ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟದ ಹಿಂದೆ ಕಾಂಗ್ರೆಸ್ ಕೈವಾಡ : ಸಿಎಂ ಬೊಮ್ಮಾಯಿ ಆರೋಪ

posted in: ರಾಜ್ಯ | 0

ಚಿಕ್ಕಬಳ್ಳಾಪುರ : ಒಳ ಮೀಸಲಾತಿ ಜಾರಿಗೆ ವಿರೋಧಿಸಿ ಶಿಕಾರಿಪುರದಲ್ಲಿ ನಡೆದ ಪ್ರತಿಭಟನೆ ವೇಳೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮನೆ ಮೇಲೆ ನಡೆದ ಕಲ್ಲು ತೂರಾಟದ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಇಂದು, ಸೋಮವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಮನೆ ಮೇಲೆ ನಡೆದ ಕಲ್ಲು ತೂರಾಟದ ಹಿಂದೆ ಶಿವಮೊಗ್ಗದ ಸ್ಥಳೀಯ ಕಾಂಗ್ರೆಸ್ ಮುಖಂಡರ ಕೈವಾಡವಿದೆ. ಅವರು ರಾಜಕೀಯ ಲಾಭಕ್ಕಾಗಿ ಇಂತಹ ಕೃತ್ಯ ಮಾಡುತ್ತಿದ್ದಾರೆ. ಒಂದು ರಾಷ್ಟ್ರೀಯ ಪಕ್ಷ ಮಾಡುವಂತಹ ಕೆಲಸವಲ್ಲ. ಕಾಂಗ್ರೆಸ್ ಶಕುನಿ ಕೆಲಸ ಮಾಡುತ್ತಿರುವ ಬಗ್ಗೆ ಸುರ್ಜೆವಾಲ ಹೇಳಬೇಕು ಎಂದು ಹೇಳಿದರು.
ನಾವು ಸದಾಶಿವ ವರದಿಯಂತೆ ಒಳ ಮೀಸಲಾತಿ ಜಾರಿಗೆ ತಂದಿಲ್ಲ. ಸಚಿವ ಸಂಪುಟದ ತೀರ್ಮಾನದಂತೆ ಮಾಡಿದ್ದೇವೆ. ಯಾವ ಸಮಾಜಕ್ಕೂ ಅನ್ಯಾಯ ಮಾಡಿಲ್ಲ, ಬದಲಾಗಿ ಮೀಸಲಾತಿ ಹೆಚ್ಚಳವಾಗಿದೆ ಎಂದು ತಿಳಿಸಿದರು.
ಬಂಜಾರಾ ಸಮುದಾಯದ ಜನರನ್ನು ಪ್ರಚೋದಿಸಿ ಪ್ರತಿಭಟನೆ ನಡೆಸುವಂತೆ ಮಾಡಿದ್ದಾರೆ. ಯಾರೂ ಕೂಡ ಪ್ರಚೋದನೆಗೆ ಒಳಗಾಗಬಾರದು ಹಾಗೂ ಸಮಾಜ ಪ್ರಕ್ಷುಬ್ಧಗೊಳಿಸುವ ಕೆಲಸವನ್ನು ಯಾರೂ ಮಾಡಬಾರದು ಎಂದು ಮನವಿ ಮಾಡಿದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಇಂದಿನಿಂದ ಶಾಲೆಗಳು ಪುನರಾರಂಭ: ಮೇ 31ರಿಂದ ತರಗತಿ ಆರಂಭ

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement