ರಮುಖ ಸುದ್ದಿ :-   ಶಾಸಕ ಸ್ಥಾನಕ್ಕೆ ಗುಬ್ಬಿ ಶ್ರೀನಿವಾಸ ಇಂದು ರಾಜೀನಾಮೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement