ಅದಾನಿ ಬಳಿಕ ಡಾರ್ಸೆ ಕಂಪನಿ ವಿರುದ್ಧ ವರದಿ ಬಿಡುಗಡೆ ಮಾಡಿದ ಹಿಂಡೆನ್‍ಬರ್ಗ್ ರಿಸರ್ಚ್: ಷೇರು ಮೌಲ್ಯದಲ್ಲಿ ಭಾರೀ ಕುಸಿತ

ನವದೆಹಲಿ: ಅದಾನಿ ಗ್ರೂಪ್‍ನ ವರದಿ ಮಾಡಿದ್ದ ಅಮೆರಿಕ ಮೂಲದ ಹಿಂಡೆನ್‍ಬರ್ಗ್ (Hindenburg) ರಿಸರ್ಚ್ ಈಗ ಟ್ವಿಟ್ವರ್ ಮಾಜಿ ಸಿಇಒ ಹಾಗೂ ಸಂಸ್ಥಾಪಕ ಜಾಕ್ ಡಾರ್ಸೆ (Jack Dorsey) ಸ್ಥಾಪಿಸಿದ ಪೇಮೆಂಟ್ ಕಂಪನಿ ಬ್ಲಾಕ್ (Block) ಇಂಕ್‌ ವಿರುದ್ಧ ಹೊಸ ವರದಿಯನ್ನು ಬಿಡುಗಡೆ ಮಾಡಿದೆ. ವರದಿ ಪ್ರಕಾರ, ಬ್ಲಾಕ್ ಇಂಕ್‌ನ ಮೇಲೆ ಕಣ್ಣಿಟ್ಟಿದ್ದೆವು. ಈ ಹಿಂದೆ ಬ್ಲಾಕ್ … Continued

ಅಮೃತಪಾಲ್ ಲುಕ್ ಬದಲಾಯಿಸಿಕೊಂಡಿದ್ದಾನೆ, ಪೇಟ ಧರಿಸಿರಲಿಲ್ಲ: ಪೊಲೀಸರಿಗೆ ತಿಳಿಸಿದ ಬಂಧಿತ ಹರಿಯಾಣ ಮಹಿಳೆ

ಚಂಡೀಗಡ: ಆರು ದಿನಗಳ ಹಿಂದೆ ಪಂಜಾಬ್‍ನಿಂದ ಪರಾರಿಯಾಗಿದ್ದ ಖಾಲಿಸ್ತಾನ್ ಬೆಂಬಲಿಗ ಅಮೃತ್‍ಪಾಲ್ ಸಿಂಗ್ (Amritpal Singh) ಹರಿಯಾಣದಲ್ಲಿ ತಲೆಮರೆಸಿಕೊಂಡಿರುವ ಕೆಲವು ಸುಳಿವುಗಳು ಸಿಕ್ಕಿವೆ. ಸ್ಕೂಟರ್‍ನಲ್ಲಿ ತನ್ನ ಅನುಯಾಯಿ ಜೊತೆ ಕುರುಕ್ಷೇತ್ರಕ್ಕೆ ಬಂದಿದ್ದ ಅಮೃತ್‍ಪಾಲ್ ಸಿಂಗ್ ಮಹಿಳೆಯೊಬ್ಬರ ಮನೆಯಲ್ಲಿ ಒಂದು ರಾತ್ರಿ ತಲೆ ಮರೆಸಿಕೊಂಡಿದ್ದ ವಿಚಾರ ಬೆಳಕಿಗೆ ಬಂದಿದೆ. ಅಮೃತಪಾಲ್ ಸಿಂಗ್ ಮತ್ತು ಆತನ ಸಹಚರ ಪಾಪಲ್‌ಪ್ರೀತ್ … Continued

ಪಂಚಮಸಾಲಿ ಮೀಸಲಾತಿ ವಿಚಾರ; ಯಥಾಸ್ಥಿತಿ ಆದೇಶ ತೆರವುಗೊಳಿಸಿದ ಹೈಕೋರ್ಟ್

ಬೆಂಗಳೂರು: ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಮೀಸಲಾತಿ ಕಲ್ಪಿಸುವ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಈ ಹಿಂದೆ ನೀಡಿದ್ದ ಮಧ್ಯಂತರ ಆದೇಶವನ್ನು ಹೈಕೋರ್ಟ್ ಗುರುವಾರ ತೆರವುಗೊಳಿಸಿದ್ದು, ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ. ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲು ಕಲ್ಪಿಸುವ ಸಂಬಂಧ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಇತ್ತೀಚೆಗೆ ಸಲ್ಲಿಸಿರುವ ಮಧ್ಯಂತರ ವರದಿಯನ್ನು … Continued

ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮಿಗಳ ಅಂತ್ಯಕ್ರಿಯೆ

ಹಾಸನ : ಶ್ರೀಕ್ಷೇತ್ರ ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಸ್ವಾಮೀಜಿ ಚಿತೆಗೆ ಅಗ್ನಿಸ್ಪರ್ಶ ಮಾಡಲಾಯಿತು. ಚಂದ್ರಗಿರಿ ಬೆಟ್ಟದ ತಪ್ಪಲಿನಲ್ಲಿ ಜೈನ ಸಂಪ್ರದಾಯದಂತೆ ಸೂರ್ಯಾಸ್ತಕ್ಕೂ ಮೊದಲು ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರದ ವಿಧಿವಿಧಾನದ ನೆರವೇರಿಸಲಾಯಿತು. ಜೈನ ಮಠದ ಭಟ್ಟಾರಕರು ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಕಳೆದ ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರವಣಬೆಳಗೊಳದ ಜೈನ ಮಠದ ಶ್ರೀ ಚಾರುಕೀರ್ತಿ … Continued

ಹಿಂದುತ್ವದ ಕುರಿತ ಟ್ವೀಟ್‌: ನಟ ಚೇತನಗೆ ಜಾಮೀನು ಮಂಜೂರು

ಬೆಂಗಳೂರು: ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ ಆರೋಪದಲ್ಲಿ ಬಂಧಿತರಾಗಿರುವ ನಟ ಚೇತನಕುಮಾರ ಅವರಿಗೆ ಬೆಂಗಳೂರಿನ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಗುರುವಾರ ಜಾಮೀನು ಮಂಜೂರು ಮಾಡಿದೆ. ನಟ ಚೇತನ್‌ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ 32ನೇ ಹೆಚ್ಚುವರಿ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಜೆ ಲತಾ ಅವರು ಜಾಮೀನು ಭದ್ರತೆಯಾಗಿ ಇಪ್ಪತ್ತೈದು ಸಾವಿರ ರೂಪಾಯಿ ವೈಯಕ್ತಿಕ ಬಾಂಡ್‌ … Continued

ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ಗುರಿಯಾದ ನಂತರ ಮಹಾತ್ಮ ಗಾಂಧಿ ಉಲ್ಲೇಖಿಸಿ ರಾಹುಲ್‌ ಗಾಂಧಿ ಟ್ವೀಟ್‌

“ಮೋದಿ ಉಪನಾಮ”  ಕುರಿತು ರಾಹುಲ್‌ ಗಾಂಧಿ ಹೇಳಿಕೆಗಳಿಗೆ ಸಂಬಂಧಿಸಿದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಗುರುವಾರ ಗುಜರಾತ್‌ನ ಸೂರತ್‌ನ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸತ್ಯ ಮತ್ತು ಅಹಿಂಸೆಯ ಕುರಿತು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ. ನನ್ನ ಧರ್ಮವು ಸತ್ಯ ಮತ್ತು ಅಹಿಂಸೆಯನ್ನು ಆಧರಿಸಿದೆ. ಸತ್ಯವೇ ನನ್ನ ದೇವರು, … Continued

ಕಲಬುರಗಿ ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಸ್ಥಾನಕ್ಕೆ ಚುನಾವಣೆ: ಎರಡೂ ಸ್ಥಾನಗಳಲ್ಲಿ ಬಿಜೆಪಿಗೆ ಜಯ

ಕಲಬುರಗಿ: ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ ತೀವ್ರ ಕುತೂಹಲ ಕೆರಳಿದ್ದ ಕಲಬುರಗಿ ಮಹಾನಗರ ಪಾಲಿಕೆಯ ಮೇಯರ್‌ ಹಾಗೂ ಉಪಮೇಯರ್‌ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತವರೂರಿನಲ್ಲಿ ಕಾಂಗ್ರೆಸ್‌ಗೆ ಶಾಕ್ ನೀಡಿದೆ. ಬಿಜೆಪಿ ಕಡಿಮೆ ಸಂಖ್ಯೆ ಹೊಂದಿದ್ದರೂ ಕಲಬುರಗಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪ ಮೇಯರ್ ಎರಡೂ ಸ್ಥಾನಗಳನ್ನು … Continued

ಹುರುನ್ ಗ್ಲೋಬಲ್ ರಿಚ್ ಲಿಸ್ಟ್‌ : ವಿಶ್ವದ ಟಾಪ್‌ 10 ಶ್ರೀಮಂತರಲ್ಲಿ ಭಾರತದ ಮುಖೇಶ ಅಂಬಾನಿಗೆ ಸ್ಥಾನ; ಮುಂಬೈ 66, ಬೆಂಗಳೂರು 21 ಬಿಲಿಯನೇರ್‌ಗಳಿಗೆ ನೆಲೆ

ನವದೆಹಲಿ: 2023ರ ಹುರುನ್ ಗ್ಲೋಬಲ್ ರಿಚ್ ಲಿಸ್ಟ್ ಪ್ರಕಾರ ಭಾರತದಲ್ಲಿ 187 ಶತಕೋಟ್ಯಧಿಪತಿಗಳು ಮತ್ತು 16 ಹೊಸ ಸೇರ್ಪಡೆಗಳೊಂದಿಗೆ ಭಾರತ ವಿಶ್ವದ ಮೂರನೇ ಅತಿದೊಡ್ಡ ಬಿಲಿಯನೇರ್ ಉತ್ಪಾದಿಸುವ ರಾಷ್ಟ್ರವಾಗಿ ಮುಂದುವರೆದಿದೆ. ಮುಂಬೈ 66 ಶತಕೋಟ್ಯಧಿಪತಿಗಳಿಗೆ ನೆಲೆಯಾಗಿದೆ, ನಂತರ 39 ಶತಕೋಟ್ಯಧಿಪತಿಗಳೊಂದಿಗೆ ನವದೆಹಲಿ ಎರಡನೇ ಸ್ಥಾನದಲ್ಲಿದೆ ಮತ್ತು 21 ಶತಕೋಟ್ಯಧಿಪತಿಗಳೊಂದಿಗೆ ಬೆಂಗಳೂರು ಮೂರನೇ ಸ್ಥಾನದಲ್ಲಿದೆ. ವರದಿಯ ಪ್ರಕಾರ, … Continued

ರಾಹುಲ್ ಗಾಂಧಿಗೆ 2 ವರ್ಷ ಶಿಕ್ಷೆ : ಲೋಕಸಭೆ ಸದಸ್ಯತ್ವ ಕಳೆದುಕೊಳ್ಳುವ ಭೀತಿ

ನವದೆಹಲಿ : 2019ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೋಷಿ ಎಂದು ಸೂರತ್‌ ನ್ಯಾಯಾಲಯವು ತೀರ್ಪು ನೀಡಿದ್ದು, ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ರಾಹುಲ್‌ ಗಾಂಧಿ ಅವರಿಗೆ ಜಾಮೀನು ನೀಡಲಾಯಿತು ಮತ್ತು ನಿರ್ಧಾರವನ್ನು ಮೇಲ್ಮನವಿ ಸಲ್ಲಿಸಲು ಅವರ ಶಿಕ್ಷೆಯನ್ನು 30 ದಿನಗಳವರೆಗೆ ಅಮಾನತುಗೊಳಿಸಲಾಗಿದೆ. ಕರ್ನಾಟಕದ ಕೋಲಾರದಲ್ಲಿ ರಾಹುಲ್‌ ಗಾಂಧಿ … Continued

ಈ ಮೆಸೇಜ್‌ ನಿಮಗೂ ಬರಬಹುದು ಎಚ್ಚರ : ಮೊಬೈಲಿಗೆ ಬಂದ ವಿದ್ಯುತ್ ಬಿಲ್ ಸಂದೇಶಕ್ಕೆ ಉತ್ತರಿಸಿ ಲಕ್ಷಾಂತರ ರೂ.ಕಳೆದುಕೊಂಡ ಮಹಿಳೆ

ಕಳೆದ ಕೆಲವು ವಾರಗಳಲ್ಲಿ ಸೈಬರ್ ವಂಚನೆ ಪ್ರಕರಣಗಳು ಗಣನೀಯವಾಗಿ ಹೆಚ್ಚಿವೆ. ದೇಶಾದ್ಯಂತ ಅನೇಕರು ಆನ್‌ಲೈನ್ ವಂಚಕರಿಂದ ಮೊಬೈಲ್ ಫೋನ್‌ಗಳ ಮೂಲಕ ಸ್ವೀಕರಿಸಿದ ಎಸ್‌ಎಂಎಸ್‌ (SMS) ಅಥವಾ ಸಂದೇಶಗಳಿಗೆ ಪ್ರತಿಕ್ರಿಯಿಸಿದ ನಂತರ ಹಣವನ್ನು ಕಳೆದುಕೊಳ್ಳುತ್ತಿದ್ದಾರೆ. ಈ ಆನ್‌ಲೈನ್‌ ವಂಚಕರು ಈಗ ವಿದ್ಯುತ್ ಬಿಲ್ ವಿಚಾರವಾಗಿ ಎಸ್‌ಎಂಎಸ್‌ ಕಳುಹಿಸಿ ಮಹಿಳೆಯೊಬ್ಬರಿಗೆ ಲಕ್ಷಾಂತರ ರೂ.ಗಳನ್ನು ವಂಚಿಸಿರುವುದು ಬೆಳಕಿಗೆ ಬಂದಿದೆ. ಮುಂಬೈನ … Continued