ಬೆಂಗಳೂರಲ್ಲಿ ಒಂದೇ ದಿನ 100ಕ್ಕಿಂತ ಹೆಚ್ಚು ಕೋವಿಡ್‌ ಪ್ರಕರಣಗಳು ದಾಖಲು: ರಾಜ್ಯದಲ್ಲಿ ಏರಿಕೆಯತ್ತ ಕೊರೊನಾ

ಬೆಂಗಳೂರು: ಭಾನುವಾರ ರಾಜ್ಯದಲ್ಲಿ ಹೊಸದಾಗಿ 209 ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರಿನಲ್ಲಿ 100ಕ್ಕೂ ಹೆಚ್ಚು ಕೋವಿಡ್‌-19 ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಸಕ್ರಿಯ ಕೋವಿಡ್‌ ಪ್ರಕರಣಗಳು 709  ಪ್ರಕರಣಗಳಿವೆ.
ಕರ್ನಾಟಕ ಆರೋಗ್ಯ ಇಲಾಖೆ ಪ್ರಕಟಿಸಿದ ಹೆಲ್ತ್‌ ಬುಲೆಟಿನ್‌ ಬಿಡುಗಡೆ ಮಾಡಿದ್ದು ಭಾನುವಾರ ಕೊರೊನಾ ಸಂಬಂಧಿತ ಸಾವು ವರದಿಯಾಗಿಲ್ಲ ಎಂದು ತಿಳಿಸಿದೆ.ಭಾನುವಾರ ಬೆಂಗಳೂರು ನಗರದಲ್ಲಿ 120 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಬೆಂಗಳೂರು ಗ್ರಾಮಾಂತರದಲ್ಲಿ 7 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ವರದಿಯಾಗಿದೆ. ಬೆಂಗಳೂರು ನಗರದಲ್ಲಿ 383 ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ 6 ಸಕ್ರಿಯ ಪ್ರಕರಣಗಳಿವೆ.
ಕಳೆದ ಕೆಲವು ತಿಂಗಲ ನಂತರ ಬೆಂಗಳೂರಿನಲ್ಲಿ 100ಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾಗಿದೆ. ಶನಿವಾರ ರಾಜ್ಯದಲ್ಲಿ 155 ಕೋವಿಡ್‌ ಪ್ರಕರಣಗಳು ದಾಖಲಾಗಿದ್ದವು. ಈ ಸಮಯದಲ್ಲಿ ಬೆಂಗಳೂರಿನಲ್ಲಿ 58 ಪ್ರಕರಣಗಳು ವರದಿಯಾಗಿದ್ದವು. ಭಾನುವಾರ ಎರಡು ಪಟ್ಟು ಪ್ರಕರಣಗಳು ವರದಿಯಾಗಿದೆ.
ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ತೆಲಂಗಾಣ, ತಮಿಳುನಾಡು ಮತ್ತು ಕೇರಳದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಚ್ಚರಿಕೆಯಿಂದ ಇರುವಂತೆ ಕೇಂದ್ರ ಸರ್ಕಾರ ಸೂಚಿಸಿದೆ. ಕೇಂದ್ರ ಆರೋಗ್ಯ ಸಚಿವಾಲಯ ನಿರಂತರ ಮೇಲ್ವಿಚಾರಣೆ ಮತ್ತು ಸೋಂಕು ತಡೆಗಟ್ಟುವ ಕ್ರಮಗಳ ಬಗ್ಗೆ ಸೂಚನೆಗಳನ್ನು ನೀಡಿದೆ.
ದೇಶದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ .1,805 ಹೊಸ ಕೋವಿಡ್‌-19 ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳು 10,000 ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಸೋಮವಾರದ ಪರಿಷ್ಕೃತ ಅಂಕಿಅಂಶಗಳು ತಿಳಿಸಿವೆ.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement