ಇಂದು ಪ್ರಧಾನಿ ಮೋದಿಯಿಂದ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ನಿರ್ಮಾಣವಾದ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್, ಧಾರವಾಡ ಐಐಟಿ ಉದ್ಘಾಟನೆ

ಹುಬ್ಬಳ್ಳಿ: ಪ್ರಧಾನಿ ಮೋದಿ ನಾಳೆ ಮಾರ್ಚ್‌ 12ರಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.ನಾಳೆ ಭಾನುವಾರ ಮಧ್ಯಾಹ್ನ 12ಕ್ಕೆ ಮಂಡ್ಯದಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಅನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ನಂತರ ಮಧ್ಯಾಹ್ನ 3:15ಕ್ಕೆ ಧಾರವಾಡ ಐಐಟಿ ಹಾಗೂ ಹುಬ್ಬಳ್ಳಿಯ ಸಿದ್ಧಾರೂಢ ಸ್ವಾಮಿ ರೈಲ್ವೆ ನಿಲ್ದಾಣದಲ್ಲಿ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್ ಅನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.
ಭಾನುವಾರ ಮಧ್ಯಾಹ್ನ ಮಧ್ಯಾಹ್ನ 3:15ಕ್ಕೆ ಹುಬ್ಬಳ್ಳಿ-ಧಾರವಾಡದಲ್ಲಿ ವಿವಿಧ ಅಭಿವೃದ್ಧಿ ಉಪಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಪಿಎಂಒ ಪ್ರಕಟಣೆ ತಿಳಿಸಿದೆ. ಪ್ರಧಾನಿ ಮೋದಿ ಅವರು ಹುಬ್ಬಳ್ಳಿಯ ಸಿದ್ಧಾರೂಢ ಸ್ವಾಮಿ ರೈಲ್ವೆ ನಿಲ್ದಾಣದಲ್ಲಿ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್ ಅನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಈ ದಾಖಲೆಯನ್ನು ಇತ್ತೀಚೆಗೆ ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಗುರುತಿಸಿದೆ. 1507 ಮೀ ಉದ್ದದ ರೈಲ್ವೆ ಪ್ಲಾಟ್‌ ಫಾರ್ಮ್‌ ಅನ್ನು ಸುಮಾರು 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಶ್ರೀ ಸಿದ್ದಾರೂಢ ಸ್ವಾಮಿ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಇದಕ್ಕೂ ಮುನ್ನ 1ನೇ ಪ್ಲಾಟ್‌ ಫಾರಂ 550 ಮೀಟರ್‌ ಉದ್ದ ಹೊಂದಿತ್ತು. ಇದೀಗ ಈ ಪ್ಲಾಟ್ ಫಾರಂನ್ನು ವಿಸ್ತರಿಸಿ 10 ಮೀಟರ್‌ ಅಗಲದೊಂದಿಗೆ 1507 ಮೀಟರಿಗೆ ವಿಸ್ತರಣೆ ಮಾಡಲಾಗಿದೆ. ಇದು1,366 ಮೀಟರ್ ಉದ್ದದ ಗೋರಖ್‌ಪುರ ರೈಲು ನಿಲ್ದಾಣವನ್ನು ಹಿಂದಿಕ್ಕಲಿದೆ.
ಇದಲ್ಲದೆ, ಪ್ರಧಾನಿ ಮೋದಿ ಧಾರವಾಡದ ಐಐಟಿಯನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಫೆಬ್ರುವರಿ 2019 ರಲ್ಲಿ ಪ್ರಧಾನಿ ಮೋದಿ ಈ ಸಂಸ್ಥೆಗೆ ಅಡಿಪಾಯ ಹಾಕಿದ್ದರು. 850 ಕೋಟಿ ರೂ.ಗಳಿಗೂ ಹೆಚ್ಚು ವೆಚ್ಚದಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ., ಸಂಸ್ಥೆಯು ಪ್ರಸ್ತುತ 4-ವರ್ಷದ ಬಿ.ಟೆಕ್ ಪದವಿ ನೀಡುತ್ತದೆ. ಅಲ್ಲದೆ 5-ವರ್ಷದ BS-MS ಕಾರ್ಯಕ್ರಮ, M.Tech. ಮತ್ತು ಪಿಎಚ್.ಡಿ.ಯನ್ನು ಒಳಗೊಂಡಿದೆ.
ಅಲ್ಲದೆ ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿಯ ವಿವಿಧ ಯೋಜನೆಗಳಿಗೆ ಪ್ರಧಾನಿ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಹ ನೆರವೇರಿಸಲಿದ್ದಾರೆ. ಈ ಯೋಜನೆಗಳ ಒಟ್ಟು ಅಂದಾಜು ವೆಚ್ಚ ಸುಮಾರು 520 ಕೋಟಿ ರೂ.ಗಳಾಗಿವೆ.

ಪ್ರಮುಖ ಸುದ್ದಿ :-   ರಾಜ್ಯದಲ್ಲಿ ತಾಪಮಾನ ಏರಿಕೆ : ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

ಈ ಪ್ರದೇಶಕ್ಕೆ ಉತ್ತಮ ಆರೋಗ್ಯ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹುಬ್ಬಳ್ಳಿ-ಧಾರವಾಡದಲ್ಲಿ ಜಯದೇವ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸುಮಾರು 250 ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆಯನ್ನು ಅಭಿವೃದ್ಧಿಪಡಿಸಲಾಗುತ್ತದೆ ಮತ್ತು ಈ ಭಾಗದ ಜನರಿಗೆ ಹೃದಯ ಸಂಬಂಧಿ ಚಿಕಿತ್ಸೆಗೆ ನೆರವಾಗಲಿದೆ.
ಅಲ್ಲದೆ, 1040 ಕೋಟಿ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸುವ ಧಾರವಾಡ ಬಹುಗ್ರಾಮ ನೀರು ಸರಬರಾಜು ಯೋಜನೆ ಹಾಗೂ 150 ಕೋಟಿ ರೂ.ಗಳ ತುಪ್ಪರಿಹಳ್ಳ ಪ್ರವಾಹ ಹಾನಿ ನಿಯಂತ್ರಣ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಇದಲ್ಲದೆ, ಹೊಸಪೇಟೆ-ಹುಬ್ಬಳ್ಳಿ-ತಿನೈಘಾಟ್ ಭಾಗದ ವಿದ್ಯುದ್ದೀಕರಣ ಮತ್ತು ಹೊಸಪೇಟೆ ನಿಲ್ದಾಣದ ಮೇಲ್ದರ್ಜೆಗೇರಿಸುವಿಕೆಯನ್ನು ಸಹ ಅವರು ಲೋಕಾರ್ಪಣೆ ಮಾಡಲಿದ್ದಾರೆ. 530 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾದ ವಿದ್ಯುದ್ದೀಕರಣ ಯೋಜನೆಯಿಂದ ತಡೆರಹಿತ ರೈಲು ಕಾರ್ಯಾಚರಣೆ ನಡೆಯಲಿದೆ. ಹೊಸಪೇಟೆ ನಿಲ್ದಾಣ ಪುನರಾಭಿವೃದ್ಧಿ ಮಾಡಲಾಗಿದ್ದು, ಇದನ್ನು ಹಂಪಿ ಸ್ಮಾರಕಗಳನ್ನು ಹೋಲುವಂತೆ ವಿನ್ಯಾಸಗೊಳಿಸಲಾಗಿದೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ 2

8,848 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ 6 ಪಥದ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇಯನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಂಡ್ಯಕ್ಕೆ ಭೇಟಿ ನೀಡಲಿದ್ದಾರೆ. ಈ ಹೆದ್ದಾರಿಯು ಎರಡು ನಗರಗಳ ನಡುವಿನ ಪ್ರಯಾಣದ ಸಮಯವನ್ನು 75 ನಿಮಿಷಗಳಷ್ಟು ಕಡಿಮೆ ಮಾಡಲಿದೆ ಮತ್ತು ಈ ಪ್ರದೇಶದ ಸಾಮಾಜಿಕ ಆರ್ಥಿಕ ಅಭಿವೃದ್ಧಿಗೆ ವೇಗವರ್ಧಕವಾಗಿ ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ ಎಂದು ಪಿಎಂಒ ಹೇಳಿಕೆ ತಿಳಿಸಿದೆ.
ಪ್ರಧಾನಿ ಮೋದಿ ಅವರು ಸುಮಾರು ಅವರ ಕರ್ನಾಟಕ ಪ್ರವಾಸದಲ್ಲಿ 16,000 ಕೋಟಿ ರೂ.ಗಳ ಯೋಜನೆಗೆ ಚಾಲನೆ ನೀಡಲಿದ್ದಾರೆ ಅಥವಾ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.
ಮೈಸೂರು-ಖುಶಾಲನಗರ 4-ಲೇನ್ ಹೆದ್ದಾರಿಗೆ ಶಿಲಾನ್ಯಾಸವನ್ನು ಒಳಗೊಂಡಿದ್ದು, ಸುಮಾರು 4,130 ಕೋಟಿ ರೂಪಾಯಿಗಳ ಹೂಡಿಕೆಯೊಂದಿಗೆ 92 ಕಿಮೀ ದೂರವನ್ನು ಕ್ರಮಿಸಲು ಅಭಿವೃದ್ಧಿಪಡಿಸಲಾಗುತ್ತದೆ. ಈ ಯೋಜನೆಯು ಬೆಂಗಳೂರಿನೊಂದಿಗೆ ಕುಶಾಲನಗರದ ಸಂಪರ್ಕವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಮತ್ತು ಪ್ರಯಾಣದ ಅವಧಿಯನ್ನು ಸುಮಾರು 5 ಗಂಟೆಗಳಿಂದ ಕೇವಲ 2.5 ಗಂಟೆಗೆ ಅಂದರೆ ಅರ್ಧಕ್ಕೆ ಇಳಿಸಲು ಸಹಾಯ ಮಾಡುತ್ತದೆ.
ಮಧ್ಯಾಹ್ನ 12 ಗಂಟೆಗೆ ಪ್ರಧಾನ ಮಂತ್ರಿ ಅವರು ಮಂಡ್ಯದಲ್ಲಿ ಪ್ರಮುಖ ರಸ್ತೆ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ನಂತರ ಮಧ್ಯಾಹ್ನ 3:15ಕ್ಕೆ ಹುಬ್ಬಳ್ಳಿ-ಧಾರವಾಡದಲ್ಲಿ ವಿವಿಧ ಅಭಿವೃದ್ಧಿ ಉಪಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಪಿಎಂಒ ಪ್ರಕಟಣೆ ತಿಳಿಸಿದೆ.

ಪ್ರಮುಖ ಸುದ್ದಿ :-   ವೀಡಿಯೊ...| ಎಲ್ಲರೆದುರು ಸರ್ಪಕ್ಕೆ ಮುತ್ತಿಕ್ಕಿದ ಭೂಪ...ಆದ್ರೆ ನಂತರ ಆದದ್ದೇ ಬೇರೆ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement