ಚಿಕ್ಕಮಗಳೂರು: ಪಿಕಪ್ ವಾಹನದಲ್ಲಿ ಸಾಗಿಸುತ್ತಿದ್ದ 9 ಕೆಜಿ ಚಿನ್ನ ವಶಕ್ಕೆ, ಇಬ್ಬರ ಬಂಧನ

ಚಿಕ್ಕಮಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಘೋಷಣೆ ಸನಿಹದಲ್ಲೇ ಇರುವ ಬೆನ್ನಲ್ಲೇ ಚುನಾವಣಾ ಅಕ್ರಮಗಳು ಕೂಡ ಹೆಚ್ಚಾಗುತ್ತಿವೆ. ಈಗ ದಾಖಲೆ ಇಲ್ಲದೆ ಪಿಕಪ್‌ನಲ್ಲಿ ಸಾಗಿಸುತ್ತಿದ್ದ 9 ಕೆ.ಜಿ. 300 ಗ್ರಾಂ ಚಿನ್ನವವನ್ನ ವಶಪಡಿಸಿಕೊಂಡ ಘಟನೆ ಚಿಕ್ಕಮಗಳೂರಿನ ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.
ಇದರ ಮೌಲ್ಯ ಎರಡು ಕೋಟಿ ರೂ. ಗಳಿಗೂ ಹೆಚ್ಚು ಎಂದು ಅಂದಾಜಿಸಲಾಗಿದೆ. ತರೀಕೆರೆ ಪಟ್ಟಣದ ಚೆಕ್‌ಪೋಸ್ಟ್‌ನಲ್ಲಿ ತರೀಕೆರೆಯಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದ ಪಿಕಪ್‌ ವಾಹನವನ್ನು ಪೊಲೀಸರು ಪರಿಶೀಲನೆ ನಡೆಸಿದಾಗ ಚಿನ್ನದ ಅಕ್ರಮ ಸಾಗಾಟ ಕಂಡುಬಂದಿದೆ. ಪಿಕಪ್‌ ವಾಹನದಲ್ಲಿ 9 ಕೆ.ಜಿ. 300 ಗ್ರಾಂ ತೂಕದ ಚಿನ್ನದ ಬಿಸ್ಕೆಟ್ ಹಾಗೂ ಚಿನ್ನಾಭರಣ ವಶಕ್ಕೆ ಪಡೆದಿರುವ ಪೊಲೀಸರು ಚಿನ್ನಕ್ಕೆ ಸೂಕ್ತ ದಾಖಲೆ ಸಲ್ಲಿಸುವಂತೆ ಸೂಚಿಸಿದ್ದಾರೆ. ಅಕ್ರಮ ಸಾಗಾಟ ಹಿನ್ನೆಲೆ ಹಲವು ಅನುಮಾನ ಮೂಡಿಸಿದ್ದರಿಂದ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರು ಎಸ್‌ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಇಬ್ಬರು ವಾಹನದಲ್ಲಿ ನಾಲ್ಕು ಬಾಕ್ಸ್‌ನಲ್ಲಿ ಚಿನ್ನವನ್ನು ತರುತ್ತಿದ್ದರು. ಪಿಕಪ್ ವಾಹನ ಸವಾರ ಸೇರಿ ಇಬ್ಬರನ್ನು ವಶಕ್ಕೆ ಪಡೆದು ಮಾಹಿತಿ ಸಂಗ್ರಹಿಸಲಾಗುತ್ತಿದೆ. ಚುನಾವಣೆ ನಿಮಿತ್ತ ಜಿಲ್ಲಾದ್ಯಂತ ಗಡಿಗಳಗಳಲ್ಲಿ ಚೆಕ್‌ಪೋಸ್ಟ್‌ ಅನ್ನು ನಿರ್ಮಿಸಲಾಗಿದ್ದು, ಚುನಾವಣಾ ಅಕ್ರಮಗಳು ಬೆಳಕಿಗೆ ಬರುತ್ತಿವೆ.
ಬುಧವಾರ ಚಿಕ್ಕಮಗಳೂರಿನಲ್ಲಿ ದಾಳಿ ನಡೆಸಿದ್ದ ಅಧಿಕಾರಿಗಳು 666ಕ್ಕೂ ಹೆಚ್ಚು ಸೀರೆಗಳನ್ನು ವಶಕ್ಕೆ ಪಡೆದಿದ್ದರು. ಚುನಾವಣೆಯಲ್ಲಿ ಹಂಚಲು ಖಾಸಗಿ ಗೋದಾಮಿನಲ್ಲಿ ಸೀರೆ ಸಂಗ್ರಹಿಸಲಾಗಿತ್ತು.

ಪ್ರಮುಖ ಸುದ್ದಿ :-   ಚಾಮರಾಜನಗರ : ಇಂಡಿಗನತ್ತ ಮತಗಟ್ಟೆ ಮೇಲೆ ಕಲ್ಲು ತೂರಾಟ, ಗಲಾಟೆ, ಮತಯಂತ್ರಕ್ಕೆ ಹಾನಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement