5 ಮತ್ತು 8ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಒಪ್ಪಿಗೆ

ಬೆಂಗಳೂರು : ರಾಜ್ಯದಲ್ಲಿ 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದೆ.
5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ಮಾಡಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆಗೆ ಗ್ರೀನ್ ಸಿಗ್ನಲ್ ನೀಡಿದೆ.  ಸರ್ಕಾರದ ತೀರ್ಮಾನದಂತೆ ವಿದ್ಯಾರ್ಥಿಗಳಿಗೆ ಮಾ.27ರಿಂದ ಬೋರ್ಡ್‌ ಪರೀಕ್ಷೆ ನಡೆಸಲಾಗುತ್ತದೆ.
ಮಾರ್ಚ್‌ 27ರಿಂದ ಪರೀಕ್ಷೆ ನಡೆಸಬೇಕು. ಕೂಡಲೇ ಪರೀಕ್ಷಾ ವೇಳಾಪಟ್ಟಿಯನ್ನು ಸಿದ್ಧಪಡಿಸಬೇಕು ಎಂದು ಸೂಚನೆ ನೀಡಿದೆ. ಹಾಗೂ ಪರೀಕ್ಷೆ ಬರೆದ ಯಾವುದೇ ವಿದ್ಯಾರ್ಥಿಗಳನ್ನು ಅನುತ್ತೀರ್ಣ (ಫೇಲ್‌) ಮಾಡಬಾರದು ಎಂದು ಶಿಕ್ಷಣ ಇಲಾಖೆಗೆ ನಿರ್ದೇಶನವನ್ನು ನೀಡಿದೆ.
ಅಲ್ಲದೆ, ಪಠ್ಯಕ್ರಮದಲ್ಲಿ ಉಲ್ಲೇಖಿಸಿರುವುದನ್ನು ಬಿಟ್ಟು ಬೇರೆ ಪ್ರಶ್ನೆಗಳನ್ನು ಕೇಳುವಂತಿಲ್ಲ, ಜತೆಗೆ, ಪರೀಕ್ಷೆಯ ಫಲಿತಾಂಶವನ್ನು ಸಾರ್ವಜನಿಕವಾಗಿ ಪ್ರಕಟಿಸುವಂತಿಲ್ಲ. ಫಲಿತಾಂಶವನ್ನು ಶಾಲೆಗೆ ಮಾತ್ರವೇ ತಲುಪಿಸಬೇಕು. ಯಾರನ್ನೂ ಅನುತ್ತೀರ್ಣಗೊಳಿಸುವಂತಿಲ್ಲ ಎಂದು ಪೀಠವು ಸೂಚಿಸಿದೆ.
ಪ್ರಸಕ್ತ ಶೈಕ್ಷಣಿಕ ವರ್ಷದಿಂದ 5 ಮತ್ತು 8ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿತ್ತು. ಇದನ್ನು ವಿರೋಧಿಸಿ ಪೋಷಕರ ಸಂಘಟನೆ ಕೋರ್ಟ್ ಮೊರೆ ಹೋಗಿತ್ತು. ಪೋಷಕರ ಮನವಿಗೆ ಸಮ್ಮತಿಸಿದ್ದ ಹೈಕೋರ್ಟ್‌ ಏಕಸದಸ್ಯ ಪೀಠವು ಸರ್ಕಾರದ ಆದೇಶಕ್ಕೆ ತಡೆ ನೀಡಿತ್ತು. ಇದನ್ನು ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದು, ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡುವಂತೆ ವಿಭಾಗೀಯ ಪೀಠಕ್ಕೆ ಸರ್ಕಾರದ ಪರ ವಕೀಲರು ಮನವಿ ಮಾಡಿದ್ದರು. ಇದರ ವಿಚಾರಣೆ ನಡೆಸಿದ ಹೈಕೋರ್ಟ್, ಅಭಿಪ್ರಾಯ ಸಲ್ಲಿಸುವಂತೆ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಅಫಿಡ್ವಿಟ್‌ ಸಲ್ಲಿಸುವಂತೆ ಸೂಚಿಸಿತ್ತು.

ಪ್ರಮುಖ ಸುದ್ದಿ :-   ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣ : ಪ್ರಮುಖ ಆರೋಪಿ ಬಂಧನ

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement