ಹುಬ್ಬಳ್ಳಿ – ಬನಾರಸ್ ನಡುವೆ ಬೇಸಿಗೆಯ ವಿಶೇಷ ರೈಲು ಸಂಚಾರ

posted in: ರಾಜ್ಯ | 0

ಹುಬ್ಬಳ್ಳಿ : ಬೇಸಿಗೆ ರಜೆಯ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಕಡಿಮೆಗೊಳಿಸಲು ಒಂದು ಟ್ರಿಪ್‌ ಬೇಡಿಕೆಯ ಮೇರೆಗೆ ಹುಬ್ಬಳ್ಳಿ ರೈಲ್ವೆ ನಿಲ್ದಾಣ ಮತ್ತು ಬನಾರಸ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲ್‌ (07347 ಮತ್ತು 07348) ಅನ್ನು ಓಡಿಸಲು ನೈಋತ್ಯ ರೈಲ್ವೆ ವಲಯವು ನಿರ್ಧರಿಸಿದೆ ಎಂದು ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.
ಈ ವಿಶೇಷ ಬೇಸಿಗೆ ರೈಲು ಸಂಖ್ಯೆ 07347 ಮಾರ್ಚ್ 27 ಸೋಮವಾರ ಹುಬ್ಬಳ್ಳಿ ನಿಲ್ದಾಣದಿಂದ ರಾತ್ರಿ 8:30 ಗಂಟೆಗೆ ಹೊರಟು, ಬುಧವಾರ ಬೆಳಿಗ್ಗೆ 9:10 ಗಂಟೆಗೆ ಬನಾರಸ್ (ಕಾಶಿ) ನಿಲ್ದಾಣ ತಲುಪಲಿದೆ. ಇದೆ ರೈಲು (07348) ಮಾರ್ಚ್ 29 (ಬುಧವಾರ)ರಂದು ಬನಾರಸ್‌ನಿಂದ ರಾತ್ರಿ 8:40 ಗಂಟೆಗೆ ಹೊರಟು ಶುಕ್ರವಾರ ಬೆಳಿಗ್ಗೆ 11:45 ಗಂಟೆಗೆ ಹುಬ್ಬಳ್ಳಿ ನಿಲ್ದಾಣಕ್ಕೆ ಆಗಮಿಸಲಿದೆ.
ಈ ವಿಶೇಷ ರೈಲು ಎರಡೂ ಮಾರ್ಗದಲ್ಲಿ, ಗದಗ, ಬಾದಾಮಿ, ಬಾಗಲಕೋಟೆ, ಆಲಮಟ್ಟಿ, ಬಸವನ ಬಾಗೇವಾಡಿ ರಸ್ತೆ, ವಿಜಯಪುರ, ಇಂಡಿ ರೋಡ, ಸೋಲಾಪುರ, ದೌಂಡ್, ಅಹ್ಮದನಗರ, ಕೋಪರಗಾಂವ್, ಮನ್ಮಾಡ್, ಭೂಸಾವಲ್, ಖಂಡ್ವಾ, ಇಟಾರಸಿ, ಪಿಪಾರಿಯಾ, ಜಬ್ಬಲಪುರ, ಕಟನಿ, ಮೈಹಾರ್, ಸತನಾ, ಮಾಣಿಕ್‌ಪುರ, ಪ್ರಯಾಗರಾಜ್ ಚೌಕಿ ಜಂಕ್ಷನ್ ಮತ್ತು ವಾರಣಾಸಿ ನಿಲ್ದಾಣಗಳಲ್ಲಿ ನಿಲುಗಡೆ ಇರಲಿದೆ.
ಈ ವಿಶೇಷ ಎಕ್ಸ್‌ಪ್ರೆಸ್ ರೈಲು ಒಟ್ಟು 21 ಬೋಗಿಗಳನ್ನು ಒಳಗೊಂಡಿರುತ್ತದೆ. ಅವುಗಳು- ಎಸಿ ಟು-ಟೈರ್ (1), ಎಸಿ ತ್ರೀ-ಟೈರ್ (1), ಸ್ಲೀಪರ್ ಕ್ಲಾಸ್ (7), ಸಾಮಾನ್ಯ ಎರಡನೇ ದರ್ಜೆ ಬೋಗಿಗಳು (10), ಮತ್ತು ದಿವ್ಯಾಂಗ ಸ್ನೇಹಿ ಕಂಪಾರ್ಟ್‌ಮೆಂಟ್‌ಗಳಿಂದ ಕೂಡಿದ ಎರಡನೇ ದರ್ಜೆಯ ಲಗೇಜ್ ಕಮ್ ಬ್ರೇಕ್-ವ್ಯಾನ್‌ಗಳು ಹೊಂದಿರುತ್ತದೆ.
ಪ್ರಯಾಣಿಕರ ಬೇಡಿಕೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಕೇಂದ್ರ ರೈಲ್ವೆ ಸಚಿವರನ್ನು ವಿನಂತಿಸಿದ್ದರ ಮೇರೆಗೆ ಈ ವಿಶೇಷ ರೈಲು ಸಂಚಾರ ಆರಂಭಿಸಲಾಗಿದೆ ಎಂದು ತಿಳಿಸಲಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಶಾಸಕ ಸ್ಥಾನಕ್ಕೆ ಗುಬ್ಬಿ ಶ್ರೀನಿವಾಸ ಇಂದು ರಾಜೀನಾಮೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement