ಲಂಚ ಪ್ರಕರಣ: ಶಾಸಕ ಮಾಡಾಳು ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಹೈಕೋರ್ಟ್

posted in: ರಾಜ್ಯ | 0

ಬೆಂಗಳೂರು : ಪುತ್ರನ ಮನೆ ಮೇಲೆ ಲೋಕಾಯುಕ್ತ ದಾಳಿ ವೇಳೆ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ನಿರೀಕ್ಷಣಾ ಜಾಮೀನು ಅರ್ಜಿ ಆದೇಶವನ್ನು ಹೈಕೋರ್ಟ್ ಕಾಯ್ದಿರಿಸಿದೆ.
ಶಾಸಕ ಮಾಡಾಳು ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿ, ಉಭಯ ವಕೀಲರ ವಾದ-ಪ್ರತಿವಾದ ಆಲಿಸಿದ ಏಕಸದಸ್ಯ ಪೀಠದ ನ್ಯಾಯಮೂರ್ತಿ ಕೆ. ನಟರಾಜನ್ ಆದೇಶ ಕಾಯ್ದಿರಿಸಿದರು.
ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯ ಪೀಠ ಆರಂಭಿಸಿದ ಕೂಡಲೇ ಅದಕ್ಕೆ ಲೋಕಾಯುಕ್ತ ಪೊಲೀಸರು ಆಕ್ಷೇಪಣೆ ಸಲ್ಲಿಸಿದರು. ನಿರೀಕ್ಷಣಾ ಜಾಮೀನು ಅರ್ಜಿಗೆ ಲೋಕಾಯುಕ್ತ ಪೊಲೀಸರ ಪರ ಹಿರಿಯ ವಕೀಲ ಅಶೋಕ ಹಾರನಹಳ್ಳಿ ಅವರು ಆಕ್ಷೇಪಣೆ ಸಲ್ಲಿಸಿ, ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದರೆ ತನಿಖೆಗೆ ಅನುಕೂಲವಾಗುತ್ತದೆ. ಆದ್ದರಿಂದ, ಅವರಿಗೆ ಜಾಮೀನು ತಿರಸ್ಕರಿಸಬೇಕು ಎಂದು ಮನವಿ ಮಾಡಿದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮಾಡಾಳು ಅವರು ಪ್ರತಿದಿನವೂ ಲೋಕಾಯುಕ್ತ ಪೊಲೀಸರ ತನಿಖೆಗೆ ಹಾಜರಾಗಿದ್ದಾರೆ. ತನಿಖೆಗೆ ಸಂಪೂರ್ಣ ಸಹಕಾರ ನೀಡಿದ್ದಾರೆ. ತನಿಖೆಯೇ ಮುಕ್ತಾಯದ ಹಂತದಲ್ಲಿರುವಾಗ ಬಂಧನದ ಅಗತ್ಯವಿಲ್ಲ. ಹೀಗಾಗಿ ನಿರೀಕ್ಷಣಾ ಜಾಮೀನು ನೀಡಬೇಕು ಎಂದು ಮಾಡಾಳ್ ಪರ ವಕೀಲರು ವಾದ ಮಂಡಿಸಿದರು.
ಇಂದಿನ ದಿನಗಳಲ್ಲಿ ಲಂಚವನ್ನು ನೇರವಾಗಿ ಪಡೆಯುವುದಿಲ್ಲ. ಇಲ್ಲೂ ಸಹ ಪುತ್ರನ ಮೂಲಕ ಲಂಚವನ್ನು ಪಡೆದಿದ್ದಾರೆ ಎಂದು ಅಶೋಕ ಹಾರನಹಳ್ಳಿ ವಾದ ಮಂಡಿಸಿದರು. ಬಂಧಿಸಿ ವಿಚಾರಣೆಗೊಳಪಡಿಸಿದಾಗ ತನಿಖಾಧಿಕಾರಿಗೆ ಹೆಚ್ಚಿನ ಮಾಹಿತಿ ಲಭ್ಯವಾಗುತ್ತದೆ. ಅಪರಾಧ ದಂಡ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಸೆಕ್ಷನ್ 164ರ ಅಡಿ ವಿರೂಪಾಕ್ಷಪ್ಪ ವಿರುದ್ಧ ಕೆಎಸ್‌ಡಿಎಲ್ ವ್ಯವಸ್ಥಾಪಕ ನಿರ್ದೇಶಕ ಸ್ವಯಂಪ್ರೇರಿತ ಹೇಳಿಕೆ ದಾಖಲಿಸಿದ್ದಾರೆ. ಎರಡನೇ ಆರೋಪಿಯಾಗಿರುವ ಪ್ರಶಾಂತ ಅವರು ಕೆಎಸ್‌ಡಿಎಲ್ ಎಂಡಿಯೊಂದಿಗೆ ಟೆಂಡರ್ ಮಾತುಕತೆ ನಡೆಸಿದ್ದಾರೆ. ಈ ವೇಳೆ ವಿರೂಪಾಕ್ಷಪ್ಪ ಅವರ ಹೆಸರೂ ಪ್ರಸ್ತಾಪವಾಗಿದೆ. ವಿರೂಪಾಕ್ಷಪ್ಪ ಪ್ರತಿದಿನ ನೋಟ್ಸ್ ಬರೆದುಕೊಂಡು ಬಂದು ಪೊಲೀಸರ ಮುಂದೆ ಹೇಳಿಕೆ ನೀಡುತ್ತಿದ್ದಾರೆ. ಆದ್ದರಿಂದ, ಅವರನ್ನು ಬಂಧಿಸಿ ವಿಚಾರಣೆ ನಡೆಸಿದರೆ ತನಿಖೆಗೆ ಅನುಕೂಲವಾಗಲಿದೆ ಎಂದು ಪೀಠಕ್ಕೆ ತಿಳಿಸಿದರು.

ಇಂದಿನ ಪ್ರಮುಖ ಸುದ್ದಿ :-   ಲಿಂಗಾಯತ, ಒಕ್ಕಲಿಗ ಸಮುದಾಯದ ಮೀಸಲಾತಿ ಹೆಚ್ಚಳ, ಎಸ್‌ಸಿ ಒಳ ಮೀಸಲಾತಿಗೆ ಸಚಿವ ಸಂಪುಟ ಒಪ್ಪಿಗೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement