ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಆಪ್ತ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಹುಬ್ಬಳ್ಳಿಯ ಮೋಹನ ಲಿಂಬಿಕಾಯಿ ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ.
ಅವರು ಬೆಳಗಾವಿಯಲ್ಲಿ ಸಂಜೆ ನಡೆಯಲಿರುವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸೇರಲಿದ್ದಾರೆ ಎಂದು ಹೇಳಲಾಗಿದೆ. ಈ ಬಾರಿಯ ಚುನಾವಣೆಯಲ್ಲಿ ಅವರು ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆ ಎಂಬ ಮಾತುಗಳಿವೆ. ಗುರುವಾರ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಮೋಹನ ಲಿಂಬಿಕಾಯಿ ತಮ್ಮ ಸಹಾಯಕರ ಮೂಲಕ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿಯ ರಾಜ್ಯ ಕಚೇರಿಗೆ ರಾಜೀನಾಮೆ ಪತ್ರ ತಲುಪಿಸಿದ್ದಾರೆ.
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155
ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಮೋಹನ ಲಿಂಬಿಕಾಯಿ ಅವರು ಯಡಿಯೂರಪ್ಪ ಕೆಜೆಪಿ ಪಕ್ಷ ಕಟ್ಟಿದಾಗ ಆಗ ಮೋಹನ ಲಿಂಬಿಕಾಯಿ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಯಡಿಯೂರಪ್ಪ ಹಿಂದೆ ಕೆಜೆಪಿಗೆ ಹೋಗಿದ್ದರು. ಹಾಗೂ ವಿಧಾನಸಭೆ ಚುನಾವಣೆಗೆ ಕೆಜೆಪಿ ಅಭ್ಯರ್ಥಿಯಾಗಿ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದಿಂದ ಕಣಕ್ಕಿಳಿದು ಸೋಲು ಕಂಡಿದ್ದರು. ಯಡಿಯೂರಪ್ಪ ಬಿಜೆಪಿಗೆ ಮರಳಿದ ಬಳಿಕ ಅವರ ಜೊತೆಗೆ ಲಿಂಬಿಕಾಯಿ ಅವರು ಮರಳಿದ್ದರು.
ರಾಜ್ಯದಲ್ಲಿ ಎಚ್. ಡಿ. ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನಗೊಂಡು, ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ನೇಮಕವಾಗಿದ್ದರು.
ಗುರುವಾರ ಸಂಜೆಯೇ ಪಕ್ಷ ಸೇರುತ್ತಿದ್ದಾರೆ ಎಂದು ಹೇಳಲಾಗಿದ್ದು, ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದಿಂದ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡುವ ಭರವಸೆ ಹಿನ್ನೆಲೆಯಲ್ಲಿ ಅವರು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎನ್ನಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ