ಅಂಕೋಲಾ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಅಂಕೋಲಾ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಕೀಟನಾಶ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬೆಳಂಬಾರದ ತಾಳೇಬೈಲಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಮೃತ ವಿದ್ಯಾರ್ಥಿನಿಯನ್ನು ತಾಳೇಬೈಲ್ ನಿವಾಸಿ ಶಿಲ್ಪಾ ಆರ್. ಗೌಡ (17) ಎಂದು ಗುರುತಿಸಲಾಗಿದೆ. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ದ್ವಿತೀಯ ವರ್ಷದ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾಗಿದ್ದ ಈಕೆ ಈಗ ನಡೆಯುತ್ತಿರುವ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಎರಡು ವಿಷಯಗಳ ಪರೀಕ್ಷೆ ಸಹ ಬರೆದು ಮುಂದಿನ ಪರೀಕ್ಷೆ ತಯಾರಿಯಲ್ಲಿದ್ದಳು ಎಂದು ಹೇಳಲಾಗಿದೆ.
ಈಕೆ ಬುಧವಾರ ಬೆಳಗ್ಗೆ ತಂದೆ ತಾಯಿ ಕೃಷಿ ಭೂಮಿಗೆ ತೆರಳಿದ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಕೀಟನಾಶಕ ಸೇವಿಸಿದ್ದಾಳೆ. ವಾಂತಿ ಮಾಡಿಕೊಂಡು ಅಸ್ವಸ್ಥಗೊಂಡ ಸ್ಥಿತಿಯಲ್ಲಿದ್ದ ಅವಳನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದ ಶಿಲ್ಪಾ ಗೌಡ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಮಗಳ ಸಾವಿನಿಂದಾಗಿ ಬಡ ಕುಟುಂಬದ ತಂದೆ ತಾಯಿ ಆಕ್ರಂದನ ಮುಗಿಲು ಮುಟ್ಟಿದ್ದು ಬೆಳಂಬಾರದ ತಾಳೇಬೈಲ್ ಗ್ರಾಮದಲ್ಲಿ ಶೋಕದ ವಾತಾವರಣ ಕಂಡು ಬಂದಿದೆ.

ಪ್ರಮುಖ ಸುದ್ದಿ :-   ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement