ಕಾರವಾರ, ಹಾವೇರಿ, ರಾಣೆಬೆನ್ನೂರು ಸೇರಿ 34 ನಗರಗಳಲ್ಲಿ ಜಿಯೋ ಟ್ರೂ 5ಜಿ ಸೇವೆ ಆರಂಭ

posted in: ರಾಜ್ಯ | 0

ಬೆಂಗಳೂರು : ರಿಲಯನ್ಸ್ ಜಿಯೋ ಕಾರವಾರ, ರಾಣೆಬೆನ್ನೂರು, ಹಾವೇರಿಯಲ್ಲಿ ಜಿಯೋ ಟ್ರೂ 5ಜಿ ಸೇವೆ ಗುರುವಾರ ಮಾರ್ಚ್ 15ರಿಂದ ಆರಂಭಿಸಿದೆ. ಕರ್ನಾಟಕದ ಈ 3 ನಗರ ಸೇರಿದಂತೆ ದೇಶದ ಒಟ್ಟು 34 ಹೊಸ ನಗರಗಳಲ್ಲಿ ತನ್ನ ಟ್ರೂ 5G ಸೇವೆಗಳನ್ನು ಪ್ರಾರಂಭಿಸುವುದಾಗಿ ಘೋಷಿಸಿತು. ಇದರೊಂದಿಗೆ ದೇಶದ 365 ನಗರಗಳಲ್ಲಿ ಜಿಯೋ ಟ್ರೂ 5ಜಿ ಸೇವೆಗಳು ಲಭ್ಯ ಆಗಲಿವೆ.
ಹೆಚ್ಚಿನ ವೇಗದ, ಲೋ- ಲೇಟೇನ್ಸಿ, ಅದ್ವಿತೀಯ ಟ್ರೂ 5ಜಿ ಸೇವೆಗಳ ತಾಂತ್ರಿಕ ಪ್ರಯೋಜನಗಳನ್ನು ಈ ನಗರಗಳ ಜನರು ಮತ್ತು ವ್ಯವಹಾರಗಳಿಗೆ ಲಭ್ಯವಾಗುವಂತೆ ಮಾಡಲಾಗುತ್ತದೆ. ಪ್ರವಾಸೋದ್ಯಮ, ಉತ್ಪಾದನೆ, ಎಸ್ ಎಂಇಗಳು, ಆಡಳಿತ, ಶಿಕ್ಷಣ, ಆರೋಗ್ಯ, ಕೃಷಿ, ಆಟೋಮೇಷನ್, ಕೃತಕ ಬುದ್ಧಿಮತ್ತೆ, ಗೇಮಿಂಗ್ ಮತ್ತು ಐಟಿ ಈ ಕ್ಷೇತ್ರಗಳಲ್ಲಿ ಹೊಸ ಬೆಳವಣಿಗೆಯ ಅವಕಾಶಗಳನ್ನು ತೆರೆಯುತ್ತದೆ.
ಈ ಆರಂಭದ ಬಗ್ಗೆ ಪ್ರತಿಕ್ರಿಯಿಸಿದ ಜಿಯೋ ವಕ್ತಾರರು, 2023ರ ಡಿಸೆಂಬರ್ ವೇಳೆಗೆ ಜಿಯೋ ಟ್ರೂ 5ಜಿ ದೇಶದ ಪ್ರತಿ ಪಟ್ಟಣವನ್ನು ತಲುಪಲಿದೆ. ಭಾರತವನ್ನು ಡಿಜಿಟಲ್ ಸೊಸೈಟಿಯನ್ನಾಗಿ ಪರಿವರ್ತಿಸುವ ಜಿಯೋ ಬದ್ಧತೆಗೆ ಇದು ಸಾಕ್ಷಿಯಾಗಿದೆ. ತಮ್ಮ ಪ್ರದೇಶಗಳನ್ನು ಡಿಜಿಟಲೈಸ್ ಮಾಡುವುದಕ್ಕೆ ಬೆಂಬಲ ನೀಡಿದ ರಾಜ್ಯ ಸರ್ಕಾರಗಳು ಮತ್ತು ಆಡಳಿತಗಾರರಿಗೆ ನಾವು ಕೃತಜ್ಞರಾಗಿರುತ್ತೇವೆ ಎಂದು ತಿಳಿಸಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಲಂಚ ಪ್ರಕರಣ: ಶಾಸಕ ಮಾಡಾಳು ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ವಜಾ ; ಮತ್ತೆ ಬಂಧನದ ಭೀತಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement