ಬಿಜೆಪಿ ವಿರುದ್ಧ ರಣ ಕಹಳೆ ಮೊಳಗಿಸಲು ಏಪ್ರಿಲ್‌ 5ರಂದು ಕೋಲಾರಕ್ಕೆ ರಾಹುಲ್‌ ಗಾಂಧಿ ಆಗಮನ..?

ಬೆಂಗಳೂರು:  ಕೋಲಾರದಲ್ಲಿ ಮೋದಿ ಉಪನಾಮದ ಬಗ್ಗೆ ಹೇಳಿಕೆ ನೀಡಿ ಲೋಕಸಭಾ ಸದಸ್ಯತ್ವ ಕಳೆದುಕೊಂಡಿದ್ದ ರಾಹುಲ್‌ ಗಾಂಧಿ ಈಗ ಮತ್ತೆ ಕೋಲಾರ ಕ್ಷೇತ್ರಕ್ಕೆ ಏಪ್ರಿಲ್‌ 5ರಂದು ಆಗಮಿಸಿ ಭಾಷಣ ಮಾಡಲಿದ್ದಾರೆ ಎಂದು ವರದಿಯಾಗಿದೆ.
2019ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮುದಾಯ ವಿರುದ್ಧ ಅವಹೇಳಕಾರಿಯಾಗಿ ಮಾತನಾಡಿದ್ದಾರೆಂಬ ಆರೋಪದ ಮೇಲೆ ರಾಹುಲ್‌ ಗಾಂಧಿಗೆ ಸೂರತ್‌ ನ್ಯಾಯಾಲಯ 2 ವರ್ಷ ಜೈಲು ಶಿಕ್ಷೆ ವಿಧಿಸಿದ ನಂತರ ಅವರು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿದ್ದರು.
ಈಗ ಕೋಲಾರದಿಂದಲೇ ಬಿಜೆಪಿಗೆ ಪ್ರತ್ಯುತ್ತರ ನೀಡಲು ಏಪ್ರಿಲ್​ 5 ರಂದು ರಾಹುಲ್​ ಗಾಂಧಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಅದೇ ಸ್ಥಳದಲ್ಲಿ ಕಾರ್ಯಕ್ರಮವನ್ನು ಆಯೋಜಿಸಿ ಅದನ್ನು ತನ್ನ ಅನುಕೂಲಕ್ಕೆ ಬಳಸಿಕೊಳ್ಳಲು ಕಾಂಗ್ರೆಸ್ ಬಯಸಿದೆ ಎನ್ನಲಾಗಿದೆ. ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರದ ಹಿನ್ನೆಲೆಯಲ್ಲಿ ರಾಹುಲ್​ ಗಾಂಧಿ ಎರಡನೇ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಕಳೆದ ವಾರ ಬೆಳಗಾವಿಗೆ ಆಗಮಿಸಿದ್ದರು. ಈ ಬಾರಿಯ ರಾಹುಲ ಗಾಂಧಿ ಕೋಲಾರಕ್ಕೆ ಭೇಟಿ ನೀಡುತ್ತಿರುವುದು ಮಹತ್ವ ಪಡೆದಿದೆ.
2019ರ ಲೋಕಸಭಾ ಚುನಾವಣೆ ವೇಳೆ ಕೋಲಾರದಲ್ಲಿ ರಾಹುಲ್‌ ಗಾಂಧಿ ಅವರು ಎಲ್ಲ ಕಳ್ಳರಿಗೆ ಮೋದಿ ಎಂಬ ಉಪನಾಮ ಯಾಕೆ ಇರುತ್ತದೆ ಎಂದು ಹೇಳಿದ್ದರು. ಕೋಲಾರ ಲೋಕಾಸಭಾ ಕ್ಷೇತ್ರದಿಂದ ಕಾಂಗ್ರೆಸ್​ ಅಭ್ಯರ್ಥಿಯಾಗಿದ್ದ ಕೆ.ಎಚ್​.ಮುನಿಯಪ್ಪ ಪರ ಪ್ರಚಾರದ ವೇಳೆ ರಾಹುಲ್​ ಗಾಂಧಿ ಅಂದು ಎಐಸಿಸಿ ಅಧ್ಯಕ್ಷರಾಗಿದ್ದ ರಾಹುಲ್‌ ಮಾತನಾಡಿದ್ದರು. ಆಗ ತಮ್ಮ ಭಾಷಣದ ವೇಳೆಯಲ್ಲಿ ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಇವರೆಲ್ಲರ ಸರ್ ನೇಮ್ ಒಂದೇ ಆಗಿದ್ದು, ಯಾಕೆ ಎಲ್ಲ ಕಳ್ಳರು ಒಂದೇ ಉಪನಾಮ ಹೊಂದಿದ್ದಾರೆ ಎಂದು ಲೇವಡಿ ಮಾಡಿದ್ದರು.
ರಾಹುಲ್‌ ಗಾಂಧಿ ಈ ಹೇಳಿಕೆ ಆಕ್ಷೇಪಿಸಿ ಗುಜರಾತ್‌ನ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಪೂರ್ಣೇಶ ಮೋದಿ ರಾಹುಲ್‌ ಗಾಂಧಿ ಮಾಡಿದ ಟೀಕೆ ಇಡೀ ಮೋದಿ ಸಮುದಾಯಕ್ಕೆ ಅವಮಾನ ಮಾಡಿದಂತಾಗಿದೆಸೂರತ್‌ ಮ್ಯಾಜಿಸ್ಟ್ರೇಟ್‌ ಕೋರ್ಟ್‌ನಲ್ಲಿ ಕ್ರಿಮಿನಲ್‌ ಮಾನಷ್ಟ ಮೊಕದ್ದಮೆ ದಾಖಲಿಸಿದ್ದರು. ಎಂದು ನೀಡಿದ್ದರು. ಐಪಿಸಿ ಸೆಕ್ಷನ್‌ಗಳಾದ 499 ಮತ್ತು 500ರ ಅಡಿ (ಮಾನಹಾನಿ) ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆಗಾಗಿ ರಾಹುಲ್‌ ಗಾಂಧಿಯವರು ಮೂರು ಬಾರಿ ಸೂರತ್‌ ಕೋರ್ಟ್‌ಗೆ ಹಾಜರಾಗಿದ್ದರು. ಈಗ ಕೋರ್ಟ್‌ ರಾಹುಲ್‌ ಗಾಂಧಿ ದೋಷಿ ಎಂದು ತೀರ್ಪು ನೀಡಿದ್ದು, 2 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಪ್ರಮುಖ ಸುದ್ದಿ :-   ಎಟಿಎಂಗೆ ಹಣ ತುಂಬಿಸಲು ಬಂದಿದ್ದ ವಾಹನದಿಂದ 50 ಲಕ್ಷ ರೂ. ದರೋಡೆ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement