ಚಿಂಚೋಳಿ : ಮಳೆಯಲ್ಲಿ ವಿದ್ಯುತ್ ತಗುಲಿ ತಾಯಿ, ಇಬ್ಬರು ಮಕ್ಕಳು ಸಾವು

posted in: ರಾಜ್ಯ | 0

ಕಲಬುರಗಿ: ಜಿಲ್ಲೆಯ ಚಿಂಚೋಳಿ ಪಟ್ಟಣದ ಧನಗರ ಗಲ್ಲಿಯಲ್ಲಿ ವಿದ್ಯುತ್ ತಗುಲಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ನಡೆದ ವರದಿಯಾಗಿದೆ.
ಈದುರ್ಘಟನೆಯಲ್ಲಿ ಮೃತಪಟ್ಟವರನ್ನು ಝರಣಮ್ಮ ಅಂಬಣ್ಣ ಬಸಗೊಂಡ (45), ಮಹೇಶ ಬಸಗೊಂಡ (20), ಸುರೇಶ ಬಸಗೊಂಡ (18) ಎಂದು ಗುರುತಿಸಲಾಗಿದೆ.
ಶನಿವಾರ ತಡರಾತ್ರಿ 1ಗಂಟೆ ಸುಮಾರಿಗೆ ಗುಡುಗು ಮಿಂಚು ಸಹಿತ ಜೋರು ಮಳೆ ಸುರಿಯುತ್ತಿದ್ದಾಗ ವಿದ್ಯುತ್ ತಂತಿ ಕಡಿದು ನೆಲಕ್ಕೆ ಬಿದ್ದಿತ್ತು. ಇದರ ಅರಿವಿಲ್ಲದೆ ಮನೆಯ ಹೊರಗಡೆ ಸಂಗ್ರಹಿಸಿದ್ದ (ಹೊಟ್ಟು) ಜಾನುವಾರುಗಳ ಮೇವು ಮಳೆಯಲ್ಲಿ ನೆನೆಯುತ್ತದೆ ಎಂದು ತಾಡಪತ್ರಿಯಿಂದ ಮುಚ್ಚಲು ಹೋದಾಗ ವಿದ್ಯುತ ತಗುಲಿದೆ. ಘಟನೆಯಲ್ಲಿ ಅಂಬಣ್ಣನಿಗೆ ಗಾಯಗಳಾಗಿದ್ದು, ಚಿಂಚೋಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಚಂದಾಪುರದ ತಾಲ್ಲೂಕು ಆಸ್ಪತ್ರೆಗೆ ಒಯ್ಯಲಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಇಂದಿನ ಪ್ರಮುಖ ಸುದ್ದಿ :-   ಅನ್ಲಿಮಿಟೆಡ್ ಕ್ರಿಕೆಟ್ ಲೈವ್‌ ವೀಕ್ಷಿಸಲು ಕ್ರಿಕೆಟ್ ಪ್ರೇಮಿಗಳಿಗೆ ಜಿಯೋದಿಂದ ಅನ್ಲಿಮಿಟೆಡ್ ಕ್ರಿಕೆಟ್ ಪ್ಲಾನ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement