ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ

posted in: ರಾಜ್ಯ | 0

ಬೆಂಗಳೂರು : ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕೆಲವು ಸ್ಥಳಗಳಲ್ಲಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಇಲಾಖೆ ತಿಳಿಸಿದೆ. ಕರ್ನಾಟಕದ ಒಳನಾಡಿನ ಕೆಲವು ಸ್ಥಳಗಳು ಮತ್ತು ಕರಾವಳಿ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಶುಕ್ರವಾರವೂ ಮಳೆಯಾಗುವ ನಿರೀಕ್ಷೆಯಿದೆ ಎಂದು ಅದು ಹೇಳಿದೆ. ಅಲ್ಲದೆ, ಮೈಸೂರು, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ, … Continued

ಕೋವಿಡ್-19 ಪ್ರಕರಣ ಹೆಚ್ಚಳ : ತ್ವರಿತ-ಪರಿಣಾಮಕಾರಿ ಕ್ರಮ ತೆಗೆದುಕೊಳ್ಳಿ ಎಂದು ಕರ್ನಾಟಕ ಸೇರಿ 6 ರಾಜ್ಯಗಳಿಗೆ ಪತ್ರ ಬರೆದ ಕೇಂದ್ರ

ನವದೆಹಲಿ: ಮಹಾರಾಷ್ಟ್ರ, ಗುಜರಾತ್, ತೆಲಂಗಾಣ, ತಮಿಳುನಾಡು, ಕೇರಳ ಮತ್ತು ಕರ್ನಾಟಕ ಈ ಆರು ರಾಜ್ಯಗಳಿಗೆ ಕೇಂದ್ರವು ಗುರುವಾರ ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟಲು ಮೌಲ್ಯಮಾಪನ ಆಧಾರಿತ ವಿಧಾನವನ್ನು ಅನುಸರಿಸಲು ಸೂಚಿಸಿದೆ. ಕೆಲವು ರಾಜ್ಯಗಳು ಹೆಚ್ಚಿನ ಸಂಖ್ಯೆಯ ಪ್ರಕರಣಗಳನ್ನು ವರದಿ ಮಾಡುತ್ತಿವೆ, ಇದು ಸ್ಥಳೀಯವಾಗಿ ಸೋಂಕಿನ ಹರಡುವಿಕೆಯನ್ನು ಸೂಚಿಸುತ್ತದೆ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ … Continued

ಚುನಾವಣಾ ಕಾರ್ಯದಲ್ಲಿರುವ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ ವರ್ಗಾವಣೆಗೆ ರಾಜ್ಯ ಚುನಾವಣಾ ಆಯೋಗದ ಒಪ್ಪಿಗೆ ಪಡೆಯಬೇಕು: ಮುಖ್ಯ ಕಾರ್ಯದರ್ಶಿಗೆ ಸಿಇಒ ಪತ್ರ

posted in: ರಾಜ್ಯ | 0

ಬೆಂಗಳೂರು: ರಾಜ್ಯ ಚುನಾವಣಾ ಆಯೋಗದ (ಎಸ್‌ಇಸಿ) ಸಮಾಲೋಚನೆಯಿಲ್ಲದೆ ಚುನಾವಣಾ ಕರ್ತವ್ಯದಲ್ಲಿ ತೊಡಗಿರುವ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಾವಣೆ ಮಾಡಿರುವುದನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜಕುಮಾರ ಮೀನಾ ಆಕ್ಷೇಪಿಸಿದ್ದಾರೆ. ರಾಜ್ಯ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಪತ್ರ ಬರೆದಿರುವ ಅವರು, 2023ರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದೆ ಮತ್ತು ಭಾರತ ಚುನಾವಣಾ ಆಯೋಗವು ಮಾದರಿ ನೀತಿ … Continued

ಅಮೃತಾ ಫಡ್ನವಿಸ್‌ಗೆ ಲಂಚದ ಆಫರ್‌ ನೀಡಿದ್ದ ಬುಕ್ಕಿ ಪುತ್ರಿಯ ಬಂಧನ

ಮುಂಬೈ: ಡಿಸೈನರ್ ಎಂದು ಪೋಸ್ ನೀಡಿ ತನ್ನ ತಂದೆಗೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣದಲ್ಲಿ ಮಧ್ಯಪ್ರವೇಶಿಸುವಂತೆ ಕೋರಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನವಿಸ್ ಅವರಿಗೆ ಒಂದು ಕೋಟಿ ಲಂಚದ ಆಫರ್‌ ನೀಡಿದ್ದ ವಾಂಟೆಡ್ ಬುಕ್ಕಿಯ ಮಗಳನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಭ್ರಷ್ಟಾಚಾರ ತಡೆ ಕಾಯ್ದೆ (ಪಿಸಿ) ಮತ್ತು ಭಾರತೀಯ ದಂಡ ಸಂಹಿತೆಯ … Continued

ಯು ಟ್ಯೂಬ್‌ ಗ್ರಾಹಕರೇ ಹುಷಾರ್‌…: ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ ಬಳಸಿ ರಚಿಸಿದ ಯು ಟ್ಯೂಬ್‌ ವೀಡಿಯೊ ಬಳಸಿ ಮಾಹಿತಿ ಕದಿಯುತ್ತಿರುವ ಹ್ಯಾಕರ್‌ಗಳು…!

ಹ್ಯಾಕರ್‌ಗಳು ಜನರನ್ನು ಹ್ಯಾಕ್ ಮಾಡಲು ಈಗ ಕೃತಕ ಬುದ್ಧಿಮತ್ತೆ (AI) ಬಳಸಿಕೊಳ್ಳುತ್ತಿರುವುದು ಕಂಡುಬರುತ್ತಿದೆ. ಮಾಲ್‌ವೇರ್ ಅನ್ನು ಹರಡಲು ಮತ್ತು ಗೌಪ್ಯ ಮಾಹಿತಿಯನ್ನು ಕದಿಯಲು ಹ್ಯಾಕರ್‌ಗಳು YouTube ನಲ್ಲಿ ಕೃತಕ ಬುದ್ಧಿಮತ್ತೆ (AI)ಯಲ್ಲಿ ರಚಿತವಾದ ವೀಡಿಯೊಗಳನ್ನು ಮಾಹಿತಿಯನ್ನು ಹ್ಯಾಕ್‌ ಮಾಡಲು ಬಳಸುತ್ತಿದ್ದಾರೆ ಎಂದು ಹೊಸ ವರದಿಯೊಂದು ಹೇಳಿಕೊಂಡಿದೆ. ಐಟಿ ಸೆಕ್ಯುರಿಟಿ ಇಂಟೆಲಿಜೆನ್ಸ್ ಕಂಪನಿ ಕ್ಲೌಡ್‌ಸೆಕ್ ಪ್ರಕಾರ, ವಿಡಾರ್, … Continued

ಹುಬ್ಬಳ್ಳಿ – ಬನಾರಸ್ ನಡುವೆ ಬೇಸಿಗೆಯ ವಿಶೇಷ ರೈಲು ಸಂಚಾರ

posted in: ರಾಜ್ಯ | 0

ಹುಬ್ಬಳ್ಳಿ : ಬೇಸಿಗೆ ರಜೆಯ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಕಡಿಮೆಗೊಳಿಸಲು ಒಂದು ಟ್ರಿಪ್‌ ಬೇಡಿಕೆಯ ಮೇರೆಗೆ ಹುಬ್ಬಳ್ಳಿ ರೈಲ್ವೆ ನಿಲ್ದಾಣ ಮತ್ತು ಬನಾರಸ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲ್‌ (07347 ಮತ್ತು 07348) ಅನ್ನು ಓಡಿಸಲು ನೈಋತ್ಯ ರೈಲ್ವೆ ವಲಯವು ನಿರ್ಧರಿಸಿದೆ ಎಂದು ಪ್ರಹ್ಲಾದ ಜೋಶಿ ತಿಳಿಸಿದ್ದಾರೆ. ಈ ವಿಶೇಷ ಬೇಸಿಗೆ ರೈಲು ಸಂಖ್ಯೆ … Continued

ಚುನಾವಣೆ ಸನಿಹದಲ್ಲೇ ಯಡಿಯೂರಪ್ಪ ಆಪ್ತ, ಪರಿಷತ್‌ ಮಾಜಿ ಸದಸ್ಯ ಮೋಹನ ಲಿಂಬಿಕಾಯಿ ಬಿಜೆಪಿಗೆ ಗುಡ್ ಬೈ

posted in: ರಾಜ್ಯ | 0

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಆಪ್ತ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಹುಬ್ಬಳ್ಳಿಯ ಮೋಹನ ಲಿಂಬಿಕಾಯಿ ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ. ಅವರು ಬೆಳಗಾವಿಯಲ್ಲಿ ಸಂಜೆ ನಡೆಯಲಿರುವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸೇರಲಿದ್ದಾರೆ ಎಂದು ಹೇಳಲಾಗಿದೆ. ಈ ಬಾರಿಯ ಚುನಾವಣೆಯಲ್ಲಿ ಅವರು ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆ ಎಂಬ ಮಾತುಗಳಿವೆ. ಗುರುವಾರ ಬಿಜೆಪಿ … Continued

ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಡ್ರಮ್‌ನಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣ: ಮೂವರ ಬಂಧನ

posted in: ರಾಜ್ಯ | 0

ಬೆಂಗಳೂರು: ರೈಲ್ವೆ ನಿಲ್ದಾಣದ ಮುಂದೆ ಡ್ರಮ್‌ನಲ್ಲಿ ಪತ್ತೆಯಾದ ಮಹಿಳೆಯ ಕೊಲೆ ಪ್ರಕರಣವನ್ನು ಬೇಧಿಸಿರುವ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿದ್ದಾರೆ. ಕೊಲೆಯಾದ ಮಹಿಳೆಯನ್ನು ಬಿಹಾರ ರಾಜ್ಯದ ಅರಾರಿಯಾ ಜಿಲ್ಲೆ ನಿವಾಸಿ ತಮನ್ನಾ(27) ಎಂದು ಗುರುತಿಸಲಾಗಿದೆ. ಈ ಸಂಬಂಧ ಬಿಹಾರ ಮೂಲದ ರಾಜ್ಯದ ಕಮಾಲ್(21), ತನ್ವೀರ್(28), ಶಾಕೀಬ್(25) ಬಂಧಿತ ಆರೋಪಿಗಳು. ಈ ಪ್ರಕರಣದಲ್ಲಿ ಉಳಿದ … Continued

ಜೈಲಿನಲ್ಲಿರುವ ಮನೀಶ್ ಸಿಸೋಡಿಯಾ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲು

ನವದೆಹಲಿ: ದೆಹಲಿ ಸರ್ಕಾರದ ‘ಫೀಡ್‌ಬ್ಯಾಕ್ ಯುನಿಟ್’ ಪ್ರಕರಣದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ ಐವರ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಎಫ್‌ಐಆರ್ ದಾಖಲಿಸಿದೆ. ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ಅವರನ್ನು ಫೆಬ್ರವರಿ 26 ರಂದು ಸಿಬಿಐ ಬಂಧಿಸಿತ್ತು. ಈಗ 2015 ರಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ)ದ … Continued

ಅಮೆರಿಕದ ಜಿಮ್‌ನಲ್ಲಿ ಪಂಜಾಬ್‌ ನಟನ ಮೇಲೆ ಚಾಕುವಿನಿಂದ ಹಲ್ಲೆ : ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆ

ನವದೆಹಲಿ : ಅಮೆರಿಕದ ಜಿಮ್‌ನಲ್ಲಿ ಪಂಜಾಬಿ ನಟ ಅಮನ್ ಧಲಿವಾಲ್ ಅವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ನಡೆದಿದೆ. ಚಾಕು ದಾಳಿಯಲ್ಲಿ ನಟ ತೀವ್ರವಾಗಿ ಗಾಯಗೊಂಡಿದ್ದು, ದುಷ್ಕರ್ಮಿ ಆತನನ್ನು ಹಿಡಿದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ನಟ ಜಿಮ್‌ನಲ್ಲಿ ವ್ಯಾಯಾಮ ಮಾಡುವ ವೇಳೆ ದಾಳಿ ನಡೆದಿದೆ ಎಂದು ವರದಿಯಾಗಿದೆ. ಇಡೀ ಘಟನೆ ಸಿಸಿಟಿವಿ … Continued