ಬಿಜೆಪಿ ಎಂಎಲ್‌ಸಿ ಆರ್‌.ಶಂಕರ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ: ಹಂಚಲು ತಂದಿದ್ದ ಸೀರೆಗಳು, ಸ್ಕೂಲ್ ಬ್ಯಾಗ್ ವಶಕ್ಕೆ

posted in: ರಾಜ್ಯ | 0

ಹಾವೇರಿ: ಮಾಜಿ ಸಚಿವ, ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಆರ್.ಶಂಕರ್ ಅವರ ರಾಣೇಬೆನ್ನೂರು (Ranebennuru) ನಗರದ ಬೀರೇಶ್ವರ ಬಡವಾಣೆಯಲ್ಲಿರುವ ನಿವಾಸದ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಮಂಗಳವಾರ ರಾತ್ರಿ ದಾಳಿ ನಡೆಸಿದೆ.
ಹಾವೇರಿ ವಾಣಿಜ್ಯ ತೆರಿಗೆ ಆಯುಕ್ತರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಕ್ಷೇತ್ರದ ಜನತೆಗೆ ವಿತರಿಸಲು ತಂದಿದ್ದ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಗೃಹ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕರಿಗೆ ಎಂದು ವಿತರಣೆ ಮಾಡಲು ತಂದಿರುವ ವಸ್ತುಗಳನ್ನು ಇರಿಸಲಾಗಿತ್ತು. ಶಂಕರ ಅವರ‌ ಭಾವಚಿತ್ರವುಳ್ಳ ಸೀರೆ ಬಾಕ್ಸ್, ತಟ್ಟೆ ,ಲೋಟ ಹಾಗೂ ಶಾಲಾ ಬ್ಯಾಗ್​ಗಳನ್ನು ವಶಕ್ಕೆ ಪಡೆಯಲಾಗಿದೆ. ದಾಳಿ ವೇಳೆ ಆರ್. ಶಂಕರ್ ಮನೆಯಲ್ಲಿದ್ದರು ಎಂದು ವರದಿಯಾಗಿದೆ.ದಾಳಿ ವೇಳೆ ಅಧಿಕಾರಿಗಳು ವಶಕ್ಕೆ ಪಡೆದ ವಸ್ತುಗಳ ದಾಖಲೆ ಪತ್ರ, ಬಿಲ್‌ಗಳನ್ನು ಪರಿಶೀಲನೆ ನಡೆಸಿದ್ದಾರೆ.
6000ಕ್ಕೂ ಹೆಚ್ಚು ಸೀರೆ, 9000 ಕ್ಕೂ ಹೆಚ್ಚು ಶಾಲಾ ಕಾಲೇಜು ಬ್ಯಾಗ್ ಗಳು, ತಟ್ಟೆಲೋಟಗಳನ್ನು ವಶಕ್ಕೆ ಪಡೆಯಲಾಗಿದೆ. ಸುಮಾರು 30-40 ಲಕ್ಷ ಬೆಲೆಬಾಳುವ ಗೃಹಪಯೋಗಿ ವಸ್ತುಗಳು ವಶಕ್ಕೆ ಪಡೆಯಲಾಗಿದೆ. ಸುಮಾರು ಏಳು ಗಂಟೆ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಈ ಎಲ್ಲ ವಸ್ತುಗಳನ್ನು ಅಧಿಕಾರಿಗಳು ಪೊಲೀಸರ‌ ವಶಕ್ಕೆ ನೀಡಿದ್ದಾರೆ. ಎಲ್ಲ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಹಾಜರು ಪಡೆಸಿ, ಒಪ್ಪಿಗೆ ಪಡೆದು ಎಫ್‌ಐಆರ್‌ ದಾಖಲಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ
ಚುನಾವಣಾ ಪೂರ್ವದಲ್ಲೇ ಮತದಾರರಿಗೆ ಆಮಿಷ ಒಡ್ಡಲು ವಸ್ತುಗಳನ್ನು ವಿತರಿಸಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆ ಈ ದಾಳಿ ನಡೆದಿದೆ ಎನ್ನಲಾಗಿದೆ.
ವಾಣಿಜ್ಯ ತೆರಿಗೆ ಇಲಾಖೆ ದಾಳಿಗೂ ಬಿಜೆಪಿಗೂ ಸಂಬಂಧವಿಲ್ಲ….
ವಿಧಾನ ಪರಿಷತ್ ಸದಸ್ಯ ಆರ್. ಶಂಕರ ಅವರ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಬುಧವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈ ದಾಳಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ತನಿಖಾ ಸಂಸ್ಥೆಗಳು ಎಷ್ಟು ಮುಕ್ತವಾಗಿವೆ ಎನ್ನುವುದಕ್ಕೆ ಇದು ಸಾಕ್ಷಿ. ತಪ್ಪು ನಡೆದಿದ್ದರೆ ಸರ್ಕಾರ ಶಿಕ್ಷಿಸುವ ಕೆಲಸ ಮಾಡುತ್ತದೆ. ಆರ್ .ಶಂಕರ ಅವರ ವಿಚಾರದಲ್ಲಿಯೂ ತಪ್ಪು ಕಂಡುಬಂದರೆ ತನಿಖಾ ಸಂಸ್ಥೆ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಲಂಚ ಪ್ರಕರಣ: ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಬಂಧನ

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement