ಕೃಷಿ ಹೊಂಡದಲ್ಲಿ ಮುಳುಗಿ ಬಾಲಕರಿಬ್ಬರ ಸಾವು

posted in: ರಾಜ್ಯ | 0

ಬೆಳಗಾವಿ: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಾದಗುಡ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕರನ್ನು ಯಾದಗುಡ ಗ್ರಾಮದ ಯಮನಪ್ಪ ರೆಡ್ಡಿರಟ್ಟಿ (10), ಯಶು ಬಸಪ್ಪ (14) ಎಂದು ಗುರುತಿಸಲಾಗಿದೆ. ಕ್ರಿಕೆಟ್​ ಆಡಿದ ನಂತರ ಬಾಲಕರು ಕೃಷಿ ಹೊಂಡಕ್ಕೆ ಈಜಲು ತೆರಳಿದ್ದಾಗ ದುರಂತ ಘಟನೆ ನಡೆದಿದೆ … Continued

ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಇ-ಮೇಲ್‌ ಮೂಲಕ ಜೀವ ಬೆದರಿಕೆ : ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ವಿರುದ್ಧ ಪ್ರಕರಣ ದಾಖಲು

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಮತ್ತೊಮ್ಮೆ ಜೀವ ಬೆದರಿಕೆಯ ಇ-ಮೇಲ್ ಬಂದಿದೆ. ಜೈಲಿನಲ್ಲಿರುವ ಸಲ್ಮಾನ್ ಖಾನ್ ಅವರ ನಿಕಟ ಸಹವರ್ತಿ ಇ-ಮೇಲ್ ಸ್ವೀಕರಿಸಿದ್ದು, ಅದರಲ್ಲಿ ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯ್ ಇತ್ತೀಚಿನ ಸಂದರ್ಶನ ಉಲ್ಲೇಖಿಸಲಾಗಿದೆ ಹಾಗೂ ಸಲ್ಮಾನ್ ಖಾನ್ ಕೊಲ್ಲುವುದು ತನ್ನ ಜೀವನದ ಗುರಿ ಎಂದು ಇ ಮೇಲ್‌ ಕಳುಹಿಸಿದಾತ ಹೇಳಿಕೊಂಡಿದ್ದಾನೆ. ಸಲ್ಮಾನ್ ಖಾನ್‌ಗೆ … Continued

ಎಐಎಡಿಎಂಕೆ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡರೆ ಪಕ್ಷದ ನಾಯಕತ್ವಕ್ಕೆ ರಾಜೀನಾಮೆ ನೀಡುವೆ : ಅಣ್ಣಾಮಲೈ

ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ಅವರು ಎಐಎಡಿಎಂಕೆ ಜೊತೆಗಿನ ಮೈತ್ರಿಗೆ ತನ್ನ ವಿರೋಧವಿದೆ ಎಂದು ಆಂತರಿಕ ಸಭೆಯಲ್ಲಿ ಹೇಳಿದ್ದಾರೆ ಮತ್ತು 2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ತಮಿಳೂನಾಡಿನಲ್ಲಿ ಏಕಾಂಗಿಯಾಗಿ ಸ್ಪರ್ಧಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕ-ಕೇಡರ್‌ನ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಶುಕ್ರವಾರ ಚೆನ್ನೈನಲ್ಲಿ ನಡೆದ ರಾಜ್ಯ ಮಟ್ಟದ ಪದಾಧಿಕಾರಿಗಳ ಆಂತರಿಕ ಸಭೆಯಲ್ಲಿ … Continued

‘ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ’ ಹೇಳಿಕೆಗೆ ರಾಹುಲ್ ಗಾಂಧಿ ಮನೆ ಬಾಗಿಲಿಗೆ ದೆಹಲಿ ಪೊಲೀಸರು; ಹಠಾತ್‌ ಅವಸರವೇಕೆ ಎಂದು ಪ್ರಶ್ನಿಸಿದ ಕಾಂಗ್ರೆಸ್‌ ನಾಯಕ

ನವದೆಹಲಿ: ಭಾರತ ಜೋಡೋ ಯಾತ್ರೆಯ ಸಂದರ್ಭದಲ್ಲಿ “ಮಹಿಳೆಯರ ಮೇಲೆ ಇನ್ನೂ ಲೈಂಗಿಕ ದೌರ್ಜನ್ಯಗಳು ನಡೆಯುತ್ತಿವೆ” ಎಂಬ ಹೇಳಿಕೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸ್ ತಂಡವು ಭಾನುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಅವರ ನಿವಾಸದಲ್ಲಿ ಪ್ರಶ್ನಿಸಿದೆ ಮತ್ತು “ಸಂತ್ರಸ್ತರ ಬಗ್ಗೆ ಮಾಹಿತಿ ನೀಡುವಂತೆ ಕೇಳಿದೆ. ಐದು ದಿನಗಳಲ್ಲಿ ಪೊಲೀಸರು ಮೂರನೇ ಬಾರಿಗೆ ಗಾಂಧಿಯವರ ಮನೆ ಬಾಗಿಲು … Continued

ಉಮಾಶಂಕರ ಪ್ರತಿಷ್ಠಾನ ಪುಸ್ತಕ ಪ್ರಶಸ್ತಿಗಾಗಿ ಕೃತಿಗಳ ಆಹ್ವಾನ

posted in: ರಾಜ್ಯ | 0

ಹುಬ್ಬಳ್ಳಿ: ಉಮಾಶಂಕರ ಸಾಹಿತ್ಯ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ 2021, ಮತ್ತು 2022 ನೇ ಸಾಲಿನ ಉಮಾಶಂಕರ ಸಾಹಿತ್ಯ ಸಾಂಸ್ಕೃತಿಕ ಪ್ರತಿಷ್ಠಾನ ಪ್ರಶಸ್ತಿಗಾಗಿ ಪುಸ್ತಕಗಳನ್ನು ಆಹ್ವಾನಿಸಲಾಗಿದೆ. ಪ್ರಶಸ್ತಿಯು ಮೂರು ಸಾವಿರ ರೂ ನಗದು, ಪ್ರಶಸ್ತಿ ಪತ್ರ, ಸ್ಮರಣಿಕೆ ಒಳಗೊಂಡಿರುತ್ತದೆ. ಏಪ್ರಿಲ್ ನಂತರ ಬೆಳಗಾವಿಯಲ್ಲಿ ನಡೆಯುವ ಭಾವ ಸಂಗಮ ಸಮಾಗಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿಗೆ ಆಯ್ಕೆಯಾದವರೇ ಕಾರ್ಯಕ್ರಮದಲ್ಲಿ … Continued

ರಾಜ್ಯದಲ್ಲಿ ನಿಧಾನಗತಿಯಲ್ಲಿ ಏರುತ್ತಿರುವ ಕೊರೊನಾ, ಭಾನುವಾರ 78 ಮಂದಿಗೆ ಸೋಂಕು, ಓರ್ವ ಸಾವು

posted in: ರಾಜ್ಯ | 0

ಬೆಂಗಳೂರು: ದೇಶದಲ್ಲಿ ಕೋವಿಡ್-19 ಸಂಖ್ಯೆ ಏರಿಕೆಯಾಗುತ್ತಿದ್ದು, ಕರ್ನಾಟಕದಲ್ಲಿಯೂ ಕೊರೊನಾ ಸಂಖ್ಯೆ ಏರಿಕೆಯಾಗುತ್ತಿವೆ. ಇಂದು, ಭಾನುವಾರ ರಾಜ್ಯಾದ್ಯಂತ 78 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅಲ್ಲದೆ, ಒಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯ ಆರೋಗ್ಯ ಇಲಾಖೆ ಕೋವಿಡ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಬಳ್ಳಾರಿ, ಕೋಲಾರ, ಕೊಡಗು ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ ಮೂವರಿಗೆ, ಬೆಂಗಳೂರು ಗ್ರಾಮಾಂತರ, … Continued

ಚಿಂಚೋಳಿ : ಮಳೆಯಲ್ಲಿ ವಿದ್ಯುತ್ ತಗುಲಿ ತಾಯಿ, ಇಬ್ಬರು ಮಕ್ಕಳು ಸಾವು

posted in: ರಾಜ್ಯ | 0

ಕಲಬುರಗಿ: ಜಿಲ್ಲೆಯ ಚಿಂಚೋಳಿ ಪಟ್ಟಣದ ಧನಗರ ಗಲ್ಲಿಯಲ್ಲಿ ವಿದ್ಯುತ್ ತಗುಲಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ನಡೆದ ವರದಿಯಾಗಿದೆ. ಈದುರ್ಘಟನೆಯಲ್ಲಿ ಮೃತಪಟ್ಟವರನ್ನು ಝರಣಮ್ಮ ಅಂಬಣ್ಣ ಬಸಗೊಂಡ (45), ಮಹೇಶ ಬಸಗೊಂಡ (20), ಸುರೇಶ ಬಸಗೊಂಡ (18) ಎಂದು ಗುರುತಿಸಲಾಗಿದೆ. ಶನಿವಾರ ತಡರಾತ್ರಿ 1ಗಂಟೆ ಸುಮಾರಿಗೆ ಗುಡುಗು ಮಿಂಚು ಸಹಿತ ಜೋರು ಮಳೆ ಸುರಿಯುತ್ತಿದ್ದಾಗ ವಿದ್ಯುತ್ … Continued

ಬಿಜೆಪಿಗೆ ಬೆಂಬಲ ಘೋಷಿಸಿದ ಮಾಜಿ ಸಂಸದ ಎಲ್.​ಆರ್. ಶಿವರಾಮೇಗೌಡ

posted in: ರಾಜ್ಯ | 0

ಬೆಂಗಳೂರು: ಸಂಸದೆ ಸುಮಲತಾ ಬಿಜೆಪಿಗೆ ಬೆಂಬಲ ಘೋಷಣೆ ಬೆನ್ನಲ್ಲೇ ಈಗ ಮಾಜಿ ಸಂಸದ ಎಲ್​ಆರ್ ಶಿವರಾಮೇಗೌಡ(LR Shivarame Gowda) ಬಿಜೆಪಿಗೆ ಬೆಂಬಲ ಘೋಷಿಸಿದ್ದಾರೆ. ಬೆಂಗಳೂರಿನ ನಾಗಮಂಗಲ ನಿವಾಸಿಗಳ ಸಮಾವೇಶದಲ್ಲಿ ಸಚಿವ ಮುನಿರತ್ನ ಅವರ ಸಮ್ಮುಖದಲ್ಲಿ ಅವರು ಬಿಜೆಪಿಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ನಾಗಮಂಗಲಕ್ಕೆ ಬಿಜೆಪಿ ಅತ್ಯಗತ್ಯವಾಗಿ ಬೇಕು. ಬಿಜೆಪಿ ಪಕ್ಷ … Continued

ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸಿ ರಾಜ್ಯ ಸರ್ಕಾರದಿಂದ ಆದೇಶ

posted in: ರಾಜ್ಯ | 0

ಬೆಂಗಳೂರು:ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸಿ ಶನಿವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದ ಕುಂಬಾರ ಸಮುದಾಯದ ಬಹುದಿನಗಳ ಬೇಡಿಕೆಯಾಗಿದ್ದ ಕುಂಬಾರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ. ಈ ನಿಗಮವು ಕುಂಬಾರ, ಚಕ್ರಸಾಲಿ, ಕುಲಾಲ ಸೇರಿದಂತೆ ಇನ್ನಿತರ ಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ … Continued

ದೆಹಲಿ : ಅತ್ಯಂತ ಜನದಟ್ಟಣೆ ರಸ್ತೆಯಲ್ಲಿ ಮಹಿಳೆಯನ್ನು ಹಿಂಸಾತ್ಮಕ ರೀತಿಯಲ್ಲಿ ಕ್ಯಾಬ್‌ಗೆ ತಳ್ಳಿ ಥಳಿಸಿದ ವ್ಯಕ್ತಿ | ದೃಶ್ಯ ಕ್ಯಾಮರಾದಲ್ಲಿ ಸೆರೆ

ನವದೆಹಲಿ: ಶನಿವಾರ ದೆಹಲಿಯ ಮಂಗೋಲ್‌ಪುರಿ ಮೇಲ್ಸೇತುವೆ ಬಳಿಯ ಜನನಿಬಿಡ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಮಹಿಳೆಯೊಬ್ಬರನ್ನು ಥಳಿಸಿ ಬಲವಂತವಾಗಿ ಕಾರಿನಲ್ಲಿ ಕೂರಿಸುವುದು ವಿಡಿಯೋದಲ್ಲಿ ಕಂಡುಬಂದಿದೆ. ವಾಹನ ಮತ್ತು ಚಾಲಕನನ್ನು ಪತ್ತೆ ಮಾಡಲಾಗಿದೆ. ಸಿಬ್ಬಂದಿಯ ತಂಡವನ್ನು ಗುರುಗ್ರಾಮದ ರತನ್ ವಿಹಾರ್‌ಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ಬಿಳಿ ಟೀ ಶರ್ಟ್ ಧರಿಸಿದ … Continued