ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ಗೆ ಶಾಕ್‌: ಜೆಡಿಎಸ್‌ ಸೇರಿದ ಸಂಭಾವ್ಯ ಕಾಂಗ್ರೆಸ್‌ ಅಭ್ಯರ್ಥಿ…!

ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ದಳಪತಿಗಳು ಜೆಡಿಎಸ್‌ ಕಾಂಗ್ರೆಸ್‌ಗೆ ಶಾಕ್‌ ನೀಡಿದೆ. ಚನ್ನಪಟ್ಟಣದ ಮತಕ್ಷೇತ್ರದ ಕಾಂಗ್ರೆಸ್‌ನ ಸಂಭಾವ್ಯ ಅಭ್ಯರ್ಥಿ ಪ್ರಸನ್ನಗೌಡ ಪಿ ಜೆಡಿಎಸ್‌ ಸೇರಿದ್ದಾರೆ.
ಕಾಂಗ್ರೆಸ್‌ ಟಿಕೆಟ್‌ ಇವರಿಗೆ ಬಹುತೇಕ ಖಚಿತ ಎಂದು ಹೇಳಲಾಗಿತ್ತು. ಆದರೆ, ಮೊದಲ ಪಟ್ಟಿಯಲ್ಲಿ ಚನ್ನಪಟ್ಟಣಕ್ಕೆ ಟಿಕೆಟ್‌ ಘೋಷಣೆ ಮಾಡಿರಲಿಲ್ಲ. ಇದರಿಂದ ಬೇಸರಗೊಂಡ ಪ್ರಸನ್ನಗೌಡ ಜೆಡಿಎಸ್‌ ಸೇರುವುದಾಗಿ ಪ್ರಕಟಿಸಿದ್ದಾರೆ.
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರೊಂದಿಗೆ ಕಾಣಿಸಿಕೊಂಡ ಪ್ರಸನ್ನಗೌಡ ಅವರು ಜೆಡಿಎಸ್‌ ಪಕ್ಷಕ್ಕೆ ಸೇರುತ್ತಿರುವುದಾಗಿ ಹೇಳಿದರು. ಅನೇಕ ವಿಚಾರದಲ್ಲಿ ಕಾಂಗ್ರೆಸ್‌ನಿಂದ ನನಗೆ ಬೇಸರವಾಗಿದೆ ಎಂದು ಹೇಳಿದರು.
ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಈಗ ಅಭ್ಯರ್ಥಿಗಾಗಿ ಹುಡುಕಾಟ ನಡೆಸಬೇಕಾಗಿದೆ. ಕಳೆದ ಬಾರಿ ಮಾಜಿ ಸಚಿವ ಎಚ್‌ಎಂ ರೇವಣ್ಣ ಅವರನ್ನು ಕಾಂಗ್ರೆಸ್‌ ಕಣಕ್ಕಿಳಿಸಿತ್ತು. ಈ ಬಾರಿ ಉದ್ಯಮಿ ಪ್ರಸನ್ನಗೌಡ ಅವರಿಗೆ ಟಿಕೆಟ್‌ ಬಹುತೇಕ ಖಾತ್ರಿಯಾಗಿತ್ತು. ಆದರೆ, ಅವರು ಈ ವೇಳೆ ಜೆಡಿಎಸ್‌ಗೆ ಸೇರಿದ್ದರಿಂದ ಕಾಂಗ್ರೆಸ್‌ ಈಗ ಅಭ್ಯರ್ಥಿಗಾಗಿ ಹುಡುಕಾಟ ನಡೆಸಬೇಕಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement