ಗೋಕರ್ಣ: 10 ಲಕ್ಷ ರೂ.ಮೌಲ್ಯದ ಡ್ರಗ್ಸ್‌ ವಶ, ಮೂವರ ಬಂಧನ

posted in: ರಾಜ್ಯ | 0

ಕಾರವಾರ: ಪ್ರವಾಸಿ ತಾಣವಾದ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ 10 ಲಕ್ಷ ರೂ.ಅಂದಾಜು ಬೆಲೆಯ (1648ಗ್ರಾಂ) ಚರಸ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮೂಲತಃ ನೇಪಾಳದ ಹಾಲಿ ಕುಡ್ಲೆ ಬೀಚ್ ನಿವಾಸಿ ಸಂತ ಬಹದ್ದೂರ ತಮಂಗ್ ಹಾಗೂ ಬೇಲೆಹಿತ್ತಲಿನ ತುಳಸು ಹಮ್ಮು ಗೌಡ, ಮೂಲೇಕೇರಿಯ ಶ್ರೀಧರ ಗೌಡ ಎಂಬವರನ್ನು ಬಂಧಿಸಲಾಗಿದ್ದು, ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.
ಓಂ ಬೀಚ್ ರಸ್ತೆಯಲ್ಲಿ ಚರಸ್ ಮಾರಾಟಕ್ಕೆ ಯತ್ನಿಸುತ್ತಿದ್ದಾಗ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಚರಸ್ ಮಾದಕ ದ್ರವ್ಯದ ಪಾಕೆಟ್‌ಗಳು, ಒಂದು ದ್ವಿಚಕ್ರ ವಾಹನ ಮತ್ತು 2 ಮೊಬೈಲ್‌ಗಳನ್ನು ವಶಕ್ಕೆ ಪಡೆಯಲಾಯಿತು. ಈ ಪೈಕಿ ಆರೋಪಿ ತುಳಸು ಎಂಬವರ ಮೇಲೆ ಈಗಾಗಲೇ ಮೂರು ಗಾಂಜಾ ಮಾರಾಟ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ದಾಳಿಯಲ್ಲಿ ಪೊಲೀಸ್ ಇನಸ್ಪೆಕ್ಟರ್ ಮಂಜುನಾಥ ಎಂ., ಪಿಎಸ್‌ಐಗಳಾದ ಹರೀಶ, ಶಕ್ತಿವೇಲು,ಎಎಸ್‌ಐ ಅರವಿಂದ ಶೆಟ್ಟಿ,ಸಿಬ್ಬಂದಿ ವಸಂತ ನಾಯ್ಕ ರಾಜೇಶ ನಾಯ್ಕ ಇನ್ನಿತರು ಇದ್ದರು. ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

ಇಂದಿನ ಪ್ರಮುಖ ಸುದ್ದಿ :-   ಸೈದಾಪುರ; ಅಗ್ನಿ ದುರಂತ, ದಂಪತಿ ಸಜೀವ ದಹನ

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement