ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ

ಹಾಸನ : ಅನಾರೋಗ್ಯದಿಂದ ಬಳಲುತ್ತಿದ್ದ ಶ್ರವಣಬೆಳಗೊಳ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶರಾಗಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಕುರಿತು ಟ್ವೀಟ್‌ ಮಾಡಿದ್ದು, ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳು ನಮ್ಮನ್ನಗಲಿದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು ಎಂದು ಹೇಳಿದ್ದಾರೆ. ಬುಧವಾರ ರಾತ್ರಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ (74) ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು ಇಂದು ಗುರುವಾರ ಮುಂಜಾನೆಏರುಪೇರಿನಿಂದಾಗಿ ಅಸ್ವಸ್ಥಗೊಂಡು ಸ್ವಾಮೀಜಿಯವರು ಕುಸಿದು ಬಿದ್ದಿದ್ದರು. ಕೂಡಲೇ ಮಠದಲ್ಲೇ ವೈದ್ಯರು ಚಿಕಿತ್ಸೆ ನೀಡಿದ್ದು, ನಂತರ ಅವರನ್ನು ಮಠದಿಂದ ಆಂಬ್ಯುಲೆನ್ಸ್‌ ಮೂಲಕ ಬೆಳ್ಳೂರಿನ ಆದಿಚುಂಚನಗಿರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ.
ಚಾರುಕೀರ್ತಿ ಜೈನಭಟ್ಟಾರಕ ಸ್ವಾಮೀಜಿಗಳು ದೇಶಾದ್ಯಂತ ಅಪಾರಭಕ್ತರನ್ನು ಹೊಂದಿದ್ದಾರೆ. ಕರ್ನಾಟಕದ ಜೈನ ಸಮುದಾಯದ ಹಿರಿಯ ಸ್ವಾಮೀಜಿಗಳಾಗಿದ್ದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ 1970ರಿಂದಲೂ ಮಹಾಮಸ್ತಕಾಭಿಷೇಕಗಳನ್ನು ನೆರವೇರಿಸಿದ್ದರು
1949ರ ಮೇ 3ರಂದು ಜನಿಸಿದ್ದ ಶ್ರೀಗಳು 1969ರ ಡಿ.12 ರಂದು ಸ್ವಾಮೀಜಿಗಳಾದರು. 1970ರಲ್ಲಿ ಶ್ರವಣಬೆಳಗೊಳದ ಮಠದ ಪೀಠಾಧಿಪತಿಗಳಾದರು. ಹೋಯ್ಸಳ ವಂಶದಿಂದ ನೀಡಿದ ಚಾರುಕೀರ್ತಿ ಸ್ವಾಮೀಜಿ ಎಂಬ ಪಟ್ಟವನ್ನು ಇವರಿಗೂ ನೀಡಲಾಗಿತ್ತು. ಸ್ವಾಮೀಜಿಗಳು ಮೈಸೂರು ವಿಶ್ವವಿದ್ಯಾಲಯದಿಂದ ಇತಿಹಾಸ, ಬೆಂಗಳೂರು ವಿಶ್ವವಿದ್ಯಾಲಯದಿಂದ ತತ್ವಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. ಪ್ರಾಕೃತ, ಸಂಸ್ಕೃತ ಹಾಗೂ ಕನ್ನಡ ಭಾಷೆಯಲ್ಲಿ ಅಪಾರ ಪಾಂಡಿತ್ಯ ಹೊಂದಿದ್ದ ಇವರು 40ಕ್ಕೂ ಹೆಚ್ಚು ವರ್ಷಗಳಿಂದ ಅಧ್ಯಾತ್ಮಿಕ ಹಾಗೂ ಜನಪರ ಕೈಂಕರ್ಯಗಳಲ್ಲಿ ತೊಡಗಿಕೊಂಡಿದ್ದರು.

ಪ್ರಮುಖ ಸುದ್ದಿ :-   ಕುಮಟಾ : ಬಾಡದಲ್ಲಿ ಚಿರತೆ ದಾಳಿಗೆ ಇಬ್ಬರಿಗೆ ಗಾಯ ; ಮನೆಯೊಳಗೆ ನುಗ್ಗಿ ಅವಿತುಕೊಂಡ ಚಿರತೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಗಳಿಗೆ 2017ನೇ ಸಾಲಿನಲ್ಲಿ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿತ್ತು. ಪ್ರಾಕೃತದ ಜ್ಞಾನ ಭಂಡಾರ ಶ್ರೀಸಾಮಾನ್ಯನ ಕೈಗೆ ಸಿಗುವಂತೆ ಮಾಡಲು ಭಟ್ಟಾರಕ ಸ್ವಾಮೀಜಿ ಬೆಂಗಳೂರಿನಲ್ಲಿ ‘ಪ್ರಾಕೃತ ಜ್ಞಾನಭಾರತಿ ಶಿಕ್ಷಣ ಟ್ರಸ್ಟ್’ ಸ್ಥಾಪಿಸಿದ್ದಾರೆ.
ಪಾಲಿಟೆಕ್ನಿಕ್, ಇಂಜಿನಿಯರಿಂಗ್, ನರ್ಸಿಂಗ್ ಕಾಲೇಜುಗಳು ಸೇರಿದಂತೆ ಅನೇಕ ಕಾಲೇಜುಗಳು, ಪ್ರಾಕೃತ ವಿವಿ ಸ್ಥಾಪನೆ ಮಾಡಿದ್ದರು. ರಾಷ್ಟ್ರೀಯ ಪ್ರಾಕೃತ ಅಧ್ಯಯನ ಮತ್ತು ಸಂಶೋಧನಾ ಕೇಂದ್ರವನ್ನು ಸ್ಥಾಪಿಸಿದ್ದಾರೆ. ಅಲ್ಲದೇ ನೂರಾರು ಜೈನ‌ ದೇವಾಲಯ ಪುನರುಜ್ಜೀವನ ಗೊಳಿಸಿದ್ದರು.

ಭಟ್ಟಾರಕ ಸ್ವಾಮೀಜಿ ಅವರ ನಿಸ್ವಾರ್ಥ ಸೇವೆಗೆ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ‘ಕರ್ಮಯೋಗಿ’ ಎಂಬ ಬಿರುದನ್ನು ನೀಡಿ ಗೌರವಿಸಿದ್ದರು. ಮಹಾವೀರರ ನಿರ್ವಾಣದ 2500ನೇ ವಾರ್ಷಿಕೋತ್ಸವದ ಸ್ಮರಣಾರ್ಥವಾಗಿ ದಕ್ಷಿಣ ಭಾರತದಾದ್ಯಂತ ‘ಧರ್ಮಚಕ್ರ’ದ ಯಾತ್ರೆಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು
ಮೂಲತ ಶ್ರವಣ ಬೆಳಗೊಳದ ಜೈನ ಮಠದ ಸ್ವಾಮೀಜಿಗಳಿಗೆ 13ನೆ ಶತಮಾನದಲ್ಲಿ (1118-19)ಹೊಯ್ಸಳ ದೊರೆ ಬಲ್ಲಾಳರಾಯನು ನೀಡಿದ ಬಿರುದು” ಚಾರುಕೀರ್ತಿ” ಆಗಿನಿಂದ ಆ ಪೀಠದ ಸ್ವಾಮೀಜಿಗಳಿಗೆ ಸ್ವಸ್ಥಿ ಶ್ರಿ ಚಾರುಕೀರ್ತಿ”ಎಂದೆ ಕರೆಯಲಾಗುತ್ತಿದೆ

ಪ್ರಮುಖ ಸುದ್ದಿ :-   ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement