ಸಿದ್ದಾಪುರ: ಅಂಗನವಾಡಿ ಶಿಕ್ಷಕಿಯೊಬ್ಬರು ಶಾಲೆಗೆ ಹೋಗುವಾಗ ಸುಮಾರು 4 ಲಕ್ಷ ರೂ. ಮೌಲ್ಯದ ಬಂಗಾರದ ಸರ ಹಾಗೂ ಮೊಬೈಲ್ ಕಳೆದುಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಲೂಕಿನಲ್ಲಿ ನಡೆದಿತ್ತು. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ ತಕ್ಷಣವೇ ಕಾರ್ಯಪ್ರವೃತ್ತರಾದ ಸಿದ್ದಾಪುರ ಪೊಲೀಸರು ಸೊರಬಾ ಬಳಿ ಪತ್ತೆ ಹಚ್ಚಿ ಅವುಗಳನ್ನು ವಾರಸುದಾರರಿಗೆ ಮರಳಿಸಿ ಸಾರ್ವಜನಿಕ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಸಿದ್ದಾಪುರ ತಾಲೂಕಿನ ಕಾನಗೋಡಿನ ಪೂರ್ಣಿಮಾ ನಾಯ್ಕ ಎಂಬವರು ಸೋಮವಾರ ಅವರಗುಪ್ಪಾ ಅಂಗನವಾಡಿಗೆ ಹೋಗುತ್ತಿದ್ದಾಗ ಬಳ್ಳಟ್ಟೆ ಹತ್ತಿರ ಬ್ಯಾಗನಲ್ಲಿದ್ದ 7 ತೊಲೆ ಬಂಗಾರದ ಸರ ಹಾಗೂ ಮೊಬೈಲ್ ಕಳೆದುಕೊಂಡಿದ್ದರು. ನಂತರ ಅವರು ಪೊಲೀಸ್ ಠಾಣೆಗೆ ಈ ಬಗ್ಗೆ ದೂರು ನೀಡಿದರು. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಸೊರಬ ಬಳಿ ಮೊಬೈಲ್ ಟ್ರೇಸ್ ಮಾಡಿದರು. ತಕ್ಷಣವೇ ಸೊರಬಕ್ಕೆ ತೆರಳಿ ಮಹಿಳೆ ಕಳೆದುಕೊಂಡ ವಸ್ತುಗಳನ್ನು ಪತ್ತೆ ಮಾಡಿದರು. ಅವನ್ನು ತಂದು ಪೂರ್ಣಿಮಾ ನಾಯ್ಕ ಅವರಿಗೆ ಮರಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಪಿ.ಎಸ್.ಐಗಳಾದ ಎಂ.ಜಿ.ಕುಂಬಾರ, ಮಲ್ಲಿಕಾರ್ಜುನಯ್ಯ ಕೊರಾಣಿ, ಠಾಣೆಯ ರಮೇಶ ಕೂಡಲ್, ಉದಯ ಮೇಸ್ತಾ ಹಾಗೂ ಸಂಗೀತಾ ಕಾನಡೆ ಒಳಗೊಂಡ ತಂಡದ ಪಾಲ್ಗೊಂಡಿತ್ತು. ಪೊಲೀಸರ ಕ್ಷಿಪ್ರ ಕಾರ್ಯಾಚರಣೆಗೆ ಸಾರ್ವಜನಿಕರ ಪ್ರಶಂಸೆ ವ್ಯಕ್ತವಾಗಿದೆ.
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ನಿಮ್ಮ ಕಾಮೆಂಟ್ ಬರೆಯಿರಿ