ಎಸ್‌ಟಿ, ಎಸ್‌ಸಿ ಮೀಸಲಾತಿ ವಿಳಂಬ ಖಂಡಿಸಿ ರಾಜಭವನ ಚಲೋ : ಸಿದ್ದರಾಮಯ್ಯ, ಡಿಕೆಶಿ ಪೊಲೀಸ್ ವಶಕ್ಕೆ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪಂಗಡದ ಮೀಸಲಾತಿ ಜಾರಿ ವಿಚಾರದಲ್ಲಿ ವಿಳಂಬ ಧೋರಣೆ ಅನುಸರಿಸಿದ ಆರೋಪದ ಮೇಲೆ ರಾಜ್ಯ ಸರ್ಕಾರದ ವಿರುದ್ಧ ಇಂದು ಶುಕ್ರವಾರ ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್ ನಾಯಕರನ್ನ ಪೊಲೀಸರು ವಶಕ್ಕೆ ಪಡೆದರು.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿ ವಿಚಾರದಲ್ಲಿ ಸರ್ಕಾರ ವಿಳಂಬ ಧೋರಣೆ ಅನುಸರಿಸಿ ಮೋಸ ಮಾಡುತ್ತಿದೆ. ಮೀಸಲಾತಿ ಹೆಚ್ಚಳ ಮಾಡಿ ಆದೇಶ ಮಾಡಿದರೂ ಸಂವಿಧಾನದ 8 ನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ‌ ಶಿಫಾರಸ್ಸು ಮಾಡಿಲ್ಲ ಎಂದು‌ ಆರೋಪಿಸಿ ಆರೋಪಿಸಿ ಕಾಂಗ್ರೆಸ್‌ ವಿಪಕ್ಷ ನಾಯಕ ಸಿದ‍್ಧರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯಿಂದ ರಾಜಭವನ ಚಲೋ ಹಮ್ಮಿಕೊಳ್ಳಲಾಗಿತ್ತು.
ಆದರೆ ಕಾಂಗ್ರೆಸ್ ನಾಯಕರನ್ನು ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದಿದ್ದು, ಈ ವೇಳೆ ಪೊಲೀಸರು ಕಾಂಗ್ರೆಸ್ ನಾಯಕರ ನಡುವೆ ವಾಗ್ವಾದ ನಡೆಯಿತು. ನಂತರ ಕಾಂಗ್ರೆಸ್ ನಾಯಕರು ರಸ್ತೆಯಲ್ಲೇ ಕುಳಿತು ಧರಣಿ ನಡೆಸಲು ಮುಂದಾದರು. ಈ ಸಮಯದಲ್ಲಿ ಪೊಲೀಸರು ಸಿದ್ಧರಾಮಯ್ಯ ಹಾಗೂ ಡಿ.ಕೆ ಶಿವಕುಮಾರ, ಡಾ. ಜಿ.ಪರಮೇಶ್ವರ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನ ವಶಕ್ಕೆ ಪಡೆದರು.

ಪ್ರಮುಖ ಸುದ್ದಿ :-   ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣ : ಪ್ರಮುಖ ಆರೋಪಿ ಬಂಧನ

ಈ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ಮಾಡಿ ಆದೇಶ ಮಾಡಿದರೂ ಸಂವಿಧಾನದ 8 ನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ‌ ಶಿಫಾರಸ್ಸು ಮಾಡದೆ ವಿಳಂಬ ಧೋರಣೆ ಅನುಸರಿಸುತ್ತಿದೆ. ಬಿಜೆಪಿ ಸರ್ಕಾರ ಪರಿಶಿಷ್ಟ ಸಮುದಾಯಕ್ಕೆ ಮೋಸ ಮಾಡಿದೆ. ಇಲ್ಲಿಯವರೆಗೆ ಸುಮ್ಮನಿದ್ದ ಸರ್ಕಾರ ಈಗ ನಾವು ಪ್ರತಿಭಟನೆಗೆ ಮುಂದಾದ ನಂತರ ಈಗ ಕಳುಹಿಸಲು ಮುಂದಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಾವು ಬೃಹತ್ ಮಟ್ಟದಲ್ಲಿ ಪ್ರತಿಭಟನೆ ಕೈಗೆತ್ತಿಕೊಂಡ ನಂತರ ಸರ್ಕಾರ ಈಗ ತರಾತುರಿಯಲ್ಲಿ ಕಣ್ಣೊರೆಸುವ ತಂತ್ರಕ್ಕೆ ಮುಂದಾಗಿದೆ. ಇದು ಬಿಜೆಪಿ ಕರ್ನಾಟಕದ ಕಿವಿ ಮೇಲೆ ಹೂ ಇಡುವ ಕೆಲಸ ಎಂಬುದು ಸ್ಪಷ್ಟ. ಇಲ್ಲಿಯವರೆಗೆ ಸುಮ್ಮನಿದ್ದು, ಈಗ ಪ್ರಸ್ತಾವನೆ ಸಲ್ಲಿಸುವುದು ಮೂಗಿಗೆ ತುಪ್ಪ ಸವರಲು ಮಾತ್ರ ಎಂದು ಕಾಂಗ್ರೆಸ್‌ ಕಿಡಿಕಾರಿದೆ.
ಕಾಂಗ್ರೆಸ್‌ ನಾಯಕರನ್ನು ವಶಕ್ಕೆ ಪಡೆದಿರುವ ಪೊಲೀಸರು ಬಸ್‌ನಲ್ಲಿ ಕರೆದುಕೊಂಡು ಹೋಗಿದ್ದಾರೆ

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement