ರೈಲಿನಲ್ಲಿ ಮಲಗಿದ್ದ ಮಹಿಳಾ ಪ್ರಯಾಣಿಕಳ ತಲೆಯ ಮೇಲೆ ಮೂತ್ರ ಹೊಯ್ದ ರೈಲ್ವೆ ಟಿಟಿಇ…!

ಲಕ್ನೋ : ಅಕಾಲ್ ತಖ್ತ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಕೋಲ್ಕತ್ತಾಕ್ಕೆ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕರೊಬ್ಬರ ಮೇಲೆ ರೈಲ್ವೆ ಟಿಟಿಇಯೊಬ್ಬ ಮೂತ್ರ ಹೊಯ್ದ ಘಟನೆ ನಡೆದಿದ್ದು, ಆತನನ್ನು ಬಂಧಿಸಲಾಗಿದೆ.
ಮಾಹಿತಿಯ ಪ್ರಕಾರ, ಮಹಿಳೆ ತನ್ನ ಪತಿ ಜೊತೆ ಅಮೃತಸರದಿಂದ ಕೋಲ್ಕತ್ತಾಕ್ಕೆ ಪ್ರಯಾಣಿಸುತ್ತಿದ್ದಳು, ರೈಲ್ವೆ ಪೊಲೀಸ್ (ಜಿಆರ್‌ಪಿ) ಅಧಿಕಾರಿಯ ಪ್ರಕಾರ, ಅಮೃತಸರದಿಂದ ಕೋಲ್ಕತ್ತಾಗೆ ಹೋಗುತ್ತಿದ್ದ ಅಕಲ್ ತಖ್ತ್ ಎಕ್ಸ್‌ಪ್ರೆಸ್‌ನ ಎ1 ಕೋಚ್‌ನಲ್ಲಿ ಭಾನುವಾರ ಮಧ್ಯರಾತ್ರಿ ಈ ಘಟನೆ ಸಂಭವಿಸಿದೆ. ಘಟನೆ ನಡೆದಾಗ ಮಧ್ಯರಾತ್ರಿಯ ಸುಮಾರಿಗೆ ಮಹಿಳೆ ತನ್ನ ಸೀಟಿನಲ್ಲಿ ಮಲಗಿದ್ದಳು. ಬಿಹಾರದ ಟಿಟಿ ಮುನ್ನಾ ಕುಮಾರ ಎಂಬಾತ ಕುಡಿದ ಅಮಲಿನಲ್ಲಿ ಮಹಿಳೆಯ ತಲೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ ಎಂದು ವರದಿಯಾಗಿದೆ. ಇದಾದ ಬಳಿಕ ಪತ್ನಿ ಈ ಬಗ್ಗೆ ಎಚ್ಚರಿಸಿದಾಗ ಪತಿ ಹಾಗೂ ಇತರೆ ಪ್ರಯಾಣಿಕರು ಟಿಟಿಇಯನ್ನು ಹಿಡಿದುಕೊಂಡಿದ್ದಾರೆ. ಸೋಮವಾರ, ರೈಲು ಚಾರ್‌ಬಾಗ್ ರೈಲು ನಿಲ್ದಾಣವನ್ನು ತಲುಪಿದಾಗ ರೈಲ್ವೆ ಪೊಲೀಸ್ (ಜಿಆರ್‌ಪಿ) ಟಿಟಿಇಯನ್ನು ಬಂಧಿಸಿದರು ಮತ್ತು ಮತ್ತು ಈಗ ಆತನನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಕೆಲವು ತಿಂಗಳ ಹಿಂದೆ ವಿಮಾನದಲ್ಲಿ ಇದೇ ರೀತಿಯ ಘಟನೆ ಸಂಭವಿಸಿದ್ದು, ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ತನ್ನ ಪಕ್ಕದಲ್ಲಿ ಕುಳಿತಿದ್ದ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಎನ್ನಲಾಗಿದೆ. ವ್ಯಕ್ತಿಯನ್ನು ಬಂಧಿಸಲಾಯಿತು ಮತ್ತು ಏರ್ ಇಂಡಿಯಾ ವಿಮಾನದಲ್ಲಿ ಹಾರಾಟ ಮಾಡದಂತೆ 4 ತಿಂಗಳ ನಿಷೇಧವನ್ನು ನೀಡಲಾಯಿತು.
ಇತ್ತೀಚೆಗಿನ ಮತ್ತೊಂದು ಘಟನೆಯೆಂದರೆ ನ್ಯೂಯಾರ್ಕ್‌ನಿಂದ ದೆಹಲಿಗೆ ಅಮೆರಿಕನ್ ಏರ್‌ಲೈನ್ಸ್ ಟ್ರಿಪ್‌ನಲ್ಲಿ ಕುಡುಕನೊಬ್ಬ ತನ್ನ ಪಕ್ಕದಲ್ಲಿ ಕುಳಿತಿದ್ದ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಇದಾದ ಬಳಿಕ ಐಜಿಐ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನನ್ನು ಬಂಧಿಸಲಾಯಿತು. ಈಗ ರೈಲ್ವೆಯಲ್ಲಿ ಇಂತಹ ಘಟನೆ ಸಂಭವಿಸಿದೆ.

ಇಂದಿನ ಪ್ರಮುಖ ಸುದ್ದಿ :-   ವೀರ್ ಸಾವರ್ಕರಗೆ ಅವಮಾನ ಮಾಡಿದ್ರೆ ಸಹಿಸಲ್ಲ, ಇದು ಮುಂದುವರಿದ್ರೆ ಮೈತ್ರಿಯಲ್ಲಿ ಬಿರುಕು : ರಾಹುಲ್ ಗಾಂಧಿಗೆ ಎಚ್ಚರಿಕೆ ನೀಡಿದ ಉದ್ಧವ್ ಠಾಕ್ರೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

2 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement