ಬೆಂಗಳೂರು: ಕರಗವನ್ನು ನಾಟಕ ಎಂದಿದ್ದ ಕಾಂಗ್ರೆಸ್ ಶಾಸಕ ಹ್ಯಾರಿಸ್ ದೇವಸ್ಥಾನಕ್ಕೆ ತೆರಳಿ ಕ್ಷಮೆಯಾಚನೆ

posted in: ರಾಜ್ಯ | 0

ಬೆಂಗಳೂರು: ಬೆಂಗಳೂರು ಕರಗವನ್ನು ನಾಟಕ ಎಂದು ಹೇಳಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಈಗ ಧರ್ಮರಾಯಸ್ವಾಮಿ ದೇವಸ್ಥಾನದ ದೇವರ ಸನ್ನಿಧಾನದಲ್ಲಿ ಈ ಬಗ್ಗೆ ಕ್ಷಮೆಯಾಚನೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಕಾಂಗ್ರೆಸ್‌ ಕಾರ್ಯಕ್ರಮವೊಂದರಲ್ಲಿ ಶಾಸಕ ಹ್ಯಾರಿಸ್ ಐತಿಹಾಸಿಕ ಕರಗವನ್ನು ನಾಟಕ ಎಂದು ಕರೆದಿದ್ದರು. ಈ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಬಳಿಕ ಈ ಬಗ್ಗೆ ಬಳಿಕ ಕ್ಷಮೆಯಾಚಿಸಿದ್ದರು. ಆದರೂ ತೃಪ್ತರಾಗದ ತಿಗಳ ಸಮಾಜದ ಮುಖಂಡರು, ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.
ಈ ಹಿನ್ನೆಲೆಯಲ್ಲಿ ಶಾಸಕ ಹ್ಯಾರಿಸ್ ಅವರು ಇಂದು, ಶುಕ್ರವಾರ ನೇರವಾಗಿ ತಿಗಳರ ಪೇಟೆಯಲ್ಲಿರುವ ಶ್ರೀ ಧರ್ಮರಾಯಸ್ವಾಮಿ ದೇವಾಲಯಕ್ಕೆ ತೆರಳಿ ದೇವರ ಸನ್ನಿಧಾನದಲ್ಲಿ ಕ್ಷಮೆಯಾಚಿಸಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ದೇವರ ಮೇಲೆ ನನಗೆ ಅಪಾರ ಭಕ್ತಿ ಗೌರವವಿದೆ, ಧರ್ಮಾರಾಯಸ್ವಾಮಿ ದೇವಾಲಯದಲ್ಲಿ ನನ್ನ ಹೇಳಿಕೆ ಬಗ್ಗೆ ನಾನು ಕ್ಷಮೆ ಕೇಳಿದ್ದೇನೆ ಎಂದು ಅವರು ಹೇಳಿದ್ದಾರೆ. ಹಾಗೂ ಎರಡನೇ ಬಾರಿ ಕ್ಷಮೆ ಕೇಳುವ ಮೂಲಕ ಡ್ಯಾಮೇಜ್​ ಕಂಟ್ರೋಲ್​​ಗೆ ಯತ್ನಿಸಿದ್ದಾರೆ.
ಸಾರ್ವಜನಿಕರನ್ನು ಉದ್ದೇಶಿಸಿ ರಾಜಕೀಯವಾಗಿ ಮಾತನಾಡುತ್ತಿದ್ದ ಹ್ಯಾರಿಸ್​, ಬಿಜೆಪಿ ವಿರುದ್ಧ ಹರಿಹಾಯ್ದಿದ್ದರು. ಆ ವೇಳೆ ಬಿಜೆಪಿಯನ್ನು ಟೀಕಿಸುವ ಭರದಲ್ಲಿ ‘ಅವರು ನಾಟಕ ಮಾಡುತ್ತಿದ್ದಾರೆ, ಇದೊಂದು ಎರಡು ತಿಂಗಳು ನಾಟಕದ ಸಮಯ, ಹಬ್ಬಕ್ಕೆ ಕರಗ ಟೈಮ್​ನಲ್ಲೆಲ್ಲ ಹಾಕಿಕೊಂಡು ಬರ್ತಾರಲ್ಲ, ಅದೇ ಥರ ಇವರೆಲ್ಲ ಈಗ ಓಡಾಡುತ್ತಿರೋದು ಎಂದು ಹೇಳಿದ್ದರು. ಹೀಗಾಗಿ ಹ್ಯಾರಿಸ್ ಹೇಳಿಕೆಗೆ ವ್ಯಾಪಕ ಟೀಕೆಗಳು ವ್ಯಕ್ತವಾಗಿದ್ದವು. ಅಲ್ಲದೇ ಕರಗ ಉತ್ಸವ ಮಂಡಳಿ ಪ್ರತಿಭಟನೆಗೆ ಸಿದ್ಧತೆ ಮಾಡಿಕೊಂಡಿತ್ತು. ನಂತರ ಹ್ಯಾರಿಸ್ ಈ ಬಗ್ಗೆ ಕ್ಷಮೆಯಾಚಿಸಿದ್ದರು.

ಇಂದಿನ ಪ್ರಮುಖ ಸುದ್ದಿ :-   ಯಾವುದೇ ಸಮಯದಲ್ಲಿ ಕರ್ನಾಟಕ ವಿಧಾನಸಭೆಗೆ ಚುನಾವಣೆ ಘೋಷಣೆ ಸಾಧ್ಯತೆ: ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಚುನಾವಣಾ ಆಯೋಗದ ಸೂಚನೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement