ಯಾವುದೇ ಸಮಯದಲ್ಲಿ ಕರ್ನಾಟಕ ವಿಧಾನಸಭೆಗೆ ಚುನಾವಣೆ ಘೋಷಣೆ ಸಾಧ್ಯತೆ: ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಚುನಾವಣಾ ಆಯೋಗದ ಸೂಚನೆ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಈ ವಾರದೊಳಗೆ ಚುನಾವಣೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ.
ಈ ಬಗ್ಗೆ ತುರ್ತು ಆದೇಶ ಹೊರಡಿಸಿರುವ ಚುನಾವಣಾ ಆಯೋಗ ಎಲ್ಲ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಿಗೆ ಅಗತ್ಯ ಸಿದ್ಧತಾ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ. ಮಾರ್ಚ್‌ 27 ಅಥವಾ 28ರಂದು ಚುನಾವಣೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮುಖ್ಯ ಚುನಾವಣಾಧಿಕಾರಿ ಪತ್ರದ ಮೂಲಕ ತುರ್ತು ಸೂಚನೆ ನೀಡಿದ್ದಾರೆ. ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಪತ್ರದಲ್ಲಿ ಸಂದೇಶ ನೀಡಿದ್ದು, ಯಾವುದೇ ಕ್ಷಣಗಳಲ್ಲಿ ಚುನಾವಣೆ ಘೋಷಣೆಯಾಗಬಹುದು ಎಂದು ತಿಳಿಸಿದ್ದಾರೆ.
ಚುನಾವಣೆ ಘೋಷಣೆಗೂ ಮುನ್ನವೇ ಹಲವು ತುರ್ತು ಕಾರ್ಯಗಳನ್ನು ನಿರ್ವಹಿಸಬೇಕಿದೆ. ಮಾದರಿ ಚುನಾವಣಾ ನೀತಿ ಸಂಹಿತೆಯಂತೆ ತಕ್ಷಣ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರಾಜ್ಯದ ಎಲ್ಲ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಚುನಾವಣಾ ಆಯೋಗವು ಸೂಚಿಸಿದೆ. ಮೇ 23ರಂದು ಪ್ರಸ್ತುತ ಸರ್ಕಾರದ ಅವಧಿ ಮುಗಿಯುವುದರಿಂದ ಅದರೊಳಗೆ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುವಂತೆ ಚುನಾವಣೆ ನಡೆಸಬೇಕಾಗಿದೆ.
ಹಲವು ಜಿಲ್ಲೆಯ ಜಿಲ್ಲಾಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದಾರೆ. ಹಲವು ಜಿಲ್ಲೆಯ ಗಡಿಗಳಲ್ಲಿ ಈಗಾಗಲೇ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಿದ್ದು, ಚುನಾವಣಾ ಅಕ್ರಮದ ಮೇಲೆ ಕಣ್ಣಿಡಲಾಗಿದೆ.
ಈಗಾಗಲೇ ಎಲ್ಲ ಕಡೆ ನೀತಿ ಸಂಹಿತೆಯ ಪಾಲನೆಗೆ ಅಗತ್ಯ ತಯಾರಿ ಮಾಡಿಕೊಳ್ಳಲಾಗಿದೆ.

ಪ್ರಮುಖ ಸುದ್ದಿ :-   ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement