ಭಾರತದಲ್ಲಿ ಖಾಲಿಸ್ತಾನಿ ಪರ ಟ್ವಿಟರ್ ಖಾತೆಗಳನ್ನು ನಿರ್ಬಂಧಿಸಿದ ಕೇಂದ್ರ ಸರ್ಕಾರ

ನವದೆಹಲಿ: ಖಾಲಿಸ್ತಾನಿ ಪ್ರತಿಪಾದಕ ಅಮೃತಪಾಲ್ ಸಿಂಗ್ ವಿರುದ್ಧದ ಪೊಲೀಸ್ ಕ್ರಮ ವಿರೋಧಿಸಿ ಪ್ರತಿಭಟನೆಗಳ ನಂತರ ಭಾರತದಲ್ಲಿ ಕೆನಡಾದ ನ್ಯೂ ಡೆಮಾಕ್ರಟಿಕ್ ಪಕ್ಷದ ನಾಯಕ ಜಗ್ಮೀತ್ ಸಿಂಗ್ ಸೇರಿದಂತೆ ಖಾಲಿಸ್ತಾನ್ ಪರ ಟ್ವಿಟರ್ ಖಾತೆಗಳನ್ನು ಬ್ಲಾಕ್‌ ಮಾಡಲಾಗಿದೆ.
ಖಾಲಿಸ್ತಾನಿ ಘಟಕಗಳು ವಿದೇಶಿ ರಾಷ್ಟ್ರಗಳಲ್ಲಿನ ಭಾರತೀಯ ಕಾನ್ಸುಲೇಟ್‌ಗಳು ಮತ್ತು ಹೈಕಮಿಷನ್‌ಗಳ ಮೇಲೆ ದಾಳಿ ಮಾಡಿ ಧ್ವಂಸಗೊಳಿಸುತ್ತಿರುವ ಸಮಯದಲ್ಲಿ ಇದು ಬಂದಿದೆ.
ಕೆನಡಾದ ಕವಯಿತ್ರಿ ರೂಪಿ ಕೌರ್, ಸ್ವಯಂಸೇವಾ ಸಂಸ್ಥೆ ಯುನೈಟೆಡ್ ಸಿಖ್ಸ್ ಮತ್ತು ಕೆನಡಾ ಮೂಲದ ಕಾರ್ಯಕರ್ತ ಗುರುದೀಪ್ ಸಿಂಗ್ ಸಹೋಟಾ ಅವರ ಟ್ವಿಟರ್ ಖಾತೆಗಳನ್ನು ಸಹ ನಿರ್ಬಂಧಿಸಲಾಗಿದೆ. ಭಾರತ ವಿರೋಧಿ ಹೇಳಿಕೆಗಳಿಗೆ ಹೆಸರುವಾಸಿಯಾಗಿರುವ ಜಗ್ಮೀತ್ ಸಿಂಗ್ ಖಾತೆಯನ್ನು ನಿರ್ಬಂಧಿಸಿರುವುದು ಗಮನಾರ್ಹವಾಗಿದೆ.
ಭಾನುವಾರ, ಖಾಲಿಸ್ತಾನಿ ಬೆಂಬಲಿಗರು ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿ ಮೇಲೆ ದಾಳಿ ಮಾಡಿ ತ್ರಿವರ್ಣ ಧ್ವಜವನ್ನು ಕೆಳಗೆ ಎಳೆದಿದ್ದರು. ಕೆಲವು ಗಂಟೆಗಳ ನಂತರ, ಖಾಲಿಸ್ತಾನಿ ಘಟಕಗಳು ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ದೂತಾವಾಸದ ಮೇಲೆ ದಾಳಿ ಮಾಡಿದವು. ಪ್ರತಿಭಟನಾಕಾರರು ಕಚೇರಿಗೆ ನುಗ್ಗಿ ಬಾಗಿಲು ಹಾಗೂ ಕಿಟಕಿ ಗಾಜುಗಳನ್ನು ಒಡಯುತ್ತಿರುವ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹೊರಹೊಮ್ಮಿವೆ.
ಇಂತಹ ದಾಳಿಗೆ ಭಾರತ ತೀವ್ರವಾಗಿ ಪ್ರತಿಕ್ರಿಯಿಸಿದೆ. ಲಂಡನ್‌ನ ಹೈಕಮಿಷನ್‌ನಲ್ಲಿ ನಡೆದ ಘಟನೆಯ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಹಿರಿಯ ಬ್ರಿಟಿಷ್ ರಾಜತಾಂತ್ರಿಕರನ್ನು ಕರೆಸಿದೆ. ಖಲಿಸ್ತಾನಿ ಬೆಂಬಲಿಗರು ಸ್ಯಾನ್ ಫ್ರಾನ್ಸಿಸ್ಕೋದ ಭಾರತೀಯ ಕಾನ್ಸುಲೇಟ್ ಜನರಲ್ ಅನ್ನು ಧ್ವಂಸಗೊಳಿಸಿದ ನಂತರ ದೆಹಲಿಯಲ್ಲಿ ಅಮೆರಿಕದ ಚಾರ್ಜ್ ಡಿ’ಅಫೇರ್ಸ್ ಜೊತೆಗಿನ ಸಭೆಯಲ್ಲಿ ಭಾರತವು ತನ್ನ ಬಲವಾದ ಪ್ರತಿಭಟನೆಯನ್ನು ತಿಳಿಸಿತು.

ಪ್ರಮುಖ ಸುದ್ದಿ :-   ಕೆಲ ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡು ಸಂಸದ ಹೃದಯಾಘಾತದಿಂದ ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement