ಚುನಾವಣೆ ಸನಿಹದಲ್ಲೇ ಬಿಜೆಪಿಯ ವಿಧಾನ ಪರಿಷತ್‌ ಸ್ಥಾನಕ್ಕೆ ಬಾಬುರಾವ್ ಚಿಂಚನಸೂರು ರಾಜೀನಾಮೆ : ಮುಂದಿನ ನಡೆ..?

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿಯ ಬಾಬುರಾವ್ ಚಿಂಚನಸೂರ್ ಸೋಮವಾರ ರಾಜೀನಾಮೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಬಾಬುರಾವ್ ಚಿಂಚನಸೂರು ರಾಜೀನಾಮೆ ನೀಡಿದ್ದು, ಸಭಾಪತಿ ಬಸವರಾಜ ಹೊರಟ್ಟಿ ರಾಜೀನಾಮೆ ಅಂಗೀಕರಿಸಿದ್ದಾರೆ. ವಿಧಾನಸಭೆ ಚುನಾವಣೆ ಹೊತ್ತಲ್ಲೇ ಬಿಜೆಪಿ ವಿಧಾನ ಪರಿಷತ್‌ ಬಾಬುರಾವ್ ಚಿಂಚನಸೂರು ರಾಜೀನಾಮೆ ನೀಡಿದ್ದಾರೆ. ಚಿಂಚನಸೂರು ನಡೆ ಬಹಳ ಕುತೂಹಲ ಮೂಡಿಸಿದೆ.
ಬಾಬುರಾವ್ ಚಿಂಚನಸೂರ್ ಅವರು ಗುರುಮಿಠಕಲ್ ಕ್ಷೇತ್ರದ ವಿಧಾನಸಭೆ ಟಿಕೆಟ್ ಕೇಳಿದ್ದರು. ಆದರೆ, ವಿಧಾನಪರಿಷತ್ ಸದಸ್ಯರಾಗಿರುವ ಕಾರಣ ಟಿಕೆಟ್ ನೀಡಲಾಗುವುದಿಲ್ಲ ಎಂದು ಬಿಜೆಪಿ ತಿಳಿಸಿತ್ತು ಎನ್ನಲಾಗಿದೆ. ಹೀಗಾಗಿ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಿಜ ಶರಣ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷರೂ ಆಗಿರುವ ಚಿಂಚನಸೂರು, 2019 ರ ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ಪಡೆ ಆಗಿದ್ದರು. ಇದೀಗ ನಾಲ್ಕು ವರ್ಷಗಳ ಬಳಿಕ ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗಿ ಗುರುಮಠಕಲ್‌ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಲು ಚಿಂಚನಸೂರ್ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
ಬಾಬೂರಾವ್ ಚಿಂಚನಸೂರ್ ಮಂಗಳವಾರ ಬೆಳಿಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಮಾಜಿ ಸಿಎಂ ಸಿದ್ದರಾಮಯ್ಯ, ಪ್ರಿಯಾಂಕ್‌ ಖರ್ಗೆ ಸಮ್ಮುಖದಲ್ಲಿ ಅವರು ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.

ಪ್ರಮುಖ ಸುದ್ದಿ :-   ಬೇಡ್ತಿ–ವರದಾ ನದಿ ಜೋಡಣೆ ಯೋಜನೆ ಜವಾಬ್ದಾರಿ ರಾಜ್ಯ ಸರ್ಕಾರದ್ದು ; ಡಿಪಿಆರ್‌ ರೂಪಿಸೋದು ಅಂದ್ರೆ ಯೋಜನೆ ಅಂತಿಮ ಎಂದಲ್ಲ : ಕೇಂದ್ರ ಸಚಿವ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement