ಹಿಂದುತ್ವದ ಕುರಿತ ಟ್ವೀಟ್‌: ನಟ ಚೇತನಗೆ ಜಾಮೀನು ಮಂಜೂರು

ಬೆಂಗಳೂರು: ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ ಆರೋಪದಲ್ಲಿ ಬಂಧಿತರಾಗಿರುವ ನಟ ಚೇತನಕುಮಾರ ಅವರಿಗೆ ಬೆಂಗಳೂರಿನ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಗುರುವಾರ ಜಾಮೀನು ಮಂಜೂರು ಮಾಡಿದೆ.
ನಟ ಚೇತನ್‌ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ 32ನೇ ಹೆಚ್ಚುವರಿ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಜೆ ಲತಾ ಅವರು ಜಾಮೀನು ಭದ್ರತೆಯಾಗಿ ಇಪ್ಪತ್ತೈದು ಸಾವಿರ ರೂಪಾಯಿ ವೈಯಕ್ತಿಕ ಬಾಂಡ್‌ ಅಥವಾ ಅಷ್ಟೇ ಮೊತ್ತಕ್ಕೆ ಒಬ್ಬರ ಭದ್ರತೆ ನೀಡಲು ಆದೇಶಿಸಿದರು. ಅಲ್ಲದೇ, ತನಿಖೆಗೆ ಸಹಕರಿಸುವಂತೆ ಸೂಚಿಸಿದರು.
ಅರ್ಜಿದಾರರನ್ನು ಪ್ರತಿನಿಧಿಸಿದ್ದ ವಕೀಲ ಸುನೀಲಕುಮಾರ ಗುನ್ನಾಪುರ ಅವರು “ಉರಿಗೌಡ ಮತ್ತು ನಂಜೇಗೌಡ ಎಂಬವವರು ಟಿಪ್ಪುವನ್ನು ಕೊಂದರು ಎಂಬುದನ್ನು ಬಿಜೆಪಿ ಮತ್ತು ಸಂಘ ಪರಿಹಾರ ಸೃಷ್ಟಿಸಿದ್ದು, ಚೇತನ್‌ ಅವರು ಇದು ಒಂದು ಸುಳ್ಳು ಎಂದು ಹೇಳಿದ್ದಾರೆ. ಇದಕ್ಕೆ ಇತಿಹಾಸದಲ್ಲಿ ಯಾವುದೇ ದಾಖಲೆ ಇಲ್ಲ ಎಂದು ಒಕ್ಕಲಿಗ ಸಮುದಾಯ ಸ್ವಾಮೀಜಿ ಹೇಳಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂಥ ಸುಳ್ಳುಗಳನ್ನು ಪ್ರಶ್ನೆ ಮಾಡಬೇಕು. ಚೇತನ್‌ ಅವರು ಅದನ್ನು ಮಾಡಿದ್ದಾರೆ. ಒಕ್ಕಲಿಗರು ಮತ್ತು ಮುಸ್ಲಿಮ್‌ ಸಮುದಾಯದ ವಿರುದ್ಧ ವೈಷಮ್ಯ ಉಂಟು ಮಾಡುವ ಕೃತ್ಯವನ್ನು ಮಾಡಬಾರದು ಎಂದು ಚೇತನ್‌ ಹೇಳಿದ್ದಾರೆ. ಹೀಗಾಗಿ, ಐಪಿಸಿ ಸೆಕ್ಷನ್‌ 295 ಇಲ್ಲಿ ಅನ್ವಯಿಸುವುದಿಲ್ಲ ಎಂದು ವಾದಿಸಿದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಹಿರಿಯ ನಟಿ ಸುಲೋಚನಾ ಲಾಟ್ಕರ್ ಮುಂಬೈನಲ್ಲಿ ನಿಧನ

ಪ್ರಜಾಪ್ರಭುತ್ವದ ಚೌಕಟ್ಟಿನಲ್ಲಿ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕ ನೆಮ್ಮದಿಗೆ ಭಂಗ ತರುವ ಯಾವುದೇ ಕೃತ್ಯವನ್ನೂ ಚೇತನ್‌ ಅವರು ಎಸಗಿಲ್ಲ” ಎಂದು ವಾದಿಸಿದ್ದರು.
ಸರ್ಕಾರಿ ಅಭಿಯೋಜಕರು “ಚೇತನ್‌ ಪದೇಪದೇ ಈ ರೀತಿಯ ಹೇಳಿಕೆಗಳನ್ನು ನೀಡುವ ಮೂಲಕ ವಿಭಿನ್ನ ಕೋಮುಗಳ ನಡುವೆ ದ್ವೇಷ ಉಂಟು ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಹೀಗಾಗಿ, ಅವರಿಗೆ ಜಾಮೀನು ಮಂಜೂರು ಮಾಡಬಾರದು” ಎಂದು ಆಕ್ಷೇಪಿಸಿದ್ದರು.
ಬೆಂಗಳೂರಿನ ಶಿವಕುಮಾರ ಎಂಬವರು ನೀಡಿದ ದೂರಿನ ಅನ್ವಯ ಶೇಷಾದ್ರಿಪುರ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 295ಎ ಮತ್ತು 505ಬಿ ಅಡಿ ಎಫ್‌ಐಆರ್‌ ದಾಖಲಿಸಿ, ಮಂಗಳವಾರ ಚೇತನ್‌ ಅವರನ್ನು ಬಂಧಿಸಲಾಗಿತ್ತು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement