ಇಂಡಿಗೋ ವಿಮಾನದಲ್ಲಿ ಧೂಮಪಾನ ಮಾಡುತ್ತಿದ್ದ ವ್ಯಕ್ತಿ ಬಂಧನ

ಬೆಂಗಳೂರು: ಇಂಡಿಗೋ ವಿಮಾನದಲ್ಲಿ ಶೌಚಾಲಯದಲ್ಲಿ ಧೂಮಪಾನ ಮಾಡಿದ ಆರೋಪದ ಮೇಲೆ ಪ್ರಯಾಣಿಕರೊಬ್ಬರನ್ನು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಮೂಲಗಳು ಶನಿವಾರ ತಿಳಿಸಿವೆ.
ವಿಮಾನ ನಿಲ್ದಾಣ ಪೊಲೀಸರ ಪ್ರಕಾರ, ಬಂಧಿತ ವ್ಯಕ್ತಿಯನ್ನು ಶೆಹಾರಿ ಚೌಧರಿ ಎಂದು ಗುರುತಿಸಲಾಗಿದ್ದು, 6E 716 ಇಂಡಿಗೋ ವಿಮಾನದಲ್ಲಿ ಅಸ್ಸಾಂನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದಾಗ ಈ ಕೃತ್ಯ ಎಸಗಿದ್ದಾನೆ.
ವಿಮಾನವು ಹಾರುತ್ತಿದ್ದಾಗ ಆರೋಪಿ ಪ್ರಯಾಣಿಕ ಶೌಚಗೃಹದಲ್ಲಿ ಧೂಮಪಾನ ಮಾಡಿದ್ದು, ಇತರ ಪ್ರಯಾಣಿಕರ ಸುರಕ್ಷತೆಗೆ ಅಪಾಯವನ್ನುಂಟು ಮಾಡಿದೆ. ಶೌಚಗೃಹದಲ್ಲಿ ವಾಸನೆ ಬರುತ್ತಿರುವುದನ್ನು ಗಮನಿಸಿದ ವಿಮಾನದ ಸಿಬ್ಬಂದಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೆಳಗಿಳಿದ ಕೂಡಲೇ ಆತನನ್ನು ವಶಕ್ಕೆ ಪಡೆಯಲಾಯಿತು. ಮೂಲಗಳ ಪ್ರಕಾರ ಶುಕ್ರವಾರ ಬೆಳಗಿನ ಜಾವ 1:30ಕ್ಕೆ ಈ ಘಟನೆ ನಡೆದಿದೆ. ಈ ಸಂಬಂಧ ವಿಮಾನ ನಿಲ್ದಾಣ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಮಾರ್ಚ್ ಮೊದಲ ವಾರದಲ್ಲಿ ಕೋಲ್ಕತ್ತಾದಿಂದ ಇಂಡಿಗೋ ವಿಮಾನದಲ್ಲಿ 24 ವರ್ಷದ ಮಹಿಳೆಯೊಬ್ಬರು ಟಾಯ್ಲೆಟ್‌ನಲ್ಲಿ ಧೂಮಪಾನ ಮಾಡುತ್ತಿದ್ದರು. ಬೆಂಗಳೂರಿಗೆ ಬಂದ ಮೇಲೆ ಆಕೆಯನ್ನು ಬಂಧಿಸಿ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement