ಬೆಂಗಳೂರು-ಮೈಸೂರು ದಶಪಥ ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ಟೋಲ್ ಸಂಗ್ರಹಕ್ಕೆ ವಿರೋಧ : ಪ್ರತಿಭಟನೆ

posted in: ರಾಜ್ಯ | 0

ರಾಮನಗರ : ಎರಡು ದಿನಗಳ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿರುವ ಬೆಂಗಳೂರು-ಮೈಸೂರು ದಶಪಥ ಎಕ್ಸ್‌ ಪ್ರೆಸ್‌ ಹೆದ್ದಾರಿಯಲ್ಲಿ ಇಂದಿನಿಂದ ಟೋಲ್ ಸಂಗ್ರಹ ಆರಂಭವಾಗಿದೆ.
ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುವ ವಾಹನಗಳಿಗೆ ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಿಕೆ ಬಳಿ ಹಾಗೂ ಮೈಸೂರಿನಿಂದ ಬೆಂಗಳೂರಿಗೆ ಬರುವ ವಾಹನಗಳಿಗೆ ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಪ್ಲಾಜಾ ಬಳಿ ಟೋಲ್ ಸಂಗ್ರಹಿಸಲಾಗುತ್ತಿದ್ದು, ಇದಕ್ಕೆ ಕಾಂಗ್ರೆಸ್, ಕನ್ನಡಪರ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ. ಸರ್ವೀಸ್‌ ರಸ್ತೆ ಸೌಕರ್ಯ ಕಲ್ಪಿಸದೇ ಟೋಲ್‌ ಶುಲ್ಕ ಸಂಗ್ರಹಕ್ಕೆ ಮುಂದಾಗಿರುವುದಕ್ಕೆ ಕನ್ನಡ ಪರ ಸಂಘಟನೆಗಳು, ಕಾಂಗ್ರೆಸ್‌ನವರು  ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಅಲ್ಲಿ ತೀವ್ರ ಪ್ರತಿಭಟನೆ ನಡೆಯುತ್ತಿದೆ
ಟೋಲ್ ಸಂಗ್ರಹ ವಿರೋಧಿಸಿ ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಟೋಲ್ ಬಳಿ ಕಾಂಗ್ರೆಸ್ ಕಾರ್ಯಕರ್ತತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್​​ ಕಾರ್ಯಕರ್ತರ ಪ್ರತಿಭಟನೆ ಹಿನ್ನೆಲೆ ಟ್ರಾಫಿಕ್​ ಜಾಮ್​​ ಉಂಟಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಕೆ ಬಳಿ ಕನ್ನಡಪರ ಸಂಘಟನೆಗಳು ಪ್ರತಿಭಟನೆಗೆ ಇಳಿದಿದ್ದು, ಈ ವೇಳೆ ಟೋಲ್ ಪ್ಲಾಜಾ ಕಂಬಿ ಮುರಿದು ಕನ್ನಡಪರ ಸಂಘಟನೆ ಸದಸ್ಯರೊಬ್ಬರು ಆಕ್ರೋಶ ಹೊರ ಹಾಕಿದ್ದಾರೆ. ಟೋಲ್ ಕಂಬಿ ಮುರಿದ ಸದಸ್ಯನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಕೀಲರ ಸಂಘದ ಮಾಜಿ ಅಧ್ಯಕ್ಷ ರಂಗನಾಥ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಕಣಮಿಣಿಕೆ ಗ್ರಾಮದ ಬಳಿಯ ಟೋಲ್ ಪ್ಲಾಜಾ ಎದುರು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.
ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಕೆ ಬಳಿಯ ಟೋಲ್ ಬಳಿ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. 3 ಕೆಎಸ್​ಆರ್​ಪಿ ತುಕಡಿ ಹಾಗೂ 200‌ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.
119 ಕಿಮೀ ಉದ್ದದ ಹೆದ್ದಾರಿಯು ಬೆಂಗಳೂರು ಮತ್ತು ಮೈಸೂರು ನಡುವಿನ ಪ್ರಯಾಣವನ್ನು 75 ನಿಮಿಷಗಳವರೆಗೆ ಕಡಿಮೆ ಮಾಡುತ್ತದೆ. ಇದು ಎರಡು ಹಂತಗಳನ್ನು ಹೊಂದಿದೆ. ಮೊದಲ ಹಂತವು ಬೆಂಗಳೂರು ಮತ್ತು ನಿಡಗಟ್ಟ ನಡುವಿನ 58 ಕಿ.ಮೀ. ಎರಡನೇ ಮಾರ್ಗವು ನಿಡಗಟ್ಟಾ ಮತ್ತು ಮೈಸೂರು ನಡುವಿನ 61 ಕಿಮೀ ಉದ್ದದ ಹೆದ್ದಾರಿಯಾಗಿದೆ.

ಇಂದಿನ ಪ್ರಮುಖ ಸುದ್ದಿ :-   ಶಾಸಕ ಸ್ಥಾನಕ್ಕೆ ಗುಬ್ಬಿ ಶ್ರೀನಿವಾಸ ಇಂದು ರಾಜೀನಾಮೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement