ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮಿಗಳ ಅಂತ್ಯಕ್ರಿಯೆ

posted in: ರಾಜ್ಯ | 0

ಹಾಸನ : ಶ್ರೀಕ್ಷೇತ್ರ ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಸ್ವಾಮೀಜಿ ಚಿತೆಗೆ ಅಗ್ನಿಸ್ಪರ್ಶ ಮಾಡಲಾಯಿತು. ಚಂದ್ರಗಿರಿ ಬೆಟ್ಟದ ತಪ್ಪಲಿನಲ್ಲಿ ಜೈನ ಸಂಪ್ರದಾಯದಂತೆ ಸೂರ್ಯಾಸ್ತಕ್ಕೂ ಮೊದಲು ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರದ ವಿಧಿವಿಧಾನದ ನೆರವೇರಿಸಲಾಯಿತು.
ಜೈನ ಮಠದ ಭಟ್ಟಾರಕರು ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಕಳೆದ ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರವಣಬೆಳಗೊಳದ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ (74) ಗುರುವಾರ ವಿಧಿವಶರಾಗಿದ್ದರು.
ಅಗ್ನಿ ಸ್ಪರ್ಶಕ್ಕೂ ಮುನ್ನ ಶ್ರೀಗಳನ್ನ ಕೂರಿಸಿ ಪೂಜೆ ಸಲ್ಲಿಸಲಾಯಿತು. ಸಾಂಕೇತಿಕವಾಗಿ ಶ್ರೀಗಳ ಪಾರ್ಥೀವ ಶರೀರಕ್ಕೆ ಅಭಿಷೇಕ ಮಾಡಲಾಯಿತು. ಪೂಜಾ ಕೈಂಕರ್ಯದ ಬಳಿಕ ಅಗ್ನಿಸ್ಪರ್ಶ ಮಾಡಲಾಯಿತು. ಐತಿಹಾಸಿಕ ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಇಂದು (ಮಾ.23) ಮುಂಜಾನೆ ಮಂಡ್ಯ ಜಿಲ್ಲೆಯ ಬೆಳ್ಳರೂ ಕ್ರಾಸ್​ನ ಆದಿಚುಂಚನಗಿರಿ ಆಸ್ಪತ್ರೆಯಲ್ಕಿ ಕೊನೆಯುಸಿರೆಳೆದಿದ್ದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಬೆಳಿಗ್ಗೆ ನಿತ್ಯಕರ್ಮಕ್ಕೆ ಎದ್ದಾಗ ಕಾಲುಜಾರಿ ಬಿದ್ದು ತಲೆಗೆ ಗಂಭೀರವಾಗಿ ಪೆಟ್ಟಾಗಿದ್ದರಿಂದ ಶ್ರೀಗಳು ಮೃತಪಟ್ಟಿದ್ದಾರೆ ಎಂದು ಹಾಸನ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಹೇಳಿದ್ದಾರೆ. ಸ್ವಾಮೀಜಿಯವರು ಹಲವು ದಿನಗಳಿಂದ ಕಾಲುನೋವಿನಿಂದ ಬಳಲುತ್ತಿದ್ದರು. ಈ ಕಾರಣದಿಂದ ಶ್ರೀಗಳು ನಿಯಂತ್ರಣ ತಪ್ಪಿ ಮುಂಜಾನೆ ಬಿದ್ದಿದ್ದಾರೆ. ತೀವ್ರ ಗಾಯದಿಂದ ಬಳಲಿದ್ದ ಶ್ರೀಗಳನ್ನ ಸಿಬ್ಬಂದಿಯವರು ಆಸ್ಪತ್ರೆಗೆ ಸಾಗಿಸಿದ್ದರು. ಆದರೆ ತಲೆಗೆ ಗಂಭೀರ ಗಾಯವಾದ್ದರಿಂದ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಇತಿಹಾಸ ತಜ್ಞರು, ತತ್ವ ಜ್ಞಾನಿಗಳಾಗಿದ್ದ ಸ್ವಾಮೀಜಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳು ನಮ್ಮನ್ನಗಲಿದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಪೂಜ್ಯರ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದ್ದು, ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಅವರ ಅಪಾರ ಸಂಖ್ಯೆಯ ಭಕ್ತರಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

ಇಂದಿನ ಪ್ರಮುಖ ಸುದ್ದಿ :-   ರಾಜ್ಯದ ಜನತೆಗೆ ರಾಜ್ಯ ಸರ್ಕಾರದಿಂದ ಶಾಕ್ : ಜೂನ್‌1 ರಿಂದಲೇ ವಿದ್ಯುತ್ ದರ ಹೆಚ್ಚಳ...!

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement