7 ನೂತನ ವಿಶ್ವ ವಿದ್ಯಾಲಯಗಳಿಗೆ ಕುಲಪತಿಗಳ ನೇಮಕ

ಬಿ.ಕೆ.ರವಿ

ಬೆಂಗಳೂರು: ರಾಜ್ಯ ಸರ್ಕಾರ ನೂತನವಾಗಿ ಸ್ಥಾಪಿಸಿರುವ ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ವಿಶ್ವವಿದ್ಯಾಲಯಗಳಿಗೆ ಕುಲಪತಿಗಳನ್ನು ನೇಮಿಸಿ ಸೋಮವಾರ ಆದೇಶ ಹೊರಡಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಬೆಂಗಳೂರು ವಿಶ್ವ ವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಡಾ.ಬಿ.ಕೆ. ರವಿ ಅವರನ್ನು ಕೊಪ್ಪಳ ವಿಶ್ವ ವಿದ್ಯಾಲಯ, ಬಾಗಲಕೋಟೆಯ ತೋಟಗಾರಿಕೆ ವಿಶ್ವ ವಿದ್ಯಾಲಯದ ಡಾ.ಅಶೋಕ ಸಂಗಪ್ಪ ಆಲೂರು ಅವರನ್ನು ಕೊಡಗು ವಿವಿ, ಮೈಸೂರು ವಿವಿ ಮಾನವಶಾಸ್ತ್ರ ವಿಭಾಗದ ಡಾ.ಎಂ ಆರ್‍‌ ಗಂಗಾಧರ ಅವರನ್ನು ಚಾಮರಾಜನಗರ ವಿವಿ, ಬೆಳಗಾವಿಯ ಕೆ.ಎಸ್‌.ಗೋಗಟೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾಗಿ ಕೆಲಸ ಮಾಡಿದ್ದ ಹಾಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಸಚಿವ ಡಾ.ಆನಂದ ಶರದ ದೇಶಪಾಂಡೆ ಅವರನ್ನು ಬಾಗಲಕೋಟೆ ವಿವಿ ನೇಮಕ ಮಾಡಿದೆ.

ಕುವೆಂಪು ವಿವಿಯ ಡಾ.ಬಿ.ಎಸ್‌. ಬಿರಾದಾರ ಅವರನ್ನು ಬೀದರ್‍‌ ವಿವಿ, ಬಾಗಲಕೋಟೆಯ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್‌ ವಿಭಾಗದ ಡಾ.ಸುರೇಶ ಎಚ್‌.ಜಂಗಮಶೆಟ್ಟಿ ಅವರನ್ನು ಹಾವೇರಿ ವಿವಿ ಮತ್ತು ಧಾರವಾಡದ ಕರ್ನಾಟಕ ವಿವಿಯ ನಿವೃತ್ತ ಪ್ರೊಫೆಸರ್‍‌ ಆಗಿರುವ ಡಾ.ಟಿ ಸಿ ತಾರಾನಾಥ ಅವರನ್ನು ಹಾಸನ ವಿಶ್ವವಿದ್ಯಾಲಯದ ಕುಲಪತಿಗಳಾಗಿ ನೇಮಿಸಲಾಗಿದೆ ಎಂದು ಅವರು ಪತ್ರಿಕಾ ಪ್ರಕಟಣೆ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಸಚಿವ ದಿನೇಶ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ' ಹೇಳಿಕೆ : ಬಿಜೆಪಿ ಶಾಸಕ ಯತ್ನಾಳ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ
ಡಾ.ಆನಂದ ದೇಶಪಾಂಡೆ

ಬೆಳಗಾವಿಯ ದೇಶಪಾಂಡೆ ಅವರು ಬಾಗಲಕೋಟೆ ವಿವಿ ಕುಲಪತಿ
ಬೆಳಗಾವಿ ಗೋಗಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಚಾರ್ಯರಾಗಿ ಕೆಲಸ ಮಾಡಿದ್ದ ಹಾಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಸಚಿವ ಡಾ.ಆನಂದ ಶರದ ದೇಶಪಾಂಡೆ ಅವರನ್ನು ರಾಜ್ಯ ಸರ್ಕಾರ ಬಾಗಲಕೋಟೆ ವಿಶ್ವವಿದ್ಯಾಲಯದ ಕುಲಪತಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.
ಕೆಲ ತಿಂಗಳುಗಳ ಹಿಂದೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಹೊಸ ಕುಲಪತಿ ನೇಮಕ ವೇಳೆ ಅವರ ಹೆಸರು ಮುಂಚೂಣಿಯಲ್ಲಿ ಕೇಳಿ ಬಂದಿತ್ತು. ಆದರೆ, ಇದೀಗ ರಾಜ್ಯ ಸರಕಾರ ಬಾಗಲಕೋಟೆ ವಿಶ್ವವಿದ್ಯಾಲಯಕ್ಕೆ ಕುಲಪತಿಯಾಗಿ ಅವರನ್ನು ನೇಮಕಗೊಳಿಸಿದೆ.
ದೇಶಪಾಂಡೆ ಅವರು ಎಂ.ಟೆಕ್., ಪಿಎಚ್.ಡಿ. ಮತ್ತು 31 ವರ್ಷಗಳ ಅನುಭವವನ್ನು ಹೊಂದಿದ್ದು,
ಅವರು ಉತ್ಪಾದನೆ, ಸಿಎಡಿ / ಸಿಎಎಂ ಸಂಶೋಧನೆಯಲ್ಲಿ ಆಸಕ್ತಿ ಹೊಂದಿದ್ದಾರೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement