ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಬಣಕ್ಕೆ ಸೇರ್ಪಡೆಯಾದ ಉದ್ಧವ್ ಠಾಕ್ರೆ ಆಪ್ತ ದೀಪಕ ಸಾವಂತ್

ಮುಂಬೈ: ಶಿವಸೇನಾ (ಯುಬಿಟಿ) ಬಣದ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರಿಗೆ ಮತ್ತೊಂದು ಆಘಾತದಲ್ಲಿ, ರಾಜ್ಯದ ಮಾಜಿ ಆರೋಗ್ಯ ಸಚಿವ ಮತ್ತು ಠಾಕ್ರೆ ಅವರ ವಿಶ್ವಾಸಾರ್ಹ ಸಹಾಯಕ ದೀಪಕ ಸಾವಂತ್ ಅವರು ಪಕ್ಷದ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣವನ್ನು ಸೇರಿದ್ದಾರೆ ಎಂದು ವರದಿಯಾಗಿದೆ. ನಾನು ಡಾ. ದೀಪಕ ಸಾವಂತ್ ಅವರನ್ನು ನಮ್ಮ ಶಿವಸೇನೆ ಪಕ್ಷಕ್ಕೆ ಸ್ವಾಗತಿಸುತ್ತೇನೆ. … Continued

ಚಪ್ಪಲಿಯಲ್ಲಿ 69 ಲಕ್ಷ ರೂ. ಮೌಲ್ಯದ ಚಿನ್ನ ಅಡಗಿಸಿಟ್ಟಿದ್ದ ವ್ಯಕ್ತಿಯನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಿದ ಕಸ್ಟಮ್ಸ್ ಅಧಿಕಾರಿಗಳು | ವೀಕ್ಷಿಸಿ

ನವದೆಹಲಿ : ಚಪ್ಪಲಿಯಲ್ಲಿ ಹುದುಗಿಸಿಟ್ಟು 69.40 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಕಳ್ಳಸಾಗಣೆ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿರುವುದಾಗಿ ಕಸ್ಟಮ್ಸ್ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಮಾರ್ಚ್ 12 ರಂದು ಇಂಡಿಗೋ ವಿಮಾನದ ಮೂಲಕ ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದ ಆರೋಪಿಯನ್ನು ಕಸ್ಟಮ್ಸ್ ಏರ್ ಇಂಟೆಲಿಜೆನ್ಸ್ ಅಧಿಕಾರಿಗಳು ಹಿಡಿದಿದ್ದಾರೆ ಎಂದು ಹಿರಿಯ ಕಸ್ಟಮ್ಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಯಾಣದ ಉದ್ದೇಶವನ್ನು … Continued

ಅಂಕೋಲಾ: ವಿಷ ಸೇವಿಸಿ ಯುವಕ ಆತ್ಮಹತ್ಯೆ

ಅಂಕೋಲಾ: ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಾರವಾಡದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಹಾರವಾಡ ತರಂಗಮೇಟ ನಿವಾಸಿ ಅಜಯ ಕುಲಮಣಿ ಫಂಡಾ(26) ಮೃತ ಯುವಕನಾಗಿದ್ದು ಈತ ಮಲ್ಪೆಯಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಹಾಗೂ ಹಾರವಾಡದ ದುರ್ಗಾದೇವಿ ಜಾತ್ರೆ ಪ್ರಯುಕ್ತ ಒಂದು ವಾರದ ಹಿಂದೆ ಊರಿಗೆ ಆಗಮಿಸಿದ್ದ. ಈತ … Continued

5 ಮತ್ತು 8ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಒಪ್ಪಿಗೆ

ಬೆಂಗಳೂರು : ರಾಜ್ಯದಲ್ಲಿ 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದೆ. 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ಮಾಡಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, 5 ಮತ್ತು 8ನೇ … Continued

ಅಂಕೋಲಾ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಅಂಕೋಲಾ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಕೀಟನಾಶ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬೆಳಂಬಾರದ ತಾಳೇಬೈಲಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮೃತ ವಿದ್ಯಾರ್ಥಿನಿಯನ್ನು ತಾಳೇಬೈಲ್ ನಿವಾಸಿ ಶಿಲ್ಪಾ ಆರ್. ಗೌಡ (17) ಎಂದು ಗುರುತಿಸಲಾಗಿದೆ. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ದ್ವಿತೀಯ ವರ್ಷದ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾಗಿದ್ದ ಈಕೆ ಈಗ ನಡೆಯುತ್ತಿರುವ … Continued

ಪಶ್ಚಿಮ ಬಂಗಾಳದ 29 ಉಪಕುಲಪತಿಗಳ ನೇಮಕಾತಿ ರದ್ದುಗೊಳಿಸಿದ ಕೋಲ್ಕತ್ತಾ ಹೈಕೋರ್ಟ್; ನೇಮಕಕ್ಕೆ ಸರ್ಕಾರಕ್ಕೆ ಅಧಿಕಾರವಿಲ್ಲ ಎಂದ ಹೈಕೋರ್ಟ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳದ ವಿಶ್ವವಿದ್ಯಾಲಯಗಳ ಉಪಕುಲಪತಿಗಳ (ವಿಸಿ) ನೇಮಕ, ಮರುನೇಮಕ ಅಥವಾ ಅಧಿಕಾರಾವಧಿಯನ್ನು ವಿಸ್ತರಿಸಲು ರಾಜ್ಯಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ಕೋಲ್ಕತ್ತಾ ಹೈಕೋರ್ಟ್ ಮಂಗಳವಾರ ಹೇಳಿದೆ. ಆದ್ದರಿಂದ ಪಶ್ಚಿಮ ಬಂಗಾಳ ವಿಶ್ವವಿದ್ಯಾಲಯಗಳ ಕಾಯಿದೆಗೆ ಕೈಗೊಂಡ 2012 ಮತ್ತು 2014 ರಲ್ಲಿ ಮಾಡಿದ ತಿದ್ದುಪಡಿಗಳ ಆಧಾರದ ಮೇಲೆ ಪಶ್ಚಿಮ ಬಂಗಾಳ ಸರ್ಕಾರದಿಂದ ನೇಮಕಗೊಂಡ ಅಥವಾ ಮರುನೇಮಕಗೊಂಡ ರಾಜ್ಯದ … Continued

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಕೋರ್ಟ್ ರಿಲೀಫ್: ನಾಳೆ ವರೆಗೆ ಬಂಧನವಿಲ್ಲ

ಲಾಹೋರ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಬಂಧಿಸುವ ಕಾರ್ಯಾಚರಣೆಯನ್ನು ನಾಳೆ (ಮಾರ್ಚ್‌ ೧೬) ಬೆಳಗ್ಗೆ 10 ಗಂಟೆಯವರೆಗೆ ಸ್ಥಗಿತಗೊಳಿಸುವಂತೆ ಲಾಹೋರ್ ನ್ಯಾಯಾಲಯ ಪಾಕಿಸ್ತಾನ ಪೊಲೀಸರಿಗೆ ಆದೇಶಿಸಿದೆ. ಪೊಲೀಸರು ಇಂದು, ಬುಧವಾರ ಲಾಹೋರ್‌ನಲ್ಲಿರುವ ಅವರ ಮನೆಯ ಹೊರಗೆ ಖಾನ್ ಅವರ ಬೆಂಬಲಿಗರೊಂದಿಗೆ ಜನಸಮೂಹದೊಂದಿಗೆ ಸಂಘರ್ಷ ನಡೆಸಿದರು. ಇಮ್ರಾನ್‌ ಖಾನ್‌ ಬೆಂಬಲಿಗರು ಪೊಲೀಸರತ್ತ ಕಲ್ಲುಗಳನ್ನು ಎಸೆದರು. … Continued

ಯುಗಾದಿಗೆ ಮೊದಲೇ ಕೆಪಿಟಿಸಿಎಲ್‌, ಎಲ್ಲ ಎಸ್ಕಾಂ ನೌಕರರಿಗೆ ಸಿಹಿ ಸುದ್ದಿ: ಶೇ.20ರಷ್ಟು ವೇತನ ಹೆಚ್ಚಳ ಮಾಡಲು ಸರ್ಕಾರದ ನಿರ್ಧಾರ

ಬೆಂಗಳೂರು: ಮುಷ್ಕರಕ್ಕೆ ಕರೆ ನೀಡಿದ ಬೆನ್ನಲ್ಲೇ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಮಮಿತ (KPTCL) ಮತ್ತು ಎಲ್ಲ ಎಸ್ಕಾಂಗಳ ನೌಕರರ ವೇತನ ಹೆಚ್ಚಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಈ ಮೂಲಕ ರಾಜ್ಯ ಸರ್ಕಾರವು ಕೆಪಿಟಿಸಿಎಲ್ ಹಾಗೂ ಎಸ್ಕಾಂ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಕೆಪಿಟಿಸಿಎಲ್ ಹಾಗೂ ಎಲ್ಲಾ ಎಸ್ಕಾಂ ನೌಕರರ ವೇತನವನ್ನು ಹೆಚ್ಚಳ ಮಾಡಿ … Continued

ಅದಾನಿ ಕುರಿತ ಹಿಂಡೆನ್‌ಬರ್ಗ್ ವರದಿ ತನಿಖೆಗೆ ಒತ್ತಾಯಿಸಿ ವಿಪಕ್ಷದ ಸಂಸದರಿಂದ ಸಂಸತ್ತಿನಿಂದ ಇ.ಡಿ ಕಚೇರಿವರೆಗೆ ಮೆರವಣಿಗೆ

ನವದೆಹಲಿ: ಅದಾನಿ ವಿವಾದದ ಬಗ್ಗೆ ತನಿಖೆಗೆ ಒತ್ತಾಯಿಸಿ 18 ವಿರೋಧ ಪಕ್ಷಗಳ ನಾಯಕರು ಇಂದು, ಬುಧವಾರ ಮಧ್ಯಾಹ್ನ ಸಂಸತ್ತಿನಿಂದ ಆರಂಭವಾದ ಮೆರವಣಿಗೆಯನ್ನು ದೆಹಲಿ ಪೊಲೀಸರು ತಡೆದಿದ್ದಾರೆ. ಅದಾನಿ ಗ್ರೂಪ್‌ ಕುರಿತು ಹಿಂಡೆನ್‌ಬರ್ಗ್ ವರದಿ ಬಗ್ಗೆ ತನಿಖೆಗೆ ಒತ್ತಾಯಿಸಿ ಪ್ರತಿಪಕ್ಷ ನಾಯಕರು ದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯದ (ಇಡಿ) ಕಚೇರಿಗೆ ಮೆರವಣಿಗೆ ನಡೆಸಲು ಮುಂದಾಗಿದ್ದಾರೆ. ದೆಹಲಿ ಪೊಲೀಸರು ಇ.ಡಿ. … Continued

ತಾಯಿ ಗರ್ಭದೊಳಗಿದ್ದಗಾಲೇ ಮಗುವಿನ ದ್ರಾಕ್ಷಿ ಗಾತ್ರದ ಹೃದಯದ ಕ್ಲಿಷ್ಟಕರ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದ ಏಮ್ಸ್ ವೈದ್ಯರ ತಂಡ…!

ನವದೆಹಲಿ: ದೆಹಲಿಯ ಏಮ್ಸ್‌ನ ವೈದ್ಯರ ತಂಡವು ತಾಯಿ ಗರ್ಭದೊಳಗಿದ್ದ ಭ್ರೂಣದ ದ್ರಾಕ್ಷಿ ಗಾತ್ರದ ಹೃದಯದ ಸಂಕೀರ್ಣವಾದ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದ್ದಾರೆ…! ಮೂರು ಬಾರಿ ಗರ್ಭಪಾತವಾಗಿದ್ದ 28 ವರ್ಷದ ಮಹಿಳೆಯೊಬ್ಬರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಮಗುವಿನ ಹೃದಯದಲ್ಲಿ ಸಮಸ್ಯೆ ಇರುವುದು ಪತ್ತೆಯಾಗಿತ್ತು. ಗರ್ಭದಲ್ಲಿರುವ ಭ್ರೂಣದ ಹೃದಯ ಸ್ಥಿತಿಯ ಬಗ್ಗೆ ವೈದ್ಯರು ತಿಳಿಸಿದಾಗ ಮಹಿಳೆ ನಿರಾಶೆಗೊಂಡಿದ್ದಾರೆ. … Continued