ಮಹಿಳೆಯರ ಮೇಲೆ ಇನ್ನೂ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ’ ಹೇಳಿಕೆಗೆ ರಾಹುಲ್ ಗಾಂಧಿಗೆ ಪೊಲೀಸ್ ನೋಟಿಸ್

ನವದೆಹಲಿ: ಶ್ರೀನಗರದಲ್ಲಿ ಭಾರತ ಜೋಡೋ ಯಾತ್ರೆಯ ವೇಳೆ ‘ಮಹಿಳೆಯರ ಮೇಲೆ ಇನ್ನೂ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ’ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ದೆಹಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದು, ಕ್ರಮ ಕೈಗೊಳ್ಳಲು ಸಂತ್ರಸ್ತರ ವಿವರಗಳನ್ನು ನೀಡಿ ಎಂದು ಸೂಚಿಸಿದ್ದಾರೆ.
ಸಾಮಾಜಿಕ ಮಾಧ್ಯಮದ ಪೋಸ್ಟ್‌ಗಳನ್ನು ಗಮನದಲ್ಲಿಟ್ಟುಕೊಂಡು, ಪೊಲೀಸರು ಪ್ರಶ್ನಾವಳಿಯನ್ನು ಕಳುಹಿಸಿದ್ದಾರೆ ಮತ್ತು “ಲೈಂಗಿಕ ಕಿರುಕುಳದ ಕುರಿತು ತಮ್ಮನ್ನು ಸಂಪರ್ಕಿಸಿರುವ ಮಹಿಳೆಯರ ಬಗ್ಗೆ ವಿವರಗಳನ್ನು ನೀಡಿ ಎಂದು ರಾಹುಲ್ ಗಾಂಧಿಗೆ ಕೇಳಿದ್ದಾರೆ.
ಪೊಲೀಸರ ಪ್ರಕಾರ, ಶ್ರೀನಗರದಲ್ಲಿ ಭಾರತ ಜೋಡೋ ಯಾತ್ರೆಯ ಸಂದರ್ಭದಲ್ಲಿ ಗಾಂಧಿಯವರು “ಮಹಿಳೆಯರು ಇನ್ನೂ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ ಎಂದು ನಾನು ಕೇಳಿದ್ದೇನೆ” ಎಂದು ಹೇಳಿಕೆ ನೀಡಿದ್ದರು. ಈ ಸಂತ್ರಸ್ತರ ವಿವರಗಳನ್ನು ನೀಡುವಂತೆ ಪೊಲೀಸರು ಅವರನ್ನು ಕೇಳಿದ್ದಾರೆ. ಇದರಿಂದ ಅವರಿಗೆ ಭದ್ರತೆ ಒದಗಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ನಾವು ಕಾನೂನಿಗೆ ಅನುಸಾರವಾಗಿ ಸರಿಯಾದ ಸಮಯದಲ್ಲಿ ನೋಟಿಸ್‌ಗೆ ಪ್ರತಿಕ್ರಿಯಿಸುತ್ತೇವೆ” ಎಂದು ದೆಹಲಿ ಪೊಲೀಸರ ನೋಟಿಸ್‌ಗೆ ಕಾಂಗ್ರೆಸ್ ಹೇಳಿದೆ. “ಪ್ರಧಾನಿ ಮೋದಿ ಮತ್ತು ಅದಾನಿ ಸಂಬಂಧದ ಕುರಿತು ರಾಹುಲ್ ಗಾಂಧಿಯವರ ಪ್ರಶ್ನೆಗಳಿಂದ ತತ್ತರಿಸಿರುವ ಸರ್ಕಾರವು ಈಗ ಪೊಲೀಸರ ಹಿಂದೆ ಅಡಗಿಕೊಂಡಿದೆ. ಭಾರತ ಜೋಡೋ ಯಾತ್ರೆ ಮುಗಿದ 45 ದಿನಗಳ ನಂತರ, ದೆಹಲಿ ಪೊಲೀಸರು ಈಗ ನೋಟಿಸ್ ನೀಡುವ ಮೂಲಕ ಮಹಿಳೆಯರ ವಿವರಗಳನ್ನು ಕೇಳಿದ್ದಾರೆ ಎಂದು ಕಾಂಗ್ರೆಸ್‌ ಹೇಳಿದೆ.
ನಾವು ಕಾನೂನಿಗೆ ಅನುಸಾರವಾಗಿ ನೋಟಿಸ್‌ಗೆ ಸರಿಯಾದ ಸಮಯದಲ್ಲಿ ಉತ್ತರಿಸುತ್ತೇವೆ. ಈ ನೋಟಿಸ್‌ ಸರ್ಕಾರವು ಭೀತಿಯಲ್ಲಿರುವ ಮತ್ತೊಂದು ಪುರಾವೆಯಾಗಿದೆ ಮತ್ತು ಪ್ರಜಾಪ್ರಭುತ್ವ, ಮಹಿಳಾ ಸಬಲೀಕರಣ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಪ್ರತಿಪಕ್ಷದ ಪಾತ್ರವನ್ನು ದುರ್ಬಲಗೊಳಿಸಲು ಅವರ ಇತ್ತೀಚಿನ ಪ್ರಯತ್ನವಾಗಿದೆ” ಎಂದು ಕಾಂಗ್ರೆಸ್ ಮತ್ತೊಂದು ಟ್ವೀಟ್‌ನಲ್ಲಿ ಹೇಳಿದೆ.

ಇಂದಿನ ಪ್ರಮುಖ ಸುದ್ದಿ :-   ಪ್ರಧಾನಿ ಮೋದಿ ಭೇಟಿಯಾಗಬೇಕಿದ್ದ ವಿಶ್ವಬ್ಯಾಂಕ್ ಅಧ್ಯಕ್ಷ ಸ್ಥಾನದ ನಾಮಿನಿ ಅಜಯ್ ಬಂಗಾಗೆ ಕೊರೊನಾ ಸೋಂಕು ದೃಢ

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement