ಕರ್ನಾಟಕ ಪ್ರವಾಸದ ವೇಳೆ ಬಿಜೆಪಿ ಮಹಿಳಾ ಕಾರ್ಯಕರ್ತೆ‌ ಪಾದಗಳಿಗೆ ನಮಸ್ಕರಿಸಿದ ಪ್ರಧಾನಿ ಮೋದಿ

ಭಾನುವಾರ ಕರ್ನಾಟಕಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ಜನತಾ ಪಕ್ಷದ ಮಹಿಳಾ ಕಾರ್ಯಕರ್ತರಿಗೆ ನಮಸ್ಕರಿಸುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.
ಮಂಡ್ಯ ಬಳಿಯ ಗೆಜ್ಜಲಗೆರೆಗೆ ಆಗಮಿಸಿದ ಪ್ರಧಾನಿ ಮೋದಿಯವರ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆಯಲು ಮಹಿಳೆ ಪ್ರಯತ್ನಿಸಿದ್ದಾರೆ. ಆಗ ಪ್ರಧಾನಿ ಮೋದಿಯವರೇ ಮಹಿಳೆಯ ಪಾದಕ್ಕೆ ನಮಸ್ಕರಿಸಿದ್ದು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ಅವರನ್ನು ಸ್ವಾಗತಿಸಲು ವೇದಿಕೆಯ ಮೇಲೆ ಬಿಜೆಪಿ ನಾಯಕರು ಸಾಲುಗಟ್ಟಿ ನಿಂತಿದ್ದರು. ವೇದಿಕೆಗೆ ಆಗಮಿಸುತ್ತಿದ್ದಂತೆ ಮಹಿಳಾ ನಾಯಕಿಯೊಬ್ಬರು ಅವರ ಪಾದ ಮುಟ್ಟಿ ಆಶೀರ್ವಾದ ಪಡೆಯಲು ಯತ್ನಿಸಿದರು. ಆದರೆ ಖುದ್ದು ಮೋದಿ ಅವರೇ ಆಕೆಯ ಪಾದ ಮುಟ್ಟಿ ನಮಸ್ಕರಿಸಿದ್ದು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.

ಮೋದಿಯವರ ಪಾದಗಳಿಗೆ ನಮಸ್ಕರಿಸಬೇಕೆಂದು ನನಗೆ ಅನಿಸಿತು. ಆದರೆ ಅವರು ನನ್ನನ್ನು ತಡೆದರು, ಅವರೇ ನನ್ನ ಪಾದಗಳಿಗೆ ನಮಸ್ಕರಿಸಿದರು. ಅವರು ಹಾಗೆ ಮಾಡುವುದನ್ನು ನೋಡಿ ನಾನು ಕುಳಿತುಕೊಂಡುಬಿಟ್ಟೆ. ಅವರನ್ನು ನೋಡಿದ್ದು ನನ್ನ ಅದೃಷ್ಟ. ಮೋದಿ ಮಹಿಳೆಯರನ್ನು ತುಂಬಾ ಗೌರವಿಸುತ್ತಾರೆ ಎಂದು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಅನುರಾಧ ಮಾಧ್ಯಮಗಳಿಗೆ ತಿಳಿಸಿದ್ದಾರೆ.
10 ಪಥಗಳ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ, ಧಾರವಾಡದ ಐಐಟಿ ಕ್ಯಾಂಪಸ್ ಉದ್ಘಾಟನೆ ಮತ್ತು ಇತರ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಲು ಪ್ರಧಾನಿ ಭಾನುವಾರ ಕರ್ನಾಟಕಕ್ಕೆ ಬಂದಿದ್ದರು. ಹಳೆ ಮೈಸೂರು ಭಾಗದ ಮಂಡ್ಯ ಮತ್ತು ಉತ್ತರ ಕರ್ನಾಟಕದ ಧಾರವಾಡದಲ್ಲಿ ಎರಡು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮೋದಿ ಮಾತನಾಡಿದರು. ಸುಮಾರು 16,000 ಕೋಟಿ ರೂಪಾಯಿ ಮೌಲ್ಯದ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇ ಸೇರಿದಂತೆ ವಿವಿಧ ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಿದರು ಹಾಗೂ ಲೋಕಾರ್ಪಣೆ ಮಾಡಿದರು.

ಪ್ರಮುಖ ಸುದ್ದಿ :-   ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಬೆಂಗಳೂರು, ತೀರ್ಥಹಳ್ಳಿ, ಚೆನ್ನೈ ಸೇರಿದಂತೆ ಅನೇಕ ಕಡೆ ಎನ್‌ಐಎ ದಾಳಿ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement