ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾರ್ಚ್ 20 ರಂದು ಬೆಳಗಾವಿಗೆ ಭೇಟಿ ನೀಡಲಿದ್ದಾರೆ. ರಾಹುಲ್ ಗಾಂಧಿ ಅವರು ಚುನಾವಣಾ ಸನಿಹದಲ್ಲಿರುವ ರಾಜ್ಯಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಯುವ ಪ್ರಣಾಳಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಈ ಭೇಟಿಯ ವೇಳೆ ಕಾಂಗ್ರೆಸ್ ಪಕ್ಷದ ನಾಲ್ಕನೇ ಚುನಾವಣಾ ಭರವಸೆಯನ್ನು ರಾಹುಲ್ ಗಾಂಧಿ ಪ್ರಕಟಿಸುವ ಸಾಧ್ಯತೆ ಇದೆ. ಮೇ ತಿಂಗಳಲ್ಲಿ ಕರ್ನಾಟಕ ವಿಧಾನಸಭೆಗೆ ಚುನಾವಣೆ ನಡೆಯಲಿದೆ.
ಏತನ್ಮಧ್ಯೆ, ಕರ್ನಾಟಕ ವಿಧಾನಸಭೆ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಾರ್ಚ್ 17 ರಂದು ಪ್ರಕಟಿಸಲಾಗುವುದು ಎಂದು ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ. ಮಾರ್ಚ್ 17 ರಂದು ಮೊದಲ ಪಟ್ಟಿ (ಅಭ್ಯರ್ಥಿಗಳ) ಹೊರಬೀಳಲಿದೆ, ಏಕೆಂದರೆ ಅಂದು (ಪಕ್ಷದ) ಕೇಂದ್ರ ಚುನಾವಣಾ ಸಮಿತಿಯ ಸಭೆ ಇದೆ ಮತ್ತು ಮೊದಲ ಪಟ್ಟಿಯನ್ನು ಅಂತಿಮಗೊಳಿಸಬಹುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕದಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲು 224 ಸದಸ್ಯ ಬಲದ ವಿಧಾನಸಭೆಯಲ್ಲಿ ಕನಿಷ್ಠ 150 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಕಾಂಗ್ರೆಸ್ ಹೊಂದಿದೆ.
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ನಿಮ್ಮ ಕಾಮೆಂಟ್ ಬರೆಯಿರಿ