ಲಂಚ ಪ್ರಕರಣ: ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಬಂಧನ

ಬೆಂಗಳೂರು: ಲಂಚ ಪ್ರಕರಣದ ಪ್ರಮುಖ ಆರೋಪಿಯಾಗಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ಸಂಜೆ ಬಂಧಿಸಿದ್ದಾರೆ.
ಮಾಡಾಳು ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಸೋಮವಾರ ವಜಾಗೊಳಿಸಿದ ನಂತರ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಅರ್ಜಿ ವಜಾಗೊಂಡ ವೇಳೆ ಚನ್ನಗಿರಿಯಲ್ಲಿ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅವರು, ಕ್ಷಣಮಾತ್ರದಲ್ಲಿ ಅಲ್ಲಿಂದ ತೆರಳಿ ನಾಪತ್ತೆಯಾಗಿದ್ದರು. ಅವರನ್ನು ಬಂಧಿಸುವುದಕ್ಕಾಗಿ ಲೋಕಾಯುಕ್ತ ಪೊಲೀಸರ ತಂಡ ಅವರ ನಿವಾಸಕ್ಕೆ ತೆರಳಿತ್ತು. ಆದರೆ, ಅಷ್ಟರಲ್ಲೇ ಅವರು ಬೆಂಗಳೂರಿಗೆ ಕಾರಿನಲ್ಲಿ ತೆರಳಿದ್ದಾರೆ ಎನ್ನಲಾಗಿತ್ತು.
ಕೊನೆಗೂ ಲೋಕಾಯುಕ್ತ ಪೊಲೀಸರು ಅವರನ್ನು ಯಶಸ್ವಿಯಾಗಿದ್ದಾರೆ. ಚನ್ನಗಿರಿಯಿಂದ ಬೆಂಗಳೂರಿಗೆ ಬರುತ್ತಿದ್ದಾಗ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ನಲ್ಲಿ ಮೊದಲ ಆರೋಪಿಯಾಗಿರುವ ಚನ್ನಗಿರಿಯ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿ, ಮಾರ್ಚ್‌ 17ರಂದು ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಕೆ ನಟರಾಜನ್‌ ನೇತೃತ್ವದ ಏಕಸದಸ್ಯ ಪೀಠವು ಇಂದು, ಸೋಮವಾರ ಪ್ರಕಟಿಸಿದ್ದು, ಮಧ್ಯಂತರ ಜಾಮೀನು ಅರ್ಜಿಯನ್ನು ಸೋಮವಾರ ವಜಾ ಮಾಡಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ವೀಡಿಯೊ : ನೋಡನೋಡುತ್ತಲೇ ಕೆಲವೇ ಸೆಕೆಂಡುಗಳಲ್ಲಿ ಕುಸಿದುಬಿದ್ದ ಚತುಷ್ಪಥ ಸೇತುವೆ | ವೀಕ್ಷಿಸಿ

ಮಾರ್ಚ್‌ 7ರಂದು ಮಾಡಾಳು ವಿರೂಪಾಕ್ಷಪ್ಪ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯವು ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿತ್ತು. ಐದು ಲಕ್ಷ ರೂಪಾಯಿ ವೈಯಕ್ತಿಕ ಬಾಂಡ್‌ ಸಲ್ಲಿಸಬೇಕು ಹಾಗೂ ಆದೇಶವಾದ 48 ಗಂಟೆಗಳ ಒಳಗೆ ತನಿಖಾಧಿಕಾರಿಯ ಮುಂದೆ ಹಾಜರಾಗಬೇಕು. ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡಬೇಕು. ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಸಾಕ್ಷ್ಯ ನಾಶಕ್ಕೆ ಯತ್ನಿಸಬಾರದು ಎಂಬ ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿತ್ತು. ನಂತರ ಮಾರ್ಚ್‌ 17ರಂದು ವಾದ-ಪ್ರತಿ ವಾದ ಆಲಿಸಿದ್ದ ನ್ಯಾಯಾಲಯವು ಆದೇಶ ಕಾಯ್ದಿರಿಸಿತ್ತು.
ಕೆಎಸ್‌ಡಿಎಲ್ ಟೆಂಡರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕಳೆದ ತಿಂಗಳು ‌ ₹ 40 ಲಕ್ಷ ಲಂಚ ಸ್ವೀಕರಿಸುವಾಗ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ ಮಾಡಳು ಅವರು ರೆಡ್‌ ಹ್ಯಾಂಡ್‌ ಆಗಿ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದ ನಂತರ ಶಾಸಕ ವಿರೂಪಾಕ್ಷ ಮಾಡಾಳು ಅವರನ್ನು ಪ್ರಕರಣದ ಪ್ರಮುಖ ಆರೋಪಿಯನ್ನಾಗಿ ಮಾಡಲಾಗಿತ್ತು.
ಮಾರ್ಚ್‌ 7ರಂದು ಮಾಡಾಳು ವಿರೂಪಾಕ್ಷಪ್ಪ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯವು ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿತ್ತು. ಐದು ಲಕ್ಷ ರೂಪಾಯಿ ವೈಯಕ್ತಿಕ ಬಾಂಡ್‌ ಸಲ್ಲಿಸಬೇಕು ಹಾಗೂ ಆದೇಶವಾದ 48 ಗಂಟೆಗಳ ಒಳಗೆ ತನಿಖಾಧಿಕಾರಿಯ ಮುಂದೆ ಹಾಜರಾಗಬೇಕು. ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡಬೇಕು. ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಸಾಕ್ಷ್ಯ ನಾಶಕ್ಕೆ ಯತ್ನಿಸಬಾರದು ಎಂಬ ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿತ್ತು. ನಂತರ ಮಾರ್ಚ್‌ 17ರಂದು ವಾದ-ಪ್ರತಿ ವಾದ ಆಲಿಸಿದ್ದ ನ್ಯಾಯಾಲಯವು ಆದೇಶ ಕಾಯ್ದಿರಿಸಿತ್ತು. ಸೋಮವಾರ ಆದೇಶ ಪ್ರಕಟಿಸಿದ್ದು, ಮಧ್ಯಂತರ ಜಾಮೀನು ಅರ್ಜಿಯನ್ನು ಸೋಮವಾರ ವಜಾ ಮಾಡಿದೆ.

ಇಂದಿನ ಪ್ರಮುಖ ಸುದ್ದಿ :-   ಅತ್ಯಾಚಾರ ಸಂತ್ರಸ್ತೆಯ ಕುಜ ದೋಷ ಪರಿಶೀಲಿಸಲು ಅಲಹಾಬಾದ್ ಹೈಕೋರ್ಟ್ ನೀಡಿದ ಆದೇಶಕ್ಕೆ ತಡೆ ನೀಡಿದ ಸುಪ್ರೀಂಕೋರ್ಟ್‌

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement