ಚುನಾವಣಾ ಕಾರ್ಯದಲ್ಲಿರುವ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ ವರ್ಗಾವಣೆಗೆ ರಾಜ್ಯ ಚುನಾವಣಾ ಆಯೋಗದ ಒಪ್ಪಿಗೆ ಪಡೆಯಬೇಕು: ಮುಖ್ಯ ಕಾರ್ಯದರ್ಶಿಗೆ ಸಿಇಒ ಪತ್ರ

posted in: ರಾಜ್ಯ | 0

ಬೆಂಗಳೂರು: ರಾಜ್ಯ ಚುನಾವಣಾ ಆಯೋಗದ (ಎಸ್‌ಇಸಿ) ಸಮಾಲೋಚನೆಯಿಲ್ಲದೆ ಚುನಾವಣಾ ಕರ್ತವ್ಯದಲ್ಲಿ ತೊಡಗಿರುವ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಾವಣೆ ಮಾಡಿರುವುದನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜಕುಮಾರ ಮೀನಾ ಆಕ್ಷೇಪಿಸಿದ್ದಾರೆ.
ರಾಜ್ಯ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಪತ್ರ ಬರೆದಿರುವ ಅವರು, 2023ರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದೆ ಮತ್ತು ಭಾರತ ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆಯನ್ನು (ಎಂಸಿಸಿ) ಯಾವಾಗ ಬೇಕಾದರೂ ಜಾರಿಗೊಳಿಸಲಿದೆ ಎಂದು ಹೇಳಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಚುನಾವಣಾ ಕರ್ತವ್ಯದಲ್ಲಿ ತೊಡಗಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಮುಖ್ಯ ಚುನಾವಣಾಧಿಕಾರಿ (ಸಿಇಒ) ಒಪ್ಪಿಗೆಯಿಲ್ಲದೆ ವರ್ಗಾವಣೆ ಮಾಡಲಾಗುತ್ತಿದ್ದು, ಮಾರ್ಚ್ 8ರ ನಂತರ ಜಾರಿಗೆ ಬರುವ ಎಲ್ಲಾ ವರ್ಗಾವಣೆಗಳಿಗೆ ತಮ್ಮ ಅನುಮೋದನೆ ಪಡೆಯಬೇಕು ಎಂದು ಹೇಳಿದ್ದಾರೆ.
ಚುನಾವಣಾ ಸಮಯದಲ್ಲಿ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದಂತೆ ಕೆಲವು ಇಲಾಖೆಗಳು ಮಾರ್ಗಸೂಚಿಗಳನ್ನು ಕಡೆಗಣಿಸಿದ್ದು, ಯಾವುದೇ ವರ್ಗಾವಣೆ ಮಾಡುವ ಮೊದಲು ಸಿಇಒ ಅವರ ಒಪ್ಪಿಗೆಯನ್ನು ತೆಗೆದುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ. ಚುನಾವಣಾ ಆಯೋಗದ ಸಲಹೆ ಪಡೆದ ನಂತರವೇ ವರ್ಗಾವಣೆ ಆದೇಶ ಹೊರಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಮುಖ್ಯ ಕಾರ್ಯದರ್ಶಿಗೆ ಮನವಿ ಮಾಡಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಲಂಚ ಪ್ರಕರಣ: ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಬಂಧನ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement