ಯುಗಾದಿಗೆ ಮೊದಲೇ ಕೆಪಿಟಿಸಿಎಲ್‌, ಎಲ್ಲ ಎಸ್ಕಾಂ ನೌಕರರಿಗೆ ಸಿಹಿ ಸುದ್ದಿ: ಶೇ.20ರಷ್ಟು ವೇತನ ಹೆಚ್ಚಳ ಮಾಡಲು ಸರ್ಕಾರದ ನಿರ್ಧಾರ

posted in: ರಾಜ್ಯ | 0

ಬೆಂಗಳೂರು: ಮುಷ್ಕರಕ್ಕೆ ಕರೆ ನೀಡಿದ ಬೆನ್ನಲ್ಲೇ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಮಮಿತ (KPTCL) ಮತ್ತು ಎಲ್ಲ ಎಸ್ಕಾಂಗಳ ನೌಕರರ ವೇತನ ಹೆಚ್ಚಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಈ ಮೂಲಕ ರಾಜ್ಯ ಸರ್ಕಾರವು ಕೆಪಿಟಿಸಿಎಲ್ ಹಾಗೂ ಎಸ್ಕಾಂ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ.
ಕೆಪಿಟಿಸಿಎಲ್ ಹಾಗೂ ಎಲ್ಲಾ ಎಸ್ಕಾಂ ನೌಕರರ ವೇತನವನ್ನು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು,2022 ರ ಏಪ್ರಿಲ್ ನಿಂದ ಪೂರ್ವನ್ವಯವಾಗುವಂತೆ ಶೇ. 20 ರಷ್ಟು ವೇತನ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ. ವೇತನ ಪರಿಷ್ಕರಣೆಗೆ ಪಟ್ಟು ಹಿಡಿದು, ಗುರುವಾರ (ಮಾರ್ಚ್‌ 16)ದಿಂದ ಎಸ್ಕಾಂ ಸಿಬ್ಬಂದಿ ಅನಿರ್ದಿಷ್ಟ ಅವಧಿಗೆ ಮುಷ್ಕರಕ್ಕೆ ಮುಂದಾದ ಬೆನ್ನಲ್ಲೇ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಇಂಧನ ಸಚಿವರು ಈ ಸೂಚನೆ ನೀಡಿದ್ದು, ಸಿಬ್ಬಂದಿಗೆ 2022ರಿಂದ ಪೂರ್ವಾನ್ವಯವಾಗುವಂತೆ ಶೇ.20ರಷ್ಟು ವೇತನ ಹೆಚ್ಚಳ ಮಾಡಲು ಆದೇಶಿಸಿದ್ದಾರೆ.
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ನೌಕರರು ಗುರುವಾರದಿಂದ ಇಡೀ ರಾಜ್ಯದ ಎಲ್ಲಾ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಕೆಲಸ ಸ್ಥಗಿತ ಮಾಡಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದರು.. ಸುಮಾರು 60 ಸಾವಿರ ನೌಕರರು ಮುಷ್ಕರದಲ್ಲಿ ಭಾಗಿಯಾಗಲಿದ್ದರು. ತಮಗೆ ಶೇ. 40% ವೇತನ ಹೆಚ್ಚಳ ಆಗಬೇಕು. 2022ರ ಏಪ್ರಿಲ್ 1 ರಿಂದ ಬಾಕಿ ವೇತನ ಬಿಡುಗಡೆ ಮಾಡಬೇಕು. ತಕ್ಷಣವೇ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ವಿದ್ಯುತ್ ಕಂಪನಿಗಳ ಖಾಸಗೀಕರಣ ಉದ್ದೇಶದ ಪ್ರಸ್ತಾವಿತ ಮಸೂದೆಯನ್ನು ಹಿಂಪಡೆಯಬೇಕು ಎಂದು ಅವರು ಬೇಡಿಕೆ ಮುಂದಿಟ್ಟಿದ್ದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟದ ಹಿಂದೆ ಕಾಂಗ್ರೆಸ್ ಕೈವಾಡ : ಸಿಎಂ ಬೊಮ್ಮಾಯಿ ಆರೋಪ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement