ಹಿಂದುತ್ವದ ಕುರಿತು ಟ್ವೀಟ್‌ ಪ್ರಕರಣ: ನಟ ಚೇತನಗೆ 14 ದಿನಗಳ ನ್ಯಾಯಾಂಗ ಬಂಧನ

ಬೆಂಗಳೂರು: ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ ಆರೋಪದಲ್ಲಿ ಇಂದು ಮಂಗಳವಾರ ಬಂಧಿತರಾಗಿರುವ ನಟ ಚೇತನ್‌ ಅವರನ್ನು ಬೆಂಗಳೂರಿನ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿದೆ.
ಚೇತನ್‌ ಅವರ ಜಾಮೀನು ಅರ್ಜಿಯನ್ನು 32ನೇ ಹೆಚ್ಚುವರಿ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಜೆ ಲತಾ ಅವರು ವಿಚಾರಣೆ ನಡೆಸಿದ್ದು, ವಿಚಾರಣೆಯನ್ನು ಮಾರ್ಚ್‌ 23ಕ್ಕೆ ಮುಂದೂಡಿದ್ದಾರೆ.
ಬೆಂಗಳೂರಿನ ಶಿವಕುಮಾರ ಎಂಬವರು ನೀಡಿದ ದೂರಿನ ಅನ್ವಯ ಶೇಷಾದ್ರಿಪುರ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 295ಎ ಮತ್ತು 505ಬಿ ಅಡಿ ಎಫ್‌ಐಆರ್‌ ದಾಖಲಿಸಲಾಗಿತ್ತು. ಇದರ ಆಧಾರದ ಮೇಲೆ ಮಂಗಳವಾರ ಬೆಳಿಗ್ಗೆ ಪೊಲೀಸರು ಚೇತನ್‌ ಅವರನ್ನು ಬಂಧಿಸಿ, ಮ್ಯಾಜಿಸ್ಟ್ರೇಟ್‌ ಮುಂದೆ ಹಾಜರುಪಡಿಸಿದ್ದರು. ಪ್ರಕರಣದ ಕುರಿತು ಮಾಹಿತಿ ಪಡೆದ ಮ್ಯಾಜಿಸ್ಟ್ರೇಟ್‌ ಅವರು ಚೇತನ್‌ ಅವರಿಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಿದ್ದಾರೆ.
ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ರಾವಣನನ್ನು ಸೋಲಿಸಿ ರಾಮ ಅಯೋಧ್ಯೆಗೆ ಹಿಂದಿರುಗಿದಾಗ ಭಾರತೀಯ ರಾಷ್ಟ್ರ ಪ್ರಾರಂಭವಾಯಿತು ಎಂಬುದು ಸುಳ್ಳು. 1992ರಲ್ಲಿ ಬಾಬರಿ ಮಸೀದಿ ರಾಮನ ಜನ್ಮಭೂಮಿ-ಇದು ಒಂದು ಸುಳ್ಳು. ಈಗ 2023ರಲ್ಲಿ ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು- ಇದು ಕೂಡ ಒಂದು ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು. ಸತ್ಯವೇ ಸಮಾನತೆ ಎಂಬಎಂದು ಬರೆದು ಚೇತನ್‌ ತಮ್ಮ ಟ್ವಿಟರ್‌ ಖಾತೆಯಲ್ಲಿ ಮಾರ್ಚ್‌ 20ರ ರಾತ್ರಿ ಹಂಚಿಕೊಂಡಿದ್ದರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೀತಿಯೇ ಸಿದ್ದು, ಪರಮೇಶ್ವರ ವೀಡಿಯೊ ಹೊರಬರಬಹುದು : ರಮೇಶ ಜಾರಕಿಹೊಳಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement