ರಾಜ್ಯದಲ್ಲಿ ನಿಧಾನಗತಿಯಲ್ಲಿ ಏರುತ್ತಿರುವ ಕೊರೊನಾ, ಭಾನುವಾರ 78 ಮಂದಿಗೆ ಸೋಂಕು, ಓರ್ವ ಸಾವು

ಬೆಂಗಳೂರು: ದೇಶದಲ್ಲಿ ಕೋವಿಡ್-19 ಸಂಖ್ಯೆ ಏರಿಕೆಯಾಗುತ್ತಿದ್ದು, ಕರ್ನಾಟಕದಲ್ಲಿಯೂ ಕೊರೊನಾ ಸಂಖ್ಯೆ ಏರಿಕೆಯಾಗುತ್ತಿವೆ. ಇಂದು, ಭಾನುವಾರ ರಾಜ್ಯಾದ್ಯಂತ 78 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅಲ್ಲದೆ, ಒಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಇಲಾಖೆ ಕೋವಿಡ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಬಳ್ಳಾರಿ, ಕೋಲಾರ, ಕೊಡಗು ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ ಮೂವರಿಗೆ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಹಾಸನ, ಹಾವೇರಿ, ಕೊಪ್ಪಳ, ರಾಮನಗರ ಹಾಗೂ ವಿಜಯಪುರದಲ್ಲಿ ತಲಾ ಒಬ್ಬರಿಗೆ, ಶಿವಮೊಗ್ಗದಲ್ಲಿ 7, ರಾಯಚೂರಿನಲ್ಲಿ 2, ಮೈಸೂರಿನಲ್ಲಿ 11, ಧಾರವಾಡ ಮತ್ತು ಬೀದರಿನಲ್ಲಿ ಇಬ್ಬರು ಬೆಂಗಳೂರು ನಗರದಲ್ಲಿ 35 ಜನರು ಸೇರಿದಂತೆ ಒಟ್ಟು 78 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ತಿಳಿಸಿದೆ.
ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 40,75,453ಕ್ಕೆ ಏರಿಕೆಯಾಗಿದೆ. ಇವರಲ್ಲಿ ಇಂದು, ಭಾನುವಾರ 38 ಸೇರಿದಂತೆ ಈವರೆಗೆ 40,34,519 ಮಂದಿ ಗುಣಮುಖರಾಗಿದ್ದಾರೆ. ಈಗ 616 ಸಕ್ರಿಯ ಪ್ರಕರಣಗಳಿವೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement