5 ಮತ್ತು 8ನೇ ತರಗತಿ ಪರೀಕ್ಷೆ: ಅಫಿಡವಿಟ್‌ ಸಲ್ಲಿಸಲು ಸರ್ಕಾರಕ್ಕೆ ಸೂಚನೆ

posted in: ರಾಜ್ಯ | 0

ಬೆಂಗಳೂರು: ರಾಜ್ಯ ಪಠ್ಯಕ್ರಮದ ಶಾಲೆಗಳ 5 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮಂಡಳಿ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಸಿದ್ಧಪಡಿಸಲಾಗಿರುವ ಪ್ರಶ್ನೆಪತ್ರಿಕೆಗಳಲ್ಲಿ ಪಠ್ಯಕ್ರಮದಿಂದ ಹೊರತಾದ ಯಾವುದಾದರೂ ಪ್ರಶ್ನೆಗಳು ಇವೆಯೇ ಇಲ್ಲವೇ ಎಂಬುದನ್ನು ಸ್ಪಷ್ಟಪಡಿಸಲು ಅಫಿಡವಿಟ್‌ ಸಲ್ಲಿಸಿ ಎಂದು ಹೈಕೋರ್ಟ್‌ ಮಂಗಳವಾರ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ನಿರ್ದೇಶಿಸಿದೆ.
ಮಂಡಳಿ ಪರೀಕ್ಷೆ ನಡೆಸುವ ಕುರಿತು ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆ ರದ್ದುಪಡಿಸಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಜಿ.‌ ನರೇಂದರ್ ಮತ್ತು ಅಶೋಕ್‌ ಎಸ್.‌ ಕಿಣಗಿ ಅವರ ನೇತೃತ್ವದ ವಿಭಾಗೀಯ ಪೀಠವು ಮಂಗಳವಾರ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಕೀಲರಾದ ಕೆ ವಿ ಧನಂಜಯ ಅವರು ಕಲಿಕಾ ಚೇತರಿಕೆ ಕೇವಲ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಮಾತ್ರವೇ ಅನ್ವಯ ಆಗುತ್ತದೆ. ಇದರನ್ವಯ ಪ್ರಶ್ನೆಗಳನ್ನು ಉತ್ತರಿಸಲು ಮಕ್ಕಳಿಗೆ ಕಷ್ಟವಾಗುತ್ತದೆ ಎಂದು ವಾದಿಸಿದರು.
ಆದರೆಇದನ್ನು ಅಲ್ಲಗಳೆದ ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಧ್ಯಾನ್‌ ಚಿನ್ನಪ್ಪ ಅವರು ಅದುಪಠ್ಯಕ್ರಮದ ಭಾಗವೇ ಆಗಿದೆ. ಪ್ರಶ್ನೆಪತ್ರಿಕೆಯಲ್ಲಿ ಪಠ್ಯಕ್ರಮದಿಂದ ಹೊರತಾದ ಪ್ರಶ್ನೆಗಳಿಲ್ಲ ಎಂದು ಸಮರ್ಥಿಸಿಕೊಂಡರು.
ಆಗ ಪೀಠವು ಆಯುಕ್ತರು ಈ ಸಂಬಂಧ ಅಫಿಡವಿಟ್‌ ಸಲ್ಲಿಸಲಿ ಎಂದು ಸೂಚಿಸಿ ವಿಚಾರಣೆಯನ್ನು ಬುಧವಾರಕ್ಕೆ (ಮಾರ್ಚ್‌ ೧೫) ‌ಮುಂದೂಡಿತು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಬೆಂಗಳೂರಲ್ಲಿ ಒಂದೇ ದಿನ 100ಕ್ಕಿಂತ ಹೆಚ್ಚು ಕೋವಿಡ್‌ ಪ್ರಕರಣಗಳು ದಾಖಲು: ರಾಜ್ಯದಲ್ಲಿ ಏರಿಕೆಯತ್ತ ಕೊರೊನಾ

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement