ಚಿಕ್ಕಮಗಳೂರು: ಪಿಕಪ್ ವಾಹನದಲ್ಲಿ ಸಾಗಿಸುತ್ತಿದ್ದ 9 ಕೆಜಿ ಚಿನ್ನ ವಶಕ್ಕೆ, ಇಬ್ಬರ ಬಂಧನ

ಚಿಕ್ಕಮಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಘೋಷಣೆ ಸನಿಹದಲ್ಲೇ ಇರುವ ಬೆನ್ನಲ್ಲೇ ಚುನಾವಣಾ ಅಕ್ರಮಗಳು ಕೂಡ ಹೆಚ್ಚಾಗುತ್ತಿವೆ. ಈಗ ದಾಖಲೆ ಇಲ್ಲದೆ ಪಿಕಪ್‌ನಲ್ಲಿ ಸಾಗಿಸುತ್ತಿದ್ದ 9 ಕೆ.ಜಿ. 300 ಗ್ರಾಂ ಚಿನ್ನವವನ್ನ ವಶಪಡಿಸಿಕೊಂಡ ಘಟನೆ ಚಿಕ್ಕಮಗಳೂರಿನ ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ಇದರ ಮೌಲ್ಯ ಎರಡು ಕೋಟಿ ರೂ. ಗಳಿಗೂ ಹೆಚ್ಚು ಎಂದು ಅಂದಾಜಿಸಲಾಗಿದೆ. ತರೀಕೆರೆ … Continued

ಹೊಸಪೇಟೆ-ವಾಸ್ಕೋಡಗಾಮ, ಲೊಂಡಾ-ಮೀರಜ್ ಮಾರ್ಗಗಳಲ್ಲಿ ರೈಲಿನ ವೇಗ ತಗ್ಗಿಸಲು ಮನವಿ: ಅರಣ್ಯ ಇಲಾಖೆಗೆ ಹೈಕೋರ್ಟ್‌ ನೋಟಿಸ್‌

ಬೆಂಗಳೂರು: ದಟ್ಟ ಅರಣ್ಯ ಪ್ರದೇಶದಲ್ಲಿ ಹಾದು ಹೋಗಿರುವ ಹೊಸಪೇಟೆ-ವಾಸ್ಕೋಡಗಾಮ ಹಾಗೂ ಲೊಂಡಾ-ಮೀರಜ್ ರೈಲು ಮಾರ್ಗಗಳಲ್ಲಿ ರಾತ್ರಿ ವೇಳೆ ರೈಲುಗಳ ವೇಗ ತಗ್ಗಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಅರಣ್ಯ ಇಲಾಖೆಗೆ ಹೈಕೋರ್ಟ್ ಮಂಗಳವಾರ ನಿರ್ದೇಶಿಸಿದೆ. ಬೆಳಗಾವಿಯ ಉಪ ಅರಣ್ಯ ಸಂರಕ್ಷಣಾಧಿಕಾರಿ, ಧಾರವಾಡ, ಬೆಳಗಾವಿ, ಹಳಿಯಾಳ ವಿಭಾಗದ ಉಪ ಅರಣ್ಯ … Continued

ಪ್ರಧಾನಿ ಮೋದಿ ‘ಮೋದಿʼ ಉಪನಾಮದ ಬಗ್ಗೆ ಅವಹೇಳನಕಾರಿ ಹೇಳಿಕೆ: ರಾಹುಲ್ ಗಾಂಧಿಗೆ 2 ವರ್ಷ ಜೈಲು, ಮೇಲ್ಮನವಿ ಸಲ್ಲಿಸಲು 30 ದಿನಗಳ ಅವಕಾಶ

ಸೂರತ್: ಪ್ರಧಾನಿ ನರೇಂದ್ರ ಮೋದಿ  ಉಪನಾಮದ ವಿರುದ್ಧ  ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೋಷಿ ಎಂದು ಸೂರತ್ ಕೋರ್ಟ್ ತೀರ್ಪು ನೀಡಿದೆ. ಗುಜರಾತ್‌ನ ಸೂರತ್‌ನ ನ್ಯಾಯಾಲಯವು ಪ್ರಧಾನಿ ನರೇಂದ್ರ ಮೋದಿ ಅವರ ಉಪನಾಮದ (surname) ಬಗ್ಗೆ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ 2019 ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ … Continued

ವಿವಾಹೇತರ ಸಂಬಂಧ..ವೀಡಿಯೋ ಕರೆಗಳಲ್ಲಿ ಚುಂಬನ..ಅಶ್ಲೀಲ ವೀಡಿಯೊಗಳ ಮೂಲಕ ಮಹಿಳೆಯರಿಗೆ ಬ್ಲ್ಯಾಕ್‌ಮೇಲ್ : ಇದು ಅಮೃತಪಾಲ್‌ ಸಿಂಗ್‌ ರಂಗೀಲಾ ಜೀವನ-ವರದಿ

ನವದೆಹಲಿ : ಖಾಲಿಸ್ತಾನಿ ಪ್ರತಿಪಾದಕ ಅಮೃತಪಾಲ್ ಸಿಂಗ್‌ಗಾಗಿ ಪಂಜಾಬ್ ಪೊಲೀಸರು ಹುಡುಕಾಟ ಮುಂದುವರಿಸಿದ್ದು, ಪರಾರಿಯಾಗಿರುವ ಆತನ ರಂಗೀಲಾ ಜೀವನದ ವಿವರಗಳು ಈಗ ಸಾರ್ವಜನಿಕ ಡೊಮೇನ್‌ಗೆ ಬಂದಿವೆ. ಮಾಧ್ಯಮ ವರದಿಗಳ ಪ್ರಕಾರ, ‘ವಾರಿಸ್ ಪಂಜಾಬ್ ದೇ’ ಸ್ವಯಂ ಘೋಷುತ ಮುಖ್ಯಸ್ಥ ಆನ್‌ಲೈನ್‌ನಲ್ಲಿ ಹಲವಾರು ಹುಡುಗಿಯರೊಂದಿಗೆ ಚಾಟ್ ಮಾಡುತ್ತಿದ್ದ ಮತ್ತು ಹಲವಾರು ವಿವಾಹಿತ ಮತ್ತು ಅವಿವಾಹಿತ ಮಹಿಳೆಯರೊಂದಿಗೆ ವಿವಾಹೇತರ … Continued

ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ

ಹಾಸನ : ಅನಾರೋಗ್ಯದಿಂದ ಬಳಲುತ್ತಿದ್ದ ಶ್ರವಣಬೆಳಗೊಳ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶರಾಗಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಕುರಿತು ಟ್ವೀಟ್‌ ಮಾಡಿದ್ದು, ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳು ನಮ್ಮನ್ನಗಲಿದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು ಎಂದು ಹೇಳಿದ್ದಾರೆ. ಬುಧವಾರ ರಾತ್ರಿ … Continued

ಏಕದಿನ ಪಂದ್ಯದಲ್ಲಿ ಸತತ ಮೂರು ಸಲ ಸೊನ್ನೆಗೆ ಔಟಾದ ಭಾರತದ ಮೊದಲ ಬ್ಯಾಟರ್ ಆದ ಸೂರ್ಯಕುಮಾರ ಯಾದವ್ ; ಸಚಿನ್ ನೇತೃತ್ವದ ವಿಲಕ್ಷಣ ದಾಖಲೆಗಳ ಪಟ್ಟಿಗೆ ಸೇರ್ಪಡೆ

ನವದೆಹಲಿ : ವಿಶ್ವದ ಅಗ್ರ ಶ್ರೇಯಾಂಕದ ಟ್ವೆಂಟಿ-20 ಬ್ಯಾಟರ್, ಭಾರತದ ಸೂರ್ಯಕುಮಾರ ಯಾದವ, ಆಸ್ಟ್ರೇಲಿಯಾ ವಿರುದ್ಧದ ರೋಚಕ ಮೂರನೇ ಮತ್ತು ಅಂತಿಮ ಏಕದಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಬುಧವಾರ ಸತತ ಮೂರನೇ ಗೋಲ್ಡನ್ ಡಕ್‌ಗೆ ಔಟಾದರು. ಅಲ್ಲದೆ, ಚೆನ್ನೈನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಸತತ ಮೂರು ಗೋಲ್ಡನ್ ಡಕ್‌ಗಳನ್ನು … Continued