ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸಿ ರಾಜ್ಯ ಸರ್ಕಾರದಿಂದ ಆದೇಶ

posted in: ರಾಜ್ಯ | 0

ಬೆಂಗಳೂರು:ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸಿ ಶನಿವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದ ಕುಂಬಾರ ಸಮುದಾಯದ ಬಹುದಿನಗಳ ಬೇಡಿಕೆಯಾಗಿದ್ದ ಕುಂಬಾರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ. ಈ ನಿಗಮವು ಕುಂಬಾರ, ಚಕ್ರಸಾಲಿ, ಕುಲಾಲ ಸೇರಿದಂತೆ ಇನ್ನಿತರ ಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕಾರ್ಯ ನಿರ್ವಹಿಸಲಿದೆ ಎಂದು ಅವರು ತಿಳಿಸಿದ್ದಾರೆ.
ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ 2ಎ ನ ಕ್ರಮ ಸಂಖ್ಯೆ:6 ಎ ಯಿಂದ ಕ್ಯೂವರೆಗೆ ಕ್ರಮವಾಗಿ ಕುಂಬಾರ, ಚಕ್ರಸಾಲಿ ಗುಣಗ, ಗಣಗಿ, ಕೊಡವ, ಕುಲ, ಕುಲಾಲ, ಕುಂಬಾರ್, ಕುಂಬಾರ್ಡ್, ಕುಮ್ಮಾರ, ಕಸವನ್ ,ಮೂಲ್ಯ, ಸಜ್ಜನ ಕುಂಬಾರ, ಖುಮಾರ, ಕುಂಭಾರ, ಖುಂಭಾರ, ಕುಲಾಲರ್ ಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ರಾಜ್ಯ ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸಿ ಹಿಂದಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿ ಪಾಹೀನ್ ಪರ್ವೀನ್ ಆದೇಶ ಹೊರಡಿಸಿದ್ದಾರೆ.
ರಾಜ್ಯದಲ್ಲಿ ಕುಂಬಾರ ಸಮುದಾಯ ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯವಾಗಿದೆ. ಹೀಗಾಗಿ ಕುಂಬಾರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಒತ್ತಾಯಗಳು ಕೇಳಿಬಂದಿದ್ದವು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಕರ್ನಾಟಕದ 95% ಶಾಸಕರು ಕೋಟ್ಯಧಿಪತಿಗಳು; 35% ಶಾಸಕರ ಮೇಲೆ ಕ್ರಿಮಿನಲ್ ಆರೋಪ : ಎಡಿಆರ್ ವರದಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement