ಶಾಸಕ ಸ್ಥಾನಕ್ಕೆ ಗುಬ್ಬಿ ಶ್ರೀನಿವಾಸ ಇಂದು ರಾಜೀನಾಮೆ

ತುಮಕೂರು: ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಶುರುವಾಗಿದ್ದು ಈಗ ತುಮಕೂರು ಜಿಲ್ಲೆ ಗುಬ್ಬಿ ಕ್ಷೇತ್ರದ ಜೆಡಿಎಸ್ (JDS) ಉಚ್ಛಾಟಿತ ಶಾಸಕ ಎಸ್‌ಆರ್ ಶ್ರೀನಿವಾಸ ಅವರು ಇಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಈ ಕುರಿತು ಇಂದು, ಸೋಮವಾರ ತುಮಕೂರಿನಲ್ಲಿ ಮಾತನಾಡಿದ ಶಾಸಕ ಎಸ್.ಆರ್ ಶ್ರೀನಿವಾಸ ಅವರು, ನಾನು ನೋವಿನಿಂದ ಜೆಡಿಎಸ್‌ಗೆ ರಾಜೀನಾಮೆ ಸಲ್ಲಿಕೆ ಮಾಡುತ್ತಿದ್ದೇನೆ. ತುಮಕೂರಿನಲ್ಲಿ ಹೆಚ್.ಡಿ ದೇವೇಗೌಡರನ್ನ ಸೋಲಿಸಿಲ್ಲ. ನಾನು ಪಕ್ಷ ಬಿಡಲ್ಲ ಅಂದರೂ ಅಭ್ಯರ್ಥಿ ಘೋಷಿಸಿದ್ದಾರೆ. ಹೆಚ್.ಡಿ ಕುಮಾರಸ್ವಾಮಿ ನನ್ನ ತಮ್ಮನ ರೀತಿ ಸಹಕಾರ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.
ಸುಮಾರು ಎರಡು ದಶಕಗಳ ಕಾಲ ಪಕ್ಷಕ್ಕಾಗಿ ದುಡಿಯುವ ಅವಕಾಶ ನೀಡಿದ್ದಕ್ಕಾಗಿ ಪಕ್ಷದ ವರಿಷ್ಠ ಹೆಚ್ ಡಿ ದೇವೇಗೌಡರನ್ನು ಎಸ್.ಆರ್ ಶ್ರೀನಿವಾಸ್ ಅವರು ಸ್ಮರಿಸಿಕೊಂಡಿದ್ದಾರೆ.
ಅವರು ತಮ್ಮ ರಾಜೀನಾಮೆ ಪತ್ರವನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಇಂದು ಸಲ್ಲಿಸಲಿದ್ದಾರೆ. ನಾನು ಸ್ವಯಿಚ್ಛೆಯಿಂದ ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ತಾವುಗಳು ದಯಮಾಡಿ ನನ್ನ ರಾಜೀನಾಮೆಯನ್ನು ಅಂಗೀಕರಿಸಬೇಕು ಎಂದು ವಿಧಾಸಭೆ ಸಭಾಧ್ಯಕ್ಷರಿಗೆ ಬರೆದ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement